ಮಹಾಲಕ್ಷ್ಮೀ ಲೇಔಟ್‌ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಘೋಷಣೆ

ಬೆಂಗಳೂರು, ಏಪ್ರಿಲ್ 10; ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ 2023ರ ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಘೋಷಣೆ ಮಾಡಿದೆ. ಏಪ್ರಿಲ್ 13ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಮೇ 10ರಂದು ಚುನಾವಣೆ ನಡೆಯಲಿದೆ. ಚುನಾವಣೆಗೆ ಈಗಾಗಲೇ 93 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಜೆಡಿಎಸ್‌ ಘೋಷಣೆ ಮಾಡಿದೆ.

ಸೋಮವಾರ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ಗೆ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಘೋಷಣೆ ಮಾಡಿದ್ದಾರೆ. ಕುಮಾರಸ್ವಾಮಿ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡ ವೈದ್ಯರಾದ ಪ್ರಸನ್ನ ಅವರು 2023ರ ಚುನಾವಣೆಗೆ ಪಕ್ಷದ ಅಭ್ಯರ್ಥಿ ಎಂದು ಕುಮಾರಸ್ವಾಮಿ ಪ್ರಕಟಿಸಿದರು.

JDS Announced Candidate For Mahalakshmi Layout Seat

ಮಹಾಲಕ್ಷ್ಮೀ ಲೇಔಟ್‌ ಜೆಡಿಎಸ್‌ ವಶದಲ್ಲಿಯೇ ಇದ್ದ ಕ್ಷೇತ್ರ. 2013, 2018ರ ಚುನಾವಣೆಯಲ್ಲಿ ಜೆಡಿಎಸ್‌ನ ಕೆ. ಗೋಪಾಲಯ್ಯ ಕ್ಷೇತ್ರದಲ್ಲಿ ಗೆದ್ದು ಜೆಡಿಎಸ್ ಬಾವುಟ ಹಾರಿಸಿದ್ದರು. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಇದ್ದಾಗ, ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದವರಲ್ಲಿ ಕೆ. ಗೋಪಾಲಯ್ಯ ಸಹ ಒಬ್ಬರು. ಜೆಡಿಎಸ್ ತೊರೆದು ಬಿಜೆಪಿ ಸೇರಿ ಉಪ ಚುನಾವಣೆಯಲ್ಲಿಯೂ ಗೋಪಾಲಯ್ಯ ಗೆದ್ದರು. ಬಿ. ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿದ್ದಾರೆ.

2018ರ ಚುನಾವಣೆಯಲ್ಲಿ ಕೆ. ಗೋಪಾಲಯ್ಯ 88,218 ಮತಗಳನ್ನು ಪಡೆದು ಜೆಡಿಎಸ್ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. 2019ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲ್ಲುವ ಮೂಲಕ ಹ್ಯಾಟ್ರಿಕ್ ಬಾರಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿಯೂ ಬಿಜೆಪಿಯಿಂದ ಹಾಲಿ ಶಾಸಕರಾದ ಅವರಿಗೆ ಟಿಕೆಟ್ ನೀಡುವ ನಿರೀಕ್ಷೆ ಇದೆ. ಗೋಪಾಲಯ್ಯ ಸೋಲಿಸಬೇಕು ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ತಂತ್ರ ರೂಪಿಸಿವೆ.

hd-kumaraswamy

ಅಭ್ಯರ್ಥಿಗಳು; ಕಾಂಗ್ರೆಸ್ ಪಕ್ಷ ತನ್ನ 42 ಅಭ್ಯರ್ಥಿಗಳ 2ನೇ ಪಟ್ಟಿಯಲ್ಲಿ ಮಹಾಲಕ್ಷ್ಮೀ ಲೇಔಟ್‌ ಕ್ಷೇತ್ರಕ್ಕೆ ಕೇಶವಮೂರ್ತಿ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಸೋಮವಾರ ಜೆಡಿಎಸ್ ಪಕ್ಷ ಪ್ರಸನ್ನ ಅಭ್ಯರ್ಥಿ ಎಂದು ಘೋಷಣೆ ಮಾಡುವ ಮೂಲಕ ಕ್ಷೇತ್ರದ ಚುನಾವಣಾ ಕಣದ ಕಾವು ಹೆಚ್ಚಿಸಿದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸೋಮವಾರ ಸಂಜೆ ಬಿಡುಗಡೆಯಾಗುವ ನಿರೀಕ್ಷೆ ಇದ್ದು, ಕೆ. ಗೋಪಾಲಯ್ಯ ಹೆಸರು ಘೋಷಣೆಯಾಗಲಿದೆಯೇ? ಕಾದು ನೋಡಬೇಕಿದೆ.

ಅಮಾನತುಗೊಂಡಿದ್ದ ಕೆ. ಗೋಪಾಲಯ್ಯ; 2013ರ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಯಾಗಿ ಮಹಾಲಕ್ಷ್ಮೀ ಲೇಔಟ್‌ ಕ್ಷೇತ್ರದಲ್ಲಿ ಗೆದ್ದಿದ್ದ ಕೆ. ಗೋಪಾಲಯ್ಯ 2016ರ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ವಿಪ್ ಉಲ್ಲಂಘನೆ ಮಾಡಿ ಕಾಂಗ್ರೆಸ್ ಪರ ಮತ ಚಲಾವಣೆ ಮಾಡಿ ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿದ್ದರು. ಆದರೆ ಅಮಾನತುಗೊಂಡ 7 ಜೆಡಿಎಸ್ ಶಾಸಕರ ಪೈಕಿ ಕೆ. ಗೋಪಾಲಯ್ಯ ಅಮಾನತು ಮಾತ್ರ ಜೆಡಿಎಸ್ ವಾಪಸ್ ಪಡೆದಿತ್ತು. 2018ರ ಚುನಾವಣೆಯಲ್ಲಿಯೂ ಅವರು ಟಿಕೆಟ್ ಪಡೆಯಲು ಯಶಸ್ವಿಯಾಗಿದ್ದರು.

ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್. ಡಿ. ಕುಮಾರಸ್ವಾಮಿ ಮಹಾಲಕ್ಷ್ಮೀ ಲೇಔಟ್‌ ಕ್ಷೇತ್ರಕ್ಕೆ 450 ಕೋಟಿ ರೂ. ಅನುದಾನವನ್ನು ನೀಡಿದ್ದರು. ಆದರೂ ಸಹ ಕೆ. ಗೋಪಾಲಯ್ಯ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಉಪ ಚುನಾವಣೆಯಲ್ಲಿ ಗೆದ್ದು ಸಚಿವರೂ ಆದರು. ಈ ಬಾರಿಯ ಚುನಾವಣೆಯಲ್ಲಿ ಅವರಿಗೆ ಸೋಲಿನ ರುಚಿ ತೋರಿಸಬೇಕು ಎಂದು ಜೆಡಿಎಸ್ ಬಯಸಿದೆ. ಮತ್ತೊಂದು ಕಡೆ ಕಾಂಗ್ರೆಸ್ ಕ್ಷೇತ್ರ ವಶಕ್ಕೆ ಪಡೆಯಲು ತಂತ್ರ ರೂಪಿಸಿದೆ.

2019ರಲ್ಲಿ ನಡೆದ ಮಹಾಲಕ್ಷ್ಮೀ ಲೇಔಟ್‌ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯ ಕೆ. ಗೋಪಾಲಯ್ಯ 85,889 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ನ ಎಂ. ಶಿವರಾಜು 31,503 ಮತಗಳನ್ನು ಪಡೆದಿದ್ದರು. ಡಾ. ಗಿರೀಶ್ ಕೆ. ನಾಶಿ ಜೆಡಿಎಸ್‌ನಿಂದ ಕಣಕ್ಕಿಳಿದಿದ್ದರು. 23,516 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದಿದ್ದರು.

ಮಹಾಲಕ್ಷ್ಮೀ ಲೇಔಟ್‌ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 2,77,043. ಪುರುಷರು 1,42,462. ಮಹಿಳೆಯರು 1,34,543 ಮತ್ತು ಇತರರು 38.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+