Suraj Revanna: ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರಕ್ಕೆ ಶಿಫ್ಟ್
ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿತ್ತು. ಇಂದು ಭಾನುವಾರ ಆಗಿರುವ ಕಾರಣ ಪೊಲಿಸರು ಸೂರಜ್ ರೇವಣ್ಣ ಅವರನ್ನು 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಶಿವಕುಮಾರ್ ಅವರ ಮುಂದೆ ಹಾಜರುಪಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಕೊಟ್ಟಿದ್ದಾರೆ.
ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿರುವುದರಿಂದ ಅವರನ್ನು ಹಾಸನದಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿತ್ತು. ವೈದ್ಯಕೀಯ ಪರೀಕ್ಷೆ ಮಾಡಿಸಿದ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.

ತಾವೇ ಪೊಲೀಸ್ ಠಾಣೆಗೆ ಹೋಗಿದ್ದ ಸೂರಜ್
ತಮ್ಮ ವಿರುದ್ಧ ದಾಖಲಾಗಿದ್ದ ದೂರಿನ ಬಗ್ಗೆ ಹಾಸನದ ಸೆನ್ ಠಾಣೆಯಲ್ಲಿ ವಿಚಾರಣೆಗಾಗಿ ಸೂರಜ್ ರೇವಣ್ಣ ಹೋಗಿದ್ದರು. ಶನಿವಾರ ರಾತ್ರಿ ಸೂರಜ್ ರೇವಣ್ಣರನ್ನು ಪೊಲೀಸರು ವಿಚಾರಣೆ ಮಾಡಿದ್ದರು.
ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಜೆಡಿಎಸ್ ಕಾರ್ಯಕರ್ತ ಸೂರಜ್ ಮೇಲೆ ದೂರು ಕೊಟ್ಟಿದ್ದರು.
ಪ್ರತಿದೂರು ಕೊಟ್ಟವ ನಾಪತ್ತೆ
ಸೂರಜ್ ಪರ, ಸಂತ್ರಸ್ಥನ ವಿರುದ್ದ ದೂರು ನೀಡಿದ್ದ ಸೂರಜ್ ಆಪ್ತ ಶಿವಕುಮಾರ್ ಸೂರಜ್ ತಂಡದ ಸಂಪರ್ಕಕ್ಕೆ ಸಿಗದೆ ಎಸ್ಕೇಪ್ ಆಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಸೂರಜ್ ರೇವಣ್ಣ ವಿರುದ್ಧ ದೂರು ನೀಡಿದ್ದ ಸಂತ್ರಸ್ತನ ವಿರುದ್ಧ ಶಿವಕುಮಾರ್ ದೂರು ಕೊಟ್ಟಿದ್ದರು.
5 ಕೋಟಿ ರೂಪಾಯಿ ನೀಡುವಂತೆ ಸಂತ್ರಸ್ತ ಸೂರಜ್ ರೇವಣ್ಣ ಅವರಿಗೆ ಬೆದರಿಕೆ ಹಾಕಿದ್ದ, ಅವರು ಹಣ ಕೊಡದ ಕಾರಣ ಮರ್ಯಾದೆ ತೆಗೆಯಲು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಶಿವಕುಮಾರ್ ಸಂತ್ರಸ್ತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದರು.
ಆದರೆ ದೂರ ನೀಡಿದ ಬಳಿಕ ಅವರು ಹೊಳೆನರಸೀಪುರ ಠಾಣೆಯಿಂದ ಓಡಿ ಹೋಗಿದ್ದಾರೆ. ಅಲ್ಲದೆ ಬೆಂಬಲಿಗರ ಸಂಪರ್ಕಕ್ಕೂ ಕೂಡ ಅವರು ಸಿಗುತ್ತಿಲ್ಲ ಎನ್ನಲಾಗಿದೆ. ಜೊತೆಯಲ್ಲೇ ಇದ್ದು ಸೂರಜ್ ರೇವಣ್ಣರಿಗೆ ಶಿವಕುಮಾರ್ ಹಳ್ಳ ತೋಡಿದ್ರಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಅಲ್ಲದೆ ಶಿವಕುಮಾರ್ ಬಿಜೆಪಿ ನಾಯಕರ ಜೊತೆಗಿರುವ ವಿಡಿಯೋ ವೈರಲ್ ಆಗುತ್ತಿದೆ.












Click it and Unblock the Notifications