ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸುವ ಮಾತುಕೊಟ್ಟ ಜೆಡಿಎಸ್!
ಬೆಂಗಳೂರು: ಬಿಜೆಪಿ & ಕಾಂಗ್ರೆಸ್ ವಿರುದ್ಧ ಡಿಫರೆಂಟ್ ಸ್ಟ್ರಾಟಜಿ ಪ್ಲೇ ಮಾಡಲು ಜೆಡಿಎಸ್ ಮುಂದಾಗಿದೆ. ಹೀಗಾಗಿ ಕಂಪ್ಲೀಟ್ ರೈತಪರ ಪ್ರಣಾಳಿಕೆ ಬಿಡುಗಡೆ ಮಾಡದೆ, ನಗರಗಳ ಅಭಿವೃದ್ಧಿ ಜೊತೆ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಭರವಸೆ ನೀಡಿದೆ JDS. ಆದರೆ ನೀರಾವರಿಗೆ ಪ್ರಥಮ ಆದ್ಯತೆ ನೀಡಿ, ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸುವ ಭರವಸೆ ನೀಡಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಎತ್ತಿನಹೊಳೆ (Yettynahole) ಯೋಜನೆಯಿಂದ ಹಾಸನ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳ ಒಟ್ಟು 8864 ಕೆರೆಗಳನ್ನು ತುಂಬಿಸಿ ಕುಡಿಯುವ ನೀರು ಒದಗಿಸುವ ಯೋಜನೆ ಇದೆ. ಹೀಗಾಗಿ ಈ ಭಾಗದ ಜನರನ್ನು ಗಮನದಲ್ಲಿ ಇರಿಸಿಕೊಂಡು ದಳಪತಿಗಳು ಪ್ರಣಾಳಿಕೆಯಲ್ಲಿ ಆಶ್ವಾಸನೆ ನೀಡಿದ್ದಾರೆ. ಹಾಗಾದರೆ ಜೆಡಿಎಸ್ ಪ್ರಣಾಳಿಕೆಯಲ್ಲಿ ಈ ಯೋಜನೆ ಬಗ್ಗೆ ಏನೆಲ್ಲಾ ಪ್ರಸ್ತಾಪ ಮಾಡಲಾಗಿದೆ? ಎಂಬುದನ್ನ ಮುಂದೆ ತಿಳಿಯೋಣ.

ರಾಜ್ಯದ ಮೂಲೆ ಮೂಲೆಗೂ ಯೋಜನೆ!
ಅಂದಹಾಗೆ ಜೆಡಿಎಸ್ ತನ್ನ ಪ್ರಣಾಳಿಕೆಯಲ್ಲಿ ಉತ್ತರ ಕರ್ನಾಟಕದ ರೈತರಿಗೆ ಅನುಕೂಲ ಮಾಡಿಕೊಡಲು ಕೃಷ್ಣಾ ಮೇಲ್ದಂಡೆ ಯೋಜನೆ ಹಾಗೂ ಕುಡಿಯುವ ನೀರಿನ ಪೂರೈಕೆಗೆ ಮಹಾದಾಯಿ ಯೋಜನೆಯ ಬಗ್ಗೆ ಭರವಸೆ ನೀಡಿದೆ. ಇದರ ಜೊತೆಗೆ ಭದ್ರಾ ಮೇಲ್ದಂಡೆ ಯೋಜನೆ ಮೂಲಕ ಮಧ್ಯ ಕರ್ನಾಟಕದ ರೈತರಿಗೂ ಭರವಸೆ ನೀಡಿದೆ. ಇನ್ನು ಎತ್ತಿನಹೊಳೆ ಯೋಜನೆ ಮೂಲಕ ದಕ್ಷಿಣ ಕರ್ನಾಟಕದ ಜನರಿಗೆ ಕುಡಿಯುವ ನೀರಿನ ಪೂರೈಕೆ ಬಗ್ಗೆ ಆಶ್ವಾಸನೆ ನೀಡಿದೆ ಜೆಡಿಎಸ್. ಆ ಬಗ್ಗೆ ವಿವರಣೆಯನ್ನು ಮುಂದೆ ನೀಡಲಾಗಿದೆ.
ಒಟ್ಟಾರೆ 24 ಟಿಎಂಸಿ ನೀರು
ಜೆಡಿಎಸ್ ಪ್ರಣಾಳಿಕೆಯಲ್ಲಿ ಎತ್ತಿನಹೊಳೆ ಯೋಜನೆ ಬಗ್ಗೆ ಪ್ರಸ್ತಾಪ ಮಾಡಿದಂತೆ, ಇದು ಸಂಪೂರ್ಣ ಕುಡಿಯುವ ನೀರಿನ ಯೋಜನೆ. ಪಶ್ಚಿಮ ಘಟ್ಟದಲ್ಲಿ ಉದಯಿಸಿ, ಪಶ್ಚಿಮಾಭಿ ಮುಖವಾಗಿ ಹರಿದು ಅರಬ್ಬೀ ಸಮುದ್ರ ಸೇರುವ ಎತ್ತಿನಹೊಳೆ ಜಲಸಮೂಹದಿಂದ 24 TMC ನೀರನ್ನು ಮೇಲೆತ್ತಿ ಪೂರ್ವಕ್ಕೆ ತಿರುಗಿಸಿ ಅತ್ಯಂತ ಜಲಕ್ಷಾಮದಿಂದ ಸದಾಕಾಲ ಬಳಲುವ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ 527 ಕೆರೆಗಳನ್ನು ತುಂಬಿಸುವ ಯೋಜನೆ.
ರಾಜಧಾನಿ ಬೆಂಗಳೂರಿಗೂ ಉಪಯೋಗ
ಪಶ್ಚಿಮ ಘಟ್ಟದಲ್ಲಿರುವ ಸಕಲೇಶಪುರದ ಎತ್ತಿನಹೊಳೆಯಿಂದ ನೀರನ್ನು ಎತ್ತಿ ಗುರುತ್ವಾಕರ್ಷಣ ಕಾಲುವೆ ಮುಖೇನ ಹಾಸನ ಮತ್ತು ತುಮಕೂರು ಜಿಲ್ಲೆಗಳ ಮುಖೇನ ಹಾದು ಕೊರಟಗೆರೆ ತಾಲ್ಲೂಕಿನಲ್ಲಿ ನಿರ್ಮಿಸಿರುವ ಬೈರಗೊಂಡಲು ಜಲಾಶಯಕ್ಕೆ ನೀರು ಬಿಡಲಾಗುತ್ತದೆ. ಈ ಯೋಜನೆ ಅಡಿ ಹಾಸನ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಲ್ಲಿನ ಒಟ್ಟು 8864 ಕೆರೆಗಳನ್ನು ತುಂಬಿಸುವ ಹಾಗೂ ತಿಪ್ಪಗೊಂಡನಹಳ್ಳಿ ಜಲಾಶಯ ಮತ್ತು ಹೆಸರಘಟ್ಟ ಜಲಾಶಯಗಳಿಗೆ ನೀರು ತುಂಬಿಸುವ ಯೋಜನೆ ಇದೆ.

4 ವರ್ಷದಲ್ಲಿ ಪೂರ್ಣಗೊಳಿಸುವ ಭರವಸೆ
ಈ ಯೋಜನೆಗೆ ಇದುವರೆಗೂ 11500 ಕೋಟಿ ರೂ.ಗಳು ವೆಚ್ಚವಾಗಿದ್ದು, ಯೋಜನೆಯನ್ನು ಪೂರ್ಣಗೊಳಿಸಲು ಇನ್ನೂ 12500 ಕೋಟಿ ರೂ.ಗಳ ಅವಶ್ಯಕತೆ ಇರುತ್ತದೆ. ಯೋಜನಾ ವಿನ್ಯಾಸ ಹಲವು ಬಾರಿ ಮಾರ್ಪಡಿಸಲಾಗಿದೆ ಮತ್ತು ಯೋಜನೆ ಉದ್ದೇಶ ವಿಸ್ತರಿಸಲಾಗಿದೆ. ಆದ್ದರಿಂದ ಮೂಲ ಉದ್ದೇಶಕ್ಕೆ ಧಕ್ಕೆ ಇಲ್ಲದೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಜನತೆಯ ಅಶೋತ್ತರಗಳನ್ನು ಸಫಲಗೊಳಿಸಲು ಪ್ರತಿ ವರ್ಷ ಈ ಯೋಜನೆಗೆ 3 ಸಾವಿರ ಕೋಟಿ ರೂ.ಗಳ ಅನುದಾನ ಒದಗಿಸಿ ಮುಂದಿನ 4 ವರ್ಷಗಳಲ್ಲಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದೆ ಜೆಡಿಎಸ್.
ಒಟ್ಟಾರೆ ಚುನಾವಣೆಗೆ ಇನ್ನೇನು ಕೆಲವೇ ದಿನ ಬಾಕಿ ಇರುವಾಗ ಜೆಡಿಎಸ್ ಪ್ರಣಾಳಿಕೆ ರಿಲೀಸ್ ಮಾಡಿದೆ. ಈ ಮೂಲಕ JDS ಅಧಿಕಾರಕ್ಕೆ ಬಂದರೆ ರೈತಪರ ಯೋಜನೆಗಳ ಜೊತೆಗೆ ನಗರಗಳ ಅಭಿವೃದ್ಧಿಗೂ ಒತ್ತು ನೀಡುತ್ತದೆ ಎಂಬ ಆಶ್ವಾಸನೆ ನೀಡಿದೆ. ಆದರೆ ಈ ಆಶ್ವಾಸನೆಗಳು ಮತದಾರ ಪ್ರಭುವಿನ ಮೇಲೆ ಯಾವ ರೀತಿ ಪ್ರಭಾವ ಬೀರಲಿದೆ ಎಂಬುದನ್ನ ಕಾದು ನೋಡಬೇಕಿದೆ. ಮೇ 10ರಂದು ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಕೂಡ ಪ್ರಕಟವಾಗಲಿದೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications