ಜಯನಗರ, ಆರ್.ಆರ್.ನಗರದಲ್ಲೂ ಜೆಡಿಎಸ್‌, ಕಾಂಗ್ರೆಸ್ ಮೈತ್ರಿ!

ಬೆಂಗಳೂರು, ಮೇ 20 : ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಈ ಮೈತ್ರಿ ಜಯನಗರ ಮತ್ತು ರಾಜರಾಜೇಶ್ವರಿ ನಗರ ಚುನಾವಣೆಯಲ್ಲಿಯೂ ಮುಂದುವರೆಯುವ ಸಾಧ್ಯತೆ ಇದೆ.

ವಿಧಾನಸಭೆ ಚುನಾವಣೆಯಲ್ಲಿ 78 ಸ್ಥಾನ ಪಡೆದಿರುವ ಕಾಂಗ್ರೆಸ್‌, 38 ಸ್ಥಾನಗಳಿಸಿರುವ ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡುತ್ತಿವೆ. ಮೇ 23ರಂದು ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ಮೈತ್ರಿಯನ್ನು ಬೆಂಗಳೂರಿನ ಜಯನಗರ ಮತ್ತು ರಾಜರಾಜೇಶ್ವರಿ ನಗರ ಚುನಾವಣೆಯಲ್ಲಿಯೂ ಮುಂದುವರೆಸಲು ನಾಯಕರು ಚರ್ಚೆ ಆರಂಭಿಸಿದ್ದಾರೆ. ಮೇ 28ರಂದು ಆರ್.ಆರ್.ನಗರ, ಜೂನ್ 11ರಂದು ಜಯನಗರದ ಚುನಾವಣೆ ನಡೆಯಲಿದೆ.

JDS Congress alliance to continue in Jayanagar, Rajarajeshwari Nagar

ಲೆಕ್ಕಾಚಾರವೇನು? : ಜಯನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ. ಜೆಡಿಎಸ್ ಜಯನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಿಸಲಿದೆ.

ಬಿಜೆಪಿ ಅಭ್ಯರ್ಥಿ ಬಿ.ಎನ್.ವಿಜಯಕುಮಾರ್ ಅವರ ನಿಧನದಿಂದಾಗಿ ಜಯನಗರದ ಚುನಾವಣೆ ಮುಂದೂಡಲಾಗಿದೆ. ಜೂನ್ 11ರಂದು ಚುನಾವಣೆ ನಡೆಯಲಿದ್ದು, ಜೂನ್ 16ರಂದು ಫಲಿತಾಂಶ ಪ್ರಕಟವಾಗಿದೆ.

ರಾಜರಾಜೇಶ್ವರಿ ನಗರ : 9 ಸಾವಿರಕ್ಕೂ ಅಧಿಕ ವೋಟರ್ ಐಡಿ ಪತ್ತೆಯಾದ ಹಿನ್ನಲೆಯಲ್ಲಿ ರಾಜರಾಜೇಶ್ವರಿ ನಗರದ ಚುನಾವಣೆಯನ್ನು ಮೂಂದೂಡಲಾಗಿದೆ. ಮೇ 28ರಂದು ಚುನಾವಣೆ ನಡೆಯಲಿದೆ.

ರಾಜರಾಜೇಶ್ವರಿ ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎಚ್.ರಾಮಚಂದ್ರ, ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ. ಇಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಾಂಗ್ರೆಸ್ ಬೆಂಬಲಿಸುವ ಸಾಧ್ಯತೆ ಇದೆ. ಬಿಜೆಪಿಯಿಂದ ಮುನಿರಾಜು ಗೌಡ ಕಣದಲ್ಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+