ವೈಎಸ್‌ವಿ ದತ್ತಗೆ ತೀವ್ರ ಎದೆನೋವು, ಆಸ್ಪತ್ರೆಗೆ ದಾಖಲು
ಬೆಂಗಳೂರು, ಜನವರಿ 24: ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈಎಸ್‌ವಿ.ದತ್ತ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಕಾರಣ ಅವರನ್ನು ನಗರದ ಅಪೊಲೋ ಆಸ್ಪತ್ರೆಗೆ ದಾಖಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಹಿಂದೆಯೇ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇತ್ತು, ಹಾಗಾಗಿ ಸ್ಟಂಟ್ ಅಳವಡಿಸಲಾಗಿತ್ತು. ಇದೇ ಮಂಗಳವಾರ ಆಟೋದಲ್ಲಿ ಜೆಡಿಎಸ್ ಕಚೇರಿ ಕಡೆಗೆ ತೆರಳುವಾಗ ಎದೆ ನೋವು ಕಾಣಿಸಿಕೊಂಡಿದ್ದು, ಶೀಘ್ರವೇ ಅವರನ್ನು ಆಸ್ಪತ್ರೆಗೆ ಕರೆತರಲಾಗಿದೆ.
ಮೂರು ದಿನಗಳಿಂದಲೂ ಅಪೊಲೋ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಅಗತ್ಯ ಚಿಕಿತ್ಸೆಯ ನಂತರ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ದತ್ತ ಅವರಿಗೆ ಸೋಲಾಗಿತ್ತು. ನಂತರ ಇತ್ತೀಚೆಗೆ ಅವರನ್ನು ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿ ದೇವೇಗೌಡ ಅವರು ಆದೇಶ ಹೊರಡಿಸಿದ್ದರು.












Click it and Unblock the Notifications