Watch Video: ಟ್ರಾಫಿಕ್ ಪೊಲೀಸ್ ಕಾಲರ್ ಹಿಡಿದು ಹಲ್ಲೆ! ಗೊಟ್ಟಿಗೆರೆಯಲ್ಲಿ JDS ನಾಯಕ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಕರ್ತವ್ಯನಿರತ ಸಂಚಾರ ಪೊಲೀಸ್ ಸಿಬ್ಬಂದಿ ಮೇಲೆ ಜನತಾ ದಳ (ಜಾತ್ಯಾತೀತ -JDS) ರಾಜ್ಯ ಪ್ರಧಾನ ಕಾರ್ಯದರ್ಶಿ ಹಲ್ಲೆ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಕಾನೂನಿಗೆ ಎಲ್ಲರು ಸಮಾನರು ಎಂಬುದನ್ನು ಮರೆತ ಜೆಡಿಎಸ್ ನಾಯಕ ಹಲ್ಲೆ ಮಾಡಿದ ಘಟನೆ ಭಾನುವಾರ ನಡೆದಿದೆ. ಸಂಜೆ ಪೊಲೀಸರು JDS ನಾಯಕನನ್ನು ಬಂಧಿಸಿದ್ದಾರೆ.

ಸಂಚಾರ ಪೊಲೀಸ್ ಸಿಬ್ಬಂದಿಯ ಕಾಲರ್ ಹಿಡಿದು ಹಲ್ಲೆ ಮಾಡಿದ ವ್ಯಕ್ತಿಯನ್ನು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಎಂದು ಗುರುತಿಸಲಾಗಿದೆ. ನಗರದ ಗೊಟ್ಟಿಗೆರೆಯಲ್ಲಿ ಸಂಚಾರಿ ವಿಭಾಗದ ಪೊಲೀಸ್ ಸಿಬ್ಬಂದಿ ಅರುಣ್ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಕರ್ತವ್ಯದ ಭಾಗವಾಗಿ ಅವರು ಜೆಡಿಎಸ್ ನಾಯಕನ ಕಾರು ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ.

JDS Leader Manju Detained

ಪೊಲೀಸ್ ಸಿಬ್ಬಂದಿ ಪ್ರಶ್ನಿಸಿ, ಹಲ್ಲೆ

ಪೊಲೀಸರು ಹೇಳುವ ಪ್ರಕಾರ, ಕಾರು ನಿಲ್ಲಿಸುವಂತೆ ಸೂಚಿಸಿದ ಪೊಲೀಸ್ ಸಿಬ್ಬಂದಿ ಮೇಲೆ ಕೋಪಗೊಂಡಿದ್ದಾರೆ. ನನ್ನ ಗಾಡಿಯನ್ನೇ ನಿಲ್ಲಿಸುತ್ತೀಯಾ ಎಂದು ಮಂಜುನಾಥ್ ಪ್ರಶ್ನಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಅರುಣ್ ಅವರ್ ಕಾಲರ್ ಹಿಡಿದು ಹಲ್ಲೆ ಮಾಡಲಾಗಿದೆ. ಅಲ್ಲದೇ ಟ್ರಾಫಿಕ್‌ ಸಿಬ್ಬಂದಿಯನ್ನು ತಳ್ಳಾಡಿ, ಒದೆಯಲು ಪ್ರಯತ್ನಿಸಿದ್ದರು ಎಂಬುದು ಗೊತ್ತಾಗಿದೆ.

ಇದೇ ವೇಳೆ ಸಾರ್ವಜನಿಕರು ಮಧ್ಯ ಪ್ರವೇಶಿಸಿದ್ದಾರೆ. ಆದರೆ ಮಂಜು ಪೊಲೀಸ್ ಸಿಬ್ಬಂದಿಯನ್ನು ಬಿಟ್ಟಿಲ್ಲ. ಕೆಲವು ನಿಮಿಷ ಜಗಳ ಮುಂದುವರಿದಿದ್ದು, ಅದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರ ವಾಹನ ಸವಾರರ ಮೊಬೈಲ್‌ನಲ್ಲಿ ರೆಕಾರ್ಡ್ ಆಗಿದ್ದು, ಹಲ್ಲೆ ಘಟನೆಯು ವಿಡಿಯೋ ವೈರಲ್ ಆಗುತ್ತಿದೆ.

ಹಳಿಮಾವು ಪೊಲೀಸರಿಂದ ಮಂಜು ಬಂಧನ

ಸದ್ಯ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಲಾಗಿದೆ. ಪೊಲೀಸರು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜು ಅವರನ್ನು ಭಾನುವಾರ ಸಂಜೆಯೇ ಬಂಧಿಸಿದ್ದಾರೆ. ಸದ್ಯ ಘಟನೆ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಸಾರ್ವಜನಿಕರಿಂದ ಆಕ್ರೋಶ

ಕಾನೂನಿನ ಮುಂದೆ ಎಲ್ಲರು ಸಮಾನರು ಎಂಬ ಭಾವನೆ ಮೊದಲು ಜನಪ್ರತಿನಿಧಿಗಳು, ರಾಜಕೀಯದಲ್ಲಿ ಗುರುತಿಸಿಕೊಂಡವರಿಗೆ ಬರಬೇಕು. ಯಾರೇ ಆಗಲಿ ಸಂಚಾರ ನಿಯಮಗಳನ್ನು ಪಾಲಿಸಬೇಕು. ತಡೆದ ಪೊಲೀಸ್ ಸಿಬ್ಬಂದಿ ವಿರುದ್ಧ ದರ್ಪ ಮೆರೆದ ಇಂತವರ ಮೇಲೆ ಮೊದಲು ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+