ಶಂಕರಮೂರ್ತಿಗೆ ಜೆಡಿಎಸ್ ಬೆಂಬಲ, ಶಾಸಕರಿಗೆ ವಿಪ್ ಜಾರಿ
ಬೆಂಗಳೂರು, ಜೂನ್ 14: ಗುರುವಾರ ವಿಧಾನಪರಿಷತ್ ನಲ್ಲಿ ನಡೆಯಲಿರುವ ಅವಿಶ್ವಾಸ ನಿರ್ಣಯದ ಮೇಲಿನ ಮತದಾನದಲ್ಲಿ ಸಭಾಪತಿ ಡಿ.ಎಚ್ ಶಂಕರಮೂರ್ತಿಯವರನ್ನು ಬೆಂಬಲಿಸಲು ಜೆಡಿಎಸ್ ನಿರ್ಧರಿಸಿದೆ.
ನಾಳೆ ಪ್ರಶ್ನೋತ್ತರ ವೇಳೆ ಹಾಗೂ ಶೂನ್ಯವೇಳೆಯ ಬಳಿಕ ಅವಿಶ್ವಾಸ ನಿರ್ಣಯದ ಮೇಲೆ ಮತದಾನ ನಡೆಯಲಿದೆ. ಕಾಂಗ್ರೆಸ್ ನ ಒಬ್ಬರು ಸದಸ್ಯರಿಗೆ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆ ನಡೆಸಲು ಅವಕಾಶ ನೀಡಲಾಗಿದೆ. ಇದಾದ ನಂತರ ಮತದಾನ ನಡೆಯಲಿದೆ.

'ಬಿಜೆಪಿ ಜತೆ ಮೈತ್ರಿ ಮುಂದುವರಿಸಬೇಕು ಎಂದು ನಿರ್ಧರಿಸಿದ್ದೇವೆ,' ಎಂದು ಕುಮಾರಸ್ವಾಮಿ ಬೆಂಬಲ ನೀಡಿದ್ದಕ್ಕೆ ಸ್ಪಷ್ಟನೆ ನೀಡಿದ್ದಾರೆ.
ಪಕ್ಷದ ಎಲ್ಲಾ 13 ಶಾಸಕರಿಗೆ ಈ ಸಂಬಂಧ ವಿಪ್ ಜಾರಿಗೊಳಿಸಲಾಗಿದ್ದು ಮತದಾನದ ವೇಳೆ ಕಡ್ಡಾಯ ಹಾಜರಿರುವಂತೆ ಸೂಚನೆ ನೀಡಿದೆ.












Click it and Unblock the Notifications