'ಕುಮಾರಸ್ವಾಮಿ ಅರ್ಬನ್ ನಕ್ಸಲೈಟ್': ಬಿಜೆಪಿ ಮುಖಂಡರ ವಿರುದ್ಧ ಜೆಡಿಎಸ್ ದೂರು
ಬೆಂಗಳೂರು, ಸೆಪ್ಟೆಂಬರ್ 22: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಅರ್ಬನ್ ನಕ್ಸಲೈಟ್ ಎಂದು ಕರೆದಿರುವ ಬಿಜೆಪಿ ಮುಖಂಡರ ವಿರುದ್ಧ ಜೆಡಿಎಸ್ ದೂರು ಸಲ್ಲಿಸಿದೆ.
ಜೆಡಿಎಸ್ ವಕ್ತಾರ ರಮೇಶ್ ಬಾಬು ಮತ್ತು ಕೋನರೆಡ್ಡಿ ಅವರು, ಬಿಜೆಪಿ ನಾಯಕರಾದ ಆರ್. ಅಶೋಕ್, ಶೋಭಾ ಕರಂದ್ಲಾಜೆ, ಬಸವರಾಜ ಯತ್ನಾಳ್, ರೇಣುಕಾಚಾರ್ಯ ಮತ್ತು ಎನ್. ರವಿಕುಮಾರ್ ವಿರುದ್ಧ ನಗರ ಪೊಲೀಸ್ ಆಯುಕ್ತ ಟಿ. ಸುನಿಲ್ ಕುಮಾರ್ ಅವರಿಗೆ ದೂರು ಸಲ್ಲಿಸಿದರು.
ಬಿ.ಎಸ್. ಯಡಿಯೂರಪ್ಪ ಅವರ ನಿವಾಸದ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಆರ್. ಅಶೋಕ್ ಅವರು ಕುಮಾರಸ್ವಾಮಿ ಅರ್ಬನ್ ನಕ್ಸಲೈಟ್‌ನಂತೆ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದ್ದರು.

ಇದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಜೆಡಿಎಸ್, ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ಪಕ್ಷದ ಶಾಸಕರಿಗೆ ಬಿಜೆಪಿ 30-40 ಕೋಟಿ ರೂ ಆಮಿಷವೊಡ್ಡುತ್ತಿದೆ ಎಂದು ಆರೋಪಿಸಿದೆ.
ಸರ್ಕಾರ ಕೆಡವಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಜೆಡಿಎಸ್ ಶುಕ್ರವಾರ ಬಿಜೆಪಿ ವಿರುದ್ಧ ಸಭಾಧ್ಯಕ್ಷರಿಗೆ ದೂರು ನೀಡಿತ್ತು.

ಹಣದ ಆಮಿಷ ತೋರಿಸಿ ಪಕ್ಷಾಂತರಕ್ಕೆ ಪ್ರೇರೇಪಿಸುತ್ತಿದೆ ಎಂದು ಆರೋಪಿಸಿ ರಮೇಶ್ ಬಾಬು ಸಭಾಧ್ಯಕ್ಷ ರಮೇಶ್ ಕುಮಾರ್ ಅವರಿಗೆ ದೂರು ಸಲ್ಲಿಸಿದ್ದರು.












Click it and Unblock the Notifications