ಅಧಿಕಾರಕ್ಕೆ ಬಂದರೆ ಮಹಾದಾಯಿ ಯೋಜನೆ ಪೂರ್ಣಗೊಳಿಸುವ ಸಂಕಲ್ಪ
ಬೆಂಗಳೂರು: ಜೆಡಿಎಸ್ ತನ್ನ ಪ್ರಣಾಳಿಕೆಯಲ್ಲಿ ಸಾಕಷ್ಟು ರೈತಪರ ಯೋಜನೆಗಳನ್ನ ಘೋಷಿಸಿದ್ದು, ಈ ಪೈಕಿ ರಾಜ್ಯದಲ್ಲಿ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಸಂಕಲ್ಪ ಮಾಡಿದಂತಿದೆ. ಅದರಲ್ಲೂ ಮಹಾದಾಯಿ, ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸುವ ಬಗ್ಗೆ ಜೆಡಿಎಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಆಶ್ವಾಸನೆ ನೀಡಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.
ಮಹಾದಾಯಿ ಯೋಜನೆಯಿಂದ ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ ಸಾಕಷ್ಟು ಪ್ರಯೋಜನ ಆಗಲಿದೆ. ಸ್ಥಳೀಯರಿಗೆ ಕುಡಿಯುವ ನೀರು ಒದಗಿಸಲು ಯೋಜನೆ ಅತ್ಯಗತ್ಯವಾಗಿದೆ. ಇದೇ ವಿಚಾರ ಮುಂದಿಟ್ಟುಕೊಂಡು ಜೆಡಿಎಸ್ ಪ್ರಣಾಳಿಕೆಯಲ್ಲಿ ಮಹಾದಾಯಿ ಯೋಜನೆ ಬಗ್ಗೆ ಭರವಸೆ ನೀಡಲಾಗಿದೆ. ಹಾಗಾದರೆ ಮಹಾದಾಯಿ ಯೋಜನೆ ವಿಚಾರವಾಗಿ ಪ್ರಣಾಳಿಕೆಯಲ್ಲಿ ಜೆಡಿಎಸ್ ನೀಡಿರುವ ಭರವಸೆ ಏನು? ಬನ್ನಿ ತಿಳಿಯೋಣ.

20 ಲಕ್ಷ ಜನತೆಗೆ ಕುಡಿಯುವ ನೀರು
ಮಹಾದಾಯಿ ಯೋಜನೆ ಬಗ್ಗೆ ಜೆಡಿಎಸ್ ತನ್ನ ಪ್ರಣಾಳಿಕೆಯಲ್ಲಿ ಹೀಗೆ ಪ್ರಸ್ತಾಪಿಸಿದೆ, ಈ ಯೋಜನೆ ಅಡಿ ಅವಳಿ ನಗರಗಳಾದ ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿ ವಾಸಿಸುವ 20 ಲಕ್ಷ ಜನತೆಗೆ ಕುಡಿವ ನೀರಿಗಾಗಿ ಮಹಾದಾಯಿ ನದಿ ಪಾತ್ರದಿಂದ ಮಲಪ್ರಭಾ ನದಿಯ ಉಪನದಿ ಪಾತ್ರಕ್ಕೆ ತಿರುಗಿಸುವ ಯೋಜನೆ. ಮಹಾದಾಯಿ ಜಲವಿವಾದ ನ್ಯಾಯಮಂಡಳಿ ರಾಜ್ಯಕ್ಕೆ 13.42 TMC ನೀರನ್ನು ಹಂಚಿಕೆ ಮಾಡಿದ್ದು, ಅದರಂತೆ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ.
ಮಹಾದಾಯಿ ಯೋಜನೆಯ ವಿಸ್ತೃತ ವರದಿಗೆ ಕೇಂದ್ರ ಜಲಶಕ್ತಿ ಮತ್ತು ಪರಿಸರ ಮಂತ್ರಾಲಯಗಳಿಂದ ಅಗತ್ಯವಿರುವ ಅನುಮತಿ ಬಾಕಿ ಇವೆ. ಯೋಜನೆಗೆ ಅಗತ್ಯವಿರುವ ಅನುಮತಿ ಪಡೆದು, ಅನುದಾನ ನೀಡಿ ತ್ವರಿತವಾಗಿ ಕಾಮಗಾರಿ ಪ್ರಾರಂಭಿಸಲಾಗುವುದು ಎಂಬ ಭರವಸೆಯನ್ನ ಜೆಡಿಎಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿದೆ. ಈ ಮೂಲಕ ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕುಡಿವ ನೀರಿನ ಸಮಸ್ಯೆ ಬಗೆಹರಿಸುವ ಆಶ್ವಾಸನೆ ನೀಡಲಾಗಿದೆ. ಉತ್ತರ ಕರ್ನಾಟಕ ಭಾಗದ ಕೃಷ್ಣಾ ಮೇಲ್ದಂಡೆ ಯೋಜನೆ ಜೊತೆಗೆ ಮಹಾದಾಯಿ ಯೋಜನೆಯ ಬಗ್ಗೆಯೂ ಜೆಡಿಎಸ್ ಪ್ರಣಾಳಿಕೆಯಲ್ಲಿ ಪಸ್ತಾಪ ಮಾಡಲಾಗಿದೆ.
ವಿಜಯಪುರ, ಬಾಗಲಕೋಟೆ, ಕಲಬುರಗಿಗೆ ಬಂಪರ್!
ಕೃಷ್ಣಾ ಜಲವಿವಾದ ನ್ಯಾಯಮಂಡಳಿಯಿಂದ ಕೃಷ್ಣಾ ಮೇಲ್ದಂಡೆ ಯೋಜನೆಗೆ 303 TMC ಹಂಚಿಕೆಯಾಗಿದೆ. ಇದರಲ್ಲಿ ಸ್ಕೀಮ್ -A ಅಡಿಯಲ್ಲಿ 173 TMC ಮತ್ತು ಸ್ಕೀಮ್ -B ಅಡಿ 130 TMC ನೀರು ಹಂಚಿಕೆ ಮಾಡಲಾಗಿದೆ. ಒಟ್ಟು 303 TMC ನೀರು ರಾಜ್ಯಕ್ಕೆ ಸಿಕ್ಕಿದೆ. ಹೀಗೆ ಸ್ಕೀಮ್-A ಅಡಿ ಹಂಚಿಕೆಯಾಗಿರುವ 173 TMC ನೀರನ್ನು ಬಳಸಿಕೊಂಡು ಬರಪೀಡಿತ ಜಿಲ್ಲೆಗಳಾದ ವಿಜಯಪುರ, ಬಾಗಲಕೋಟೆ, ಕಲಬುರಗಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಒಟ್ಟು 16 ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸುವ ಆಶ್ವಾಸನೆ ನೀಡಿದೆ ಜೆಡಿಎಸ್. ಈ ಯೋಜನೆಗೆ ಇಲ್ಲಿಯವರೆಗೆ ₹30,000 ಕೋಟಿ ವೆಚ್ಚಮಾಡಲಾಗಿದೆ ಎಂಬ ಮಾಹಿತಿ ನೀಡಲಾಗಿದೆ.

ಗ್ರಾಮಗಳ ರಕ್ಷಣೆಗೆ ಕ್ರಮದ ಭರವಸೆ
ಇನ್ನು ಸ್ಕೀಮ್-B ಅಡಿಯಲ್ಲಿ ರಾಜ್ಯಕ್ಕೆ ಸಿಕ್ಕಿರುವ 130 TMC ನೀರನ್ನು ಬಳಸಿಕೊಂಡು ಒಟ್ಟಾರೆ 14 ಲಕ್ಷ ಎಕರೆಗೆ ನೀರಾವರಿ ಕಲ್ಪಿಸುವ ಉದ್ದೇಶವನ್ನು ಜೆಡಿಎಸ್ ತಿಳಿಸಿದೆ. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅಡಿಯಲ್ಲಿ 20 ಗ್ರಾಮಗಳು ಮುಳುಗಡೆ ಆಗುತ್ತಿದ್ದು, ಈ ಗ್ರಾಮಗಳ ಸ್ಥಳಾಂತರ ಮತ್ತು ಗ್ರಾಮಸ್ಥರಿಗೆ ಪುನರ್ವಸತಿ ಕೇಂದ್ರಗಳ ನಿರ್ಮಾಣಕ್ಕೆ ಆದ್ಯತೆ ನೀಡುವ ಆಶ್ವಾಸನೆ ಜೆಡಿಎಸ್ ಪ್ರಣಾಳಿಕೆಯಲ್ಲಿ ನೀಡಲಾಗಿದೆ.
ಒಟ್ಟಾರೆ ಚುನಾವಣೆಗೆ ಇನ್ನೇನು ಕೆಲವೇ ದಿನ ಬಾಕಿ ಇರುವಾಗ ಜೆಡಿಎಸ್ ಪ್ರಣಾಳಿಕೆ ರಿಲೀಸ್ ಮಾಡಿದೆ. ಈ ಮೂಲಕ JDS ಅಧಿಕಾರಕ್ಕೆ ಬಂದರೆ ರೈತಪರ ಯೋಜನೆಗಳ ಜೊತೆಗೆ ನಗರಗಳ ಅಭಿವೃದ್ಧಿಗೂ ಒತ್ತು ನೀಡುತ್ತದೆ ಎಂಬ ಆಶ್ವಾಸನೆ ನೀಡಿದೆ. ಆದರೆ ಈ ಆಶ್ವಾಸನೆಗಳು ಮತದಾರ ಪ್ರಭುವಿನ ಮೇಲೆ ಯಾವ ರೀತಿ ಪ್ರಭಾವ ಬೀರಲಿದೆ ಎಂಬುದನ್ನ ಕಾದು ನೋಡಬೇಕಿದೆ. ಮೇ 10ರಂದು ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಕೂಡ ಪ್ರಕಟವಾಗಲಿದೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications