ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಪ ಚುನಾವಣೆ; ಅಖಾಡಕ್ಕಿಳಿದ ಎಚ್. ಡಿ. ದೇವೇಗೌಡರು

|
Google Oneindia Kannada News

Recommended Video

Deve Gowda enters the grand stage of By Elections | Oneindia Kannada

ಬೆಂಗಳೂರು, ನವೆಂಬರ್ 08 : 15 ಕ್ಷೇತ್ರಗಳ ಉಪ ಚುನಾವಣೆಗೆ ಸೋಮವಾರ ಅಧಿಸೂಚನೆ ಪ್ರಕಟವಾಗಲಿದೆ. ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಉಪ ಚುನಾವಣೆ ಅಖಾಡಕ್ಕಿಳಿದಿದ್ದು, ಅನರ್ಹರನ್ನು ಸೋಲಿಸಲು ತಂತ್ರ ರೂಪಿಸಿದ್ದಾರೆ.

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಿಂದ ಎಚ್. ಡಿ. ದೇವೇಗೌಡರು ಪ್ರಚಾರವನ್ನು ಆರಂಭಿಸಲಿದ್ದಾರೆ. 2018ರಲ್ಲಿ ಜೆಡಿಎಸ್‌ನಿಂದ ಕಣಕ್ಕಿಳಿದು ಗೆದ್ದಿದ್ದ ಕೆ. ಗೋಪಾಲಯ್ಯ ಈಗ ಅನರ್ಹರಾಗಿದ್ದು ಉಪ ಚುನಾವಣೆ ಎದುರಾಗಿದೆ.

ಕೆ. ಗೋಪಾಲಯ್ಯ ವಿರುದ್ಧ ಬಿಜೆಪಿ ಹೈಕಮಾಂಡ್‌ಗೆ ದೂರುಕೆ. ಗೋಪಾಲಯ್ಯ ವಿರುದ್ಧ ಬಿಜೆಪಿ ಹೈಕಮಾಂಡ್‌ಗೆ ದೂರು

ಕೆ. ಗೋಪಾಲಯ್ಯ ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನ ಮಾಡಲು ಜೆಡಿಎಸ್ ನವೆಂಬರ್ 9ರ ಶನಿವಾರ '
ಸ್ವಾಭಿಮಾನಿ ಮತದಾರ' ಎಂಬ ಸಮಾವೇಶವನ್ನು ಆಯೋಜನೆ ಮಾಡಿದೆ. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಯಡಿಯೂರಪ್ಪ ಮುಂದೆ ಕೆ. ಗೋಪಾಲಯ್ಯ ಇಟ್ಟ ಬೇಡಿಕೆ ಏನು?ಯಡಿಯೂರಪ್ಪ ಮುಂದೆ ಕೆ. ಗೋಪಾಲಯ್ಯ ಇಟ್ಟ ಬೇಡಿಕೆ ಏನು?

ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಎಂ. ಶಿವರಾಜ್ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಬಿಜೆಪಿಯಲ್ಲಿ ಟಿಕೆಟ್‌ಗಾಗಿ ಪೈಪೋಟಿ ನಡೆಯುತ್ತಿದೆ, ಜೆಡಿಎಸ್ ಅಭ್ಯರ್ಥಿ ಯಾರು? ಎಂದು ಶನಿವಾರ ಘೋಷಣೆಯಾಗುವ ನಿರೀಕ್ಷೆ ಇದೆ.

ಸತತ ಮೂರು ಬಾರಿ ಸೋತಿದ್ದ ಈ ಕ್ಷೇತ್ರದಲ್ಲಿ ಮತ್ತೆ ಕಮಲ ಅರಳುವುದೇ?ಸತತ ಮೂರು ಬಾರಿ ಸೋತಿದ್ದ ಈ ಕ್ಷೇತ್ರದಲ್ಲಿ ಮತ್ತೆ ಕಮಲ ಅರಳುವುದೇ?

ಜೆಡಿಎಸ್ ಅಭ್ಯರ್ಥಿ ಘೋಷಣೆ?

ಜೆಡಿಎಸ್ ಅಭ್ಯರ್ಥಿ ಘೋಷಣೆ?

ಶನಿವಾರ 'ಸ್ವಾಭಿಮಾನಿ ಮತದಾರ' ಎಂಬ ಸಮಾವೇಶವನ್ನು ಜೆಡಿಎಸ್ ಆಯೋಜನೆ ಮಾಡಿದೆ. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಉಪ ಚುನಾವಣೆಗೆ ಪಕ್ಷದ ಅಭ್ಯರ್ಥಿ ಘೋಷಣೆ ಮಾಡುವ ನಿರೀಕ್ಷೆ ಇದೆ.

ಕೆ. ಗೋಪಾಲಯ್ಯಗೆ ಹಲವು ಸಂಕಷ್ಟ

ಕೆ. ಗೋಪಾಲಯ್ಯಗೆ ಹಲವು ಸಂಕಷ್ಟ

ಅನರ್ಹ ಶಾಸಕ ಕೆ. ಗೋಪಾಲಯ್ಯಗೆ ಹಲವು ಸಂಕಷ್ಟಗಳು ಎದುರಾಗಿವೆ. ನವೆಂಬರ್ 11ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಆದರೆ, ಅನರ್ಹತೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್ ಇನ್ನೂ ನೀಡಿಲ್ಲ. ಮತ್ತೊಂದು ಕಡೆ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಬಿಜೆಪಿ ನಾಯಕರು ಕೆ. ಗೋಪಾಲಯ್ಯಗೆ ಟಿಕೆಟ್ ನೀಡಲು ವಿರೋಧ ಮಾಡುತ್ತಿದ್ದಾರೆ.

ಯಡಿಯೂರಪ್ಪ ಭೇಟಿ

ಯಡಿಯೂರಪ್ಪ ಭೇಟಿ

ಕೆ. ಗೋಪಾಲಯ್ಯ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಉಪ ಚುನಾವಣೆ ಟಿಕೆಟ್ ನನಗೆ ಅಥವ ನನ್ನ ಪತ್ನಿಗೆ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಆದರೆ, ಸ್ಥಳೀಯ ಬಿಜೆಪಿ ನಾಯಕರು ಟಿಕೆಟ್ ಗೋಪಾಲಯ್ಯಗೆ ಬೇಡ ಎಂದು ಪಕ್ಷದ ಹೈಕಮಾಂಡ್‌ಗೆ ದೂರು ನೀಡಿದ್ದಾರೆ.

2018ರಲ್ಲಿ ಗೆದ್ದಿದ್ದ ಕ್ಷೇತ್ರ

2018ರಲ್ಲಿ ಗೆದ್ದಿದ್ದ ಕ್ಷೇತ್ರ

2013 ಮತ್ತು 2018ರ ಚುನಾವಣೆಯಲ್ಲಿ ಜೆಡಿಎಸ್ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರವನ್ನು ಗೆದ್ದುಕೊಂಡಿತ್ತು. ಆದರೆ, ಈ ಉಪ ಚುನಾವಣೆ ಗೆಲ್ಲಲು ಮೂರು ಪಕ್ಷಗಳು ತಾಲೀಮು ನಡೆಸುತ್ತಿವೆ. ಜೆಡಿಎಸ್ ಕ್ಷೇತ್ರವನ್ನು ಉಳಿಸಿಕೊಳ್ಳಲಿದೆಯೇ? ಕಾದು ನೋಡಬೇಕಿದೆ.

English summary
JD(S) organized mega rally in Bengaluru Mahalakshmi Layout assembly seat on November 9, 2019. H.D. Deve Gowda will address rally. Assembly seat MLA K. Gopalaiah disqualified by speaker.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X