ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನೆಲಮಂಗಲದಲ್ಲಿ ಜೆಡಿಎಸ್ ಜಲಧಾರೆ ಕಾರ್ಯಕ್ರಮ: ಎಚ್‌ಡಿಕೆ ಭಾವುಕ ಭಾಷಣ

|
Google Oneindia Kannada News

ಬೆಂಗಳೂರು, ಮೇ13: ನೆಲಮಂಗಲ ಸಮೀಪ ಜೆಡಿಎಸ್ ಪಕ್ಷ ತನ್ನ ಮಹತ್ವಾಕಾಂಕ್ಷಿ ಯೋಜನೆ ಜಲಧಾರೆ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಿತು. ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು, ಪ್ರಾದೇಶಿಕ ಪಕ್ಷದ ತಾಕತ್ ಅನ್ನು ತೋರಿಸುವುದು ಜೆಡಿಎಸ್ ಅನ್ನು ಕಡೆಗಣಿಸುವಂತಿಲ್ಲ ಎಂಬ ಸಂದೇಶವನ್ನು ರಾಷ್ಟ್ರ ಮತ್ತು ರಾಜ್ಯಕ್ಕೆ ಸಾರುವ ಕೆಲಸವನ್ನು ಮಾಡಿದರು. ಜನತೆಗಾಗಿ ಪ್ರಾಣವನ್ನು ಲೆಕ್ಕಿಸುವುದಿಲ್ಲ ಎಂದು ಎಚ್‌ಡಿಕೆ ಭಾವುಕರಾದರು.

ಮೈತ್ರಿ ಸರ್ಕಾರದ ಸಹವಾಸ ಬೇಡ ಬದಲಾಗಿ ಸ್ವತಂತ್ರ ಸರ್ಕಾರ ತರಲು ಸಂಕಲ್ಪ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್ .ಡಿ.ಕುಮಾರಸ್ವಾಮಿ ಕರೆ ನೀಡಿದ್ದಾರೆ.

ಜೆಡಿಎಸ್ ನ ಪಕ್ಷ ಕರ್ನಾಟಕದ ಪ್ರಾದೇಶಿಕ ಪಕ್ಷ ನೀರಿನ ಮಹತ್ವ. ಕೃಷಿ ಮತ್ತು ಕುಡಿಯುವ ನೀರಲ್ಲಿ ರಾಜ್ಯದ ಪಾಲನ್ನು ತೆಗೆದುಕೊಳ್ಳಬೇಕಾದರೆ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಜೆಡಿಎಸ್ ನಿಂದ ಮಾತ್ರವೇ ರಾಜ್ಯದ ಅಭಿವೃದ್ಧಿ ಸಾಧ್ಯ ಎಂದು ಜನತೆಗೆ ಸ್ಪಷ್ಟವಾದ ಸಂದೇಶವನ್ನು ನೀಡಿದರು.

Jds jaladhare programme:HDk Emotional speech

ಜೆಡಿಎಸ್ ಮುಗಿದೇ ಹೋಯಿತು ಎಂದವರಿಗೆ ತಿರುಗೇಟು

ಜನತಾ ಜಲಧಾರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಜೂನ್, ಜುಲೈ ತಿಂಗಳಲ್ಲಿ ಮತ್ತೊಂದು ಸುತ್ತಿನ ರಥಯಾತ್ರೆ ನಡೆಸುತ್ತೇನೆ ಎಂದು ಘೋಷಿಸಿದರು.ಹಳ್ಳಿ, ಹಳ್ಳಿಗಳಲ್ಲಿ ರಥಯಾತ್ರೆ ನಡೆಸುತ್ತೇವೆ. ನಾನೇ ಜನರ ಮುಂದೆ ಬರುತ್ತೇನೆ ಎಂದರು.ನಮ್ಮ ಪಕ್ಷದಿಂದಲೇ ಬೆಳೆದು ಹೋದವರು ಜೆಡಿಎಸ್ ಮುಗಿದೇ ಹೋಯಿತು ಎಂದಿದ್ದರು. ಆದರೆ ಜನತಾ ಜಲಧಾರೆ ಸಮಾವೇಶ ಅವರಿಗೆ ಉತ್ತರ ಕೊಟ್ಟಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಸ್ವತಂತ್ರ ಅಧಿಕಾರ ಇರಲಿಲ್ಲ

90 ವರ್ಷ ವಯಸ್ಸಿನಲ್ಲೂ ನಾಡಿನ ಜನರಿಗಾಗಿ ದೇವೇಗೌಡರು ಹೋರಾಟ ಮಾಡುತ್ತಿದ್ದಾರೆ. ರಾಜಕೀಯದ ಬೆಳವಣಿಗೆಗಳ ಪರಿಣಾಮವಾಗಿ ನಾನು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿ ಆದೆ. ಆದರೆ ಯಾವುದೇ ಕಾರ್ಯಕ್ರಮ ಕೊಡಲು ಸ್ವತಂತ್ರ ಅಧಿಕಾರ ಇರಲಿಲ್ಲ. ರೈತರ ಸಾಲ ಮನ್ನಾ ಮಾಡಲು ಮುಂದಾದಾಗ ನೋವು ಅನುಭವಿದ್ದು ನನಗೆ ಮಾತ್ರ ಗೊತ್ತು ಎಂದರು. ಯಾವ ಟೀಕೆಗಳಿಗೂ ಹೆದರಬೇಕಿಲ್ಲ. ಹೃದಯದಿಂದ ಜನರ ಕೆಲಸ ಮಾಡಿ ಎಂದು ಸಂಸದ ಪ್ರಜ್ವಲ್ ರೇವಣ್ಣ, ನಿಖಿಲ್ ಕುಮಾರಸ್ವಾಮಿ ಹಾಗೂ ಸೂರಜ್ ರೇವಣ್ಣಗೆ ಸಲಹೆ ನೀಡಿದರು‌ ಎಂದರು.

Jds jaladhare programme:HDk Emotional speech

ನನ್ನ ಕೊನೆಯ ಉಸಿರು ಇರುವವರೆಗೂ ನಿಮಗಾಗಿ ಜೀವನ ಇಟ್ಟಿರುತ್ತೇನೆ

ಜೆಡಿಎಸ್ ನಲ್ಲಿ ಟಿಕೆಟ್ ಸಿಗಬೇಕಾದರೆ ಹಣ ಕೊಡಬೇಕು ಎಂದು ಒಬ್ಬರು ಆರೋಪ ಮಾಡಿದರು. ಆದರೆ ಅನ್ನದಾನಿ ಬಡವರಾದರೂ ಟಿಕೆಟ್ ಕೊಟ್ಟು ಚುನಾವಣಾ ಖರ್ಚನ್ನು ಪಕ್ಷ ಭರಿಸಿದೆ. ದೇವರು ನೋಡ್ತಾನೆ ಎಂಬ ಕನಿಷ್ಠ ತಿಳುವಳಿಕೆ ಬೇಕು ಎಂದರು.ಕೊರೊನಾದಿಂದ ಜೆಡಿಎಸ್ ನಾಯಕರು ಹೊರ ಬಂದಿಲ್ಲ ಅಂತಾ ಇದ್ರು. ಅದಕ್ಕೆ ಕಾರಣ ಕೊರೊನಾದಿಂದ ಆದಂತಹ ಸಾವಿರಾರು ಜನರ ಸಾವು. ನಿಮಗೆ ತೊಂದರೆ ಆಗಬಾರದು ಅಂತ ಕಾರ್ಯಕ್ರಮ ಹಾಕಿಕೊಂಡಿರಲಿಲ್ಲ. ಬಿಜೆಪಿ, ಕಾಂಗ್ರೆಸ್ ನಾಯಕರಷ್ಟು ಅವಸರ ನಮಗೆ ಇರಲಿಲ್ಲ. ಕಳೆದ ತಿಂಗಳಿಂದ ಜಲಧಾರೆ ಕಾರ್ಯಕ್ರಮ ಆರಂಭ ಆಯ್ತು. ಅಂದಿನಿಂದ ಇಂದಿನವರೆಗೆ ನಮಗೆ ಸಾಥ್ ಕೊಟ್ಟಿದ್ದೀರಾ. ಮೈಸೂರಿನಲ್ಲಿ ಒಂದು ಸ್ಥಾನ ಬರಲ್ಲ ಎಂದು ಇಲ್ಲೇ ಬೆಳೆದು ಹೋದವರೇ ಹೇಳಿದರು. ಆದರೆ ಇವತ್ತು ನೀವು ಜಲಧಾರೆ ಸಮಾವೇಶದ ಮೂಲಕ ತೋರಿಸಿದ್ದಿರಾ ಎಂದರು. ನನ್ನ ಕೊನೆಯ ಉಸಿರು ಇರುವವರೆಗೂ ನಿಮಗಾಗಿ ಜೀವನ ಇಟ್ಟಿರುತ್ತೇನೆ. ನಾನು ಈ ಮಣ್ಣಿಗೆ ಹೋಗೋದ್ರೊಳಗೆ ನಿಮ್ಮ ಹೃದಯದಲ್ಲಿ ನನಗೆ ಕೊಡುವ ಸ್ಥಾನ ಒಂದೇ ಎಂದು ಹೇಳಿದರು.

ಕುಡಿಯುವ ನೀರಿನ ವಿಚಾರವಾಗಿ ದೇವೇಗೌಡರು ಸಂಸತ್ ನಲ್ಲಿ ಮಾತನಾಡಿದರೆ ಯಾರು ಬರೋದಿಲ್ಲ ಮಾತಾಡೋಕೆ ಎಂದ ಹೆಚ್ ಡಿಕೆ, ನಾನು ಎರಡು ಬಾರಿ ಸಿಎಂ ಆಗಿದ್ದೇನೆ. ರಾಜಕೀಯದ ಬೆಳವಣಿಗೆಯಲ್ಲಿ ಸಿಎಂ ಆದೆ. ಅನೇಕ ಒತ್ತಡಗಳ ನಡುವೆ ಅಧಿಕಾರ ಮಾಡಿದೆ. ರೈತರ ಸಾಲ ಮನ್ನಾ ಮಾಡುವಾಗಲು ಎಷ್ಟು ಕಷ್ಟ ಪಟ್ಟಿದ್ದೇನೆ ನಮಗೆ ಗೊತ್ತು ಎಂದರು.

Jds jaladhare programme:HDk Emotional speech

ಕೊರೊನಾ ಪರಿಹಾರ ಸರ್ಕಾರ ನೀಡಿಲ್ಲ

ಐದು ಲಕ್ಷ ಕೊರೊನಾದಿಂದ ಸಾವನ್ನಪ್ಪಿದ ಕುಟುಂಬಕ್ಕೆ ಐದು ಲಕ್ಷ ರೂ. ಕೊಡುತ್ತೇವೆ ಅಂದರು. ಆದರೆ, ಇನ್ನೂ ಈ ಸರ್ಕಾರ ಕೊಟ್ಟಿಲ್ಲ. ನಿತ್ಯ ಎಷ್ಟು ಕಷ್ಟ ಪಡ್ತಾ ಇದ್ದೀರಾ ಶಾಲೆ ಫೀಸ್ ಕಟ್ಟಲು, ಆಸ್ಪತ್ರೆಗಳಿಗೆ ಅಂತ ಗೊತ್ತಿದೆ. ನಿತ್ಯ ಸಾಕಷ್ಟು ಜನರನ್ನು ನೋಡ್ತಾ ಇದ್ದೀನಿ. ಪಂಚರತ್ನ ಯೋಜನೆ ಹುಡುಗಾಟಿಕೆಗೆ ಮಾಡಿದ್ದಲ್ಲ. ನಿಮ್ಮಗಳ ಕಷ್ಟಗಳನ್ನು ನೋಡಿಯೇ ಮಾಡಿರೋದು ಎಂದು ಹೇಳಿದರು.

2023 ಕ್ಕೆ ಜನರ ಸಂಕಷ್ಟಕ್ಕೆ ಪರಿಹಾರ ಜನತಾ ದಳ

ಆಗಲೇ ಅಧಿಕಾರ ಬಿಟ್ಟು ದೇವೇಗೌಡರು ಬಂದ್ರು. ಫಿನೀಕ್ಸ್ ನಂತೆ ಎದ್ದು ಬರ್ತೀನಿ ಅಂತ ದೇವೇಗೌಡರು ಹೇಳಿದ್ದರು ಅಂತ ಪೂಜ್ಯರು ಹೇಳಿದ್ರು. ಆ ಫಿನಿಕ್ಸ್ ಕುಮಾರಸ್ವಾಮಿ ಅಂದಿದ್ದರು. ಹೌದು ಧೂಳಿನ ಫಿನಿಕ್ಸ್ ನಂತೆ ಎದ್ದು ಬರ್ತೀವಿ. 2023 ಕ್ಕೆ ಜನರ ಸಂಕಷ್ಟಕ್ಕೆ ಪರಿಹಾರ ಜನತಾ ದಳ ಎಂದರು.

Jds jaladhare programme:HDk Emotional speech

ಯಾರೂ ನಾಯಕರನ್ನು ಸೃಷ್ಟಿ ಮಾಡಲು ಸಾಧ್ಯವಿಲ್ಲ. ನಿಮ್ಮ‌ ದುಡಿಮೆಯೇ ನಾಯಕತ್ವ ರೂಪಿಸುತ್ತದೆ. ನಾನು ಈಗಾಗಲೇ ಎರಡು ಭಾರಿ ಸಿಎಂ ಆಗಿದ್ದೇನೆ. ರಾಜಕೀಯದ ಕೆಲ ಬೆಳವಣಿಗೆಯಿಂದ ಎರಡು ಭಾರಿ ಸಿಎಂ ಆದೆ. ಆದರೆ, ಸ್ವತಂತ್ರವಾದ‌ ಸರ್ಕಾರ ಇರಲಿಲ್ಲ. ಅನುಕಂಪ ಗಿಟ್ಟಿಸಿ ಅಧಿಕಾರ ಪಡೆಯಬೇಕೆಂಬ ಉದ್ದೇಶ ಇಲ್ಲ. ಪಂಚರತ್ನ ಕಾರ್ಯಕ್ರಮದ ಬಗ್ಗೆ ಹುಡುಗಾಟಿಕೆಯಿಂದ ಹೇಳುತ್ತಿಲ್ಲ. ನಾಡಿನ ಪರ ಹೋರಾಟ ಮಾಡುವ ಯಾರಾದರೂ ಇದ್ದರೆ ಅದು ದೇವೇಗೌಡರು ಮಾತ್ರ ಎಂದು ಹೇಳಿದರು.2023 ಕ್ಕೆ ನಾಡಿನ ಜನತೆಗೆ ಜೆಡಿಎಸ್ ಪರಿಹಾರವಾಗಲಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ. ಕುರುಬ ಸೇರಿದಂತೆ ಎಲ್ಲಾ ಹಿಂದುಳಿದ ವರ್ಗಗಳ ಬೆನ್ನಿಗೆ ನಿಲ್ಲುತ್ತೇನೆ. ಐದು ವರ್ಷಗಳಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸದೆ ಇದ್ದರೆ ನಿಮ್ಮ ಮುಂದೆ ಬರುವುದಿಲ್ಲ ಎಂದು ನುಡಿದರು.

ಸಾಮಾನ್ಯ ಕಡು ಬಡವರ ಜೀವನ ಕ್ಕೆ ಮುಡಿಪಾಗಿಡುತ್ತೇನೆ.

ನನಗೆ ನೀವು ಸಹಕಾರ ಕೊಡಿ. 123 ಗುರಿ ಏನಿದೆ ಅದು ಮುಟ್ಟುತ್ತೇನೆ. ಸರ್ವ ಜನಾಂಗದ ಶಾಂತಿಯ ತೋಟ ಶಾಶ್ವತವಾಗಿ ಬದುಕುವ ನಿಟ್ಟಿನಲ್ಲಿ ಈ ಸರ್ಕಾರ ಬರಲೇ ಬೇಕು. ಐದು ವರ್ಷದಲ್ಲಿ ಈ ಕಾರ್ಯಕ್ರಮ ಕೊಡದೇ ಹೋದರೆ, ನಾನು ಎಂದೂ ನಿಮ್ಮ ಮುಂದೆ ಮತ ಕೇಳಲು ಬರಲ್ಲ ಎಂದು ಹೇಳಿದರು.

Jds jaladhare programme:HDk Emotional speech

ಜಲಧಾರೆ ಕಾರ್ಯಕ್ರಮದಲ್ಲಿ ಎಚ್ ಡಿಕೆ ಮಾತು ಚುನಾವಣೆಗೆ ರಣಕಹಳೆ ಎನ್ನುವಂತಿತ್ತು. ಪ್ರಾದೇಶಿಕ ಪಕ್ಷದ ಮಹತ್ವದ ಜೊತೆ 2023ಕ್ಕೆ ಅಧಿಕಾರಕ್ಕೆ ಬರುವ ಸಂಕಲ್ಪವನ್ನು ಕಾರ್ಯಕ್ರಮದಲ್ಲಿ ಮಾಡಲಾಯಿತು.

Recommended Video

Virat Kohli ಔಟ್ ಆದ ಮೇಲೆ ಮಾಡಿದ್ದೇನು | Oneindia Kannada

English summary
HDK delivered a speech at the JDS Jaladhara programme in Nelamangala. And has decided to bring the JDS to power by 2023, Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X