ಗೆಲುವಿಗೆ ಪ್ರಶಾಂತ್ ಕಿಶೋರ್ ಮೊರೆ ಹೋದ ಜೆಡಿಎಸ್

ಬೆಂಗಳೂರು, ಫೆಬ್ರವರಿ 25: ಸತತ ಸೋಲುಗಳಿಂದ ಹೀನಾಯ ಸ್ಥಿತಿಯಲ್ಲಿರೋ ಜೆಡಿಎಸ್ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಹೊಸ ಅಸ್ತ್ರದೊಂದಿಗೆ ಹೆಜ್ಜೆ ಇಡಲು ಭರ್ಜರಿ ಪ್ಲಾನ್ ಮಾಡಿದೆ.

2023 ರ ಚುನಾವಣೆಯಲ್ಲಿ ಜೆಡಿಎಸ್ ಪೂರ್ಣ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿಯಲು ಚುನಾವಣಾ ಚಾಣಕ್ಯ ಎಂದೇ ಖ್ಯಾತಿಯಾಗಿರುವ ಪ್ರಶಾಂತ್ ಕಿಶೋರ್ ಅವರ ಮೊರೆ ಹೋಗಿದೆ.

2014 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಗೆಲುವು, 2019 ರಲ್ಲಿ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಗೆಲುವು ಸೇರಿದಂತೆ ಹಲವು ಚುನಾವಣೆಗಳಲ್ಲಿ ಪ್ರಶಾಂತ್ ಕಿಶೋರ್ ತಂತ್ರಗಾರಿಕೆ ಭರ್ಜರಿ ಯಶಸ್ಸು ಕಂಡಿತ್ತು.

JDS Party Already Preparing For The 2023 Election

ಈ ಯಶಸ್ಸಿನಿಂದ ಆಕರ್ಷಿತರಾಗಿರೋ ಮಾಜಿ ಸಿಎಂ ಕುಮಾರಸ್ವಾಮಿ ಖುದ್ದು ಪ್ರಶಾಂತ್ ಕಿಶೋರ್ ಜೊತೆ 2023 ರ ಚುನಾವಣೆ ಬಗ್ಗೆ ಮಾತುಕತೆ ನಡೆಸಿದ್ದಾರೆ. ಈಗಾಗಲೇ ಒಂದು ಸುತ್ತಿನ ಮಾತುಕತೆಯಾಗಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ 2023 ರ ಚುನಾವಣೆಯಲ್ಲಿ ಜೆಡಿಎಸ್ ಗೆ ಪ್ರಶಾಂತ್ ಕಿಶೋರ್ ಚುನಾವಣೆ ರಣತಂತ್ರ ಕೈಜೋಡಿಸಲಿದೆ.

ಪ್ರಶಾಂತ್ ಕಿಶೋರ್ ಜೊತೆ ಮಾತುಕತೆ ನಡೆಸಿರುವ ಬಗ್ಗೆ ಸ್ವತಃ ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತಾನಾಡಿದ ಅವರು, ಪ್ರಶಾಂತ್ ಕಿಶೋರ್ ಜೊತೆ ಪ್ರಾಥಮಿಕ ಹಂತದ ಮಾತುಕತೆ ನಡೆದಿದೆ. ಚುನಾವಣೆಗೆ ತುಂಬ ಸಮಯ ಇದೆ. ಮತ್ತೊಂದು ಬಾರಿ ಚರ್ಚೆ ಮಾಡಿ 2023ರ ಚುನಾವಣೆಗೆ ಬಳಸಿಕೊಳ್ಳುವ ಬಗ್ಗೆ ನಿರ್ಧಾರ ಮಾಡೋದಾಗಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+