ಲೋಕಸಭೆ ದೋಸ್ತಿ ಕಸರತ್ತಿಗೆ ಮಾರ್ಚ್ 11ರಂದು ತೆರೆ?
Recommended Video

ಬೆಂಗಳೂರು, ಮಾರ್ಚ್ 7: ಮುಂಬರುವ ಲೋಕಸಭೆಯಲ್ಲಿ ಜೆಡಿಎಸ್‌ಗೆ ಕೊನೆಗೂ ಕಾಂಗ್ರೆಸ್ ಎಷ್ಟು ಸ್ಥಾನ ಮೀಸಲಿಡಲಿದೆ ಎನ್ನುವ ಗೊಂದಲಕ್ಕೆ ಮಾರ್ಚ್ 11 ರಂದು ತೆರೆ ಬೀಳಲಿದೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ 10 ಟಿಕೆಟ್ ನೀಡುವಂತೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರ ಬಳಿ ಮನವಿ ಮಾಡಿದ್ದರು.
ರಾಜ್ಯದ ಮೈತ್ರಿ ಸರ್ಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಮಾಡಿಕೊಳ್ಳುವ ಬಗ್ಗೆ ನಿರ್ಧರಿಸಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಬುಧವಾರ ನಡೆಸಿದ ಮೊದಲ ಸುತ್ತಿನ ಮಾತುಕತೆ ಅಪೂರ್ಣವಾಗಿದೆ.

ಜೆಡಿಎಸ್ ವರಿಷ್ಠರ ಈ ಬೇಡಿಕೆಯ ವಿವರಗಳನ್ನು ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕತ್ವಕ್ಕೆ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಗುರುವಾರ ಬೆಂಗಳೂರಿನಲ್ಲಿ ನಡೆಯಲಿರುವ ಅಂತಿಮ ಸಭೆಯಲ್ಲಿ ಮತ್ತೊಮ್ಮೆ ಚರ್ಚೆಯಾಗಲಿದೆ.
ಇದಾದ ಬಳಿಕ ಮಾರ್ಚ್ 11ರಂದು ಸೋಮವಾರ ನವದೆಹಲಿಯಲ್ಲಿ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಸುವ ಸಾಧ್ಯತೆ ಇದ್ದು ಈ ಸಭೆಯಲ್ಲಿ ಜೆಡಿಎಸ್ ಬೇಡಿಕೆಗಳ ಬಗ್ಗೆ ಕಾಂಗ್ರೆಸ್ ತನ್ನ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಕಾಂಗ್ರೆಸ್‌ನ ಉನ್ನತ ಮೂಲಗಳು ತಿಳಿಸಿವೆ.












Click it and Unblock the Notifications