ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಳಪೆ ಊಟದ ವಿರುದ್ಧ ಪ್ರತಿಭಟನೆ; ಬಳ್ಳಾರಿಯಲ್ಲಿ ಎಸ್‌ಟಿ ಎಸ್‌ಸಿ ವಿದ್ಯಾರ್ಥಿಗಳು ಹಾಸ್ಟೆಲ್‌ನಿಂದ ಹೊರಕ್ಕೆ, ಜೆಡಿಎಸ್ ಆಕ್ರೋಶ

|
Google Oneindia Kannada News

ಬೆಂಗಳೂರು, ಜನವರಿ. 29: ಬಳ್ಳಾರಿಯ ಹಾಸ್ಟೆಲ್‌ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದನ್ನು ವಿರೋಧಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಇದೇ ಕಾರಣದಿಂದ ವಿದ್ಯಾರ್ಥಿಗಳನ್ನು ವಸತಿ ನಿಲಯದಿಂದ ಹೊರಹಾಕಲಾಗಿದೆ.

ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರ ಹಾಕಲು ಆದೇಶ ನೀಡಿದ ಜಿಲ್ಲಾಧಿಕಾರಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ಬಿಜೆಪಿ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ವಾಗ್ದಾಳಿ ನಡೆಸಿವೆ.

ಸರ್ಕಾರವು ವಿದ್ಯಾರ್ಥಿ, ದಲಿತರ, ಮಹಿಳೆಯರ ಮೇಲೆ ಮಾಡುತ್ತಿರುವ ದೌರ್ಜನ್ಯಗಳನ್ನು ಕೂಡಲೆ ನಿಲ್ಲಿಸಬೇಕು: ಸಿದ್ದರಾಮಯ್ಯಸರ್ಕಾರವು ವಿದ್ಯಾರ್ಥಿ, ದಲಿತರ, ಮಹಿಳೆಯರ ಮೇಲೆ ಮಾಡುತ್ತಿರುವ ದೌರ್ಜನ್ಯಗಳನ್ನು ಕೂಡಲೆ ನಿಲ್ಲಿಸಬೇಕು: ಸಿದ್ದರಾಮಯ್ಯ

"ಗುಣಮಟ್ಟದ ಆಹಾರ ನೀಡುವುದು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತದ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳ ಅಳಲಿಗೆ ಕಿವಿಗೊಡದೆ ಈ ಹೇಯ ಕೆಲಸಕ್ಕೆ ಆದೇಶ ನೀಡಲಾಗಿದೆ" ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಘಟನೆಯನ್ನು ಖಂಡಿಸಿದ್ದಾರೆ.

ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಸರ್ಕಾರ

ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಸರ್ಕಾರ

'ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಈ ಸರ್ಕಾರದ ಆಡಳಿತದಲ್ಲಿ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳನ್ನು ನಡೆಸಿಕೊಳ್ಳುತ್ತಿರುವ ರೀತಿ ಅಸಹ್ಯಕರವಾಗಿದೆ' ಎಮದು ಕುಮಾರಸ್ವಾಮಿ ಟೀಕಿಸಿದ್ದಾರೆ.

"ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಸ್ಟೆಲ್ ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದನ್ನು ವಿರೋಧಿಸಿ, ಅಲ್ಲಿನ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಕಾರಣಕ್ಕೆ ಅವರನ್ನು ಹಾಸ್ಟೆಲ್ ನಿಂದ ಹೊರಹಾಕಲು ಸೂಚಿಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೆ, ಇದು ಸರ್ವಾಧಿಕಾರವಲ್ಲವೆ..?" ಎಂದು ಜೆಡಿಎಸ್ ಪ್ರಶ್ನಿಸಿದೆ.

ಘಟನೆಗೆ ಕಾರಣವಾದ ಅಧಿಕಾರಿಗಳ ಅಮಾನತಿಗೆ ಒತ್ತಾಯ

"ಗುಣಮಟ್ಟದ ಆಹಾರ ಒದಗಿಸುವುದು ಸಮಾಜ ಕಲ್ಯಾಣ ಇಲಾಖೆ ಮತ್ತು ಜಿಲ್ಲಾಡಳಿತದ ಜವಾಬ್ದಾರಿ. ವಿದ್ಯಾರ್ಥಿಗಳ ಅಳಲನ್ನು ಕೇಳಿಸಿಕೊಳ್ಳದೆ, ಈ ಹೀನ ಕೆಲಸಕ್ಕೆ ಆದೇಶಿಸಿದ ಜಿಲ್ಲಾಧಿಕಾರಿ, ವಿದ್ಯಾರ್ಥಿಗಳಿಗೆ ಶಿಕ್ಷಿಸಿದ ಜಿಲ್ಲಾ ಇಲಾಖಾಧಿಕಾರಿಗಳು ಎಲ್ಲರನ್ನೂ ಕೂಡಲೇ ಅಮಾನತು ಮಾಡಬೇಕು. ಈ ಬಗ್ಗೆ ಅಗತ್ಯ ತನಿಖೆ ನಡೆಯಲೇಬೇಕು" ಎಂದು ಜಾತ್ಯಾತೀತ ಜನತಾದಳ ಆಗ್ರಹಿಸಿದೆ.

 ಸಚಿವ ಶ್ರಿರಾಮುಲು ವಿರುದ್ಧ ಜೆಡಿಎಸ್ ವಾಗ್ದಾಳಿ

ಸಚಿವ ಶ್ರಿರಾಮುಲು ವಿರುದ್ಧ ಜೆಡಿಎಸ್ ವಾಗ್ದಾಳಿ

"ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಈ ಸರ್ಕಾರದ ಆಡಳಿತದಲ್ಲಿ ಶೋಷಿತ ಸಮುದಾಯದ ವಿದ್ಯಾರ್ಥಿಗಳನ್ನು ನಡೆಸಿಕೊಳ್ಳುತ್ತಿರುವ ರೀತಿ ಹೇಸಿಗೆ ತರಿಸುತ್ತಿದೆ. ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಶ್ರಿರಾಮುಲು ಅವರೆ, ವಿದ್ಯಾರ್ಥಿಗಳ ಪರ ನಿಲ್ಲದೆ, ಅವರ ವಿರುದ್ಧದ ಕ್ರಮಕ್ಕೆ ಸಾಥ್ ನೀಡಿರುವುದು ಎಷ್ಟು ಸರಿ..? ನಿಮ್ಮ ಮುಖವಾಡ ಕಳಚಿದೆ" ಎಂದು ಟೀಕಿಸಿದೆ.

'ವಿದ್ಯಾರ್ಥಿಗಳ ಹಿತ ಕಾಪಾಡಬೇಕಿರುವ ಆಡಳಿತ ವರ್ಗ ಇಷ್ಟು ಅಪ್ರಜಾತಾಂತ್ರಿಕವಾಗಿ ನಡೆದುಕೊಳ್ಳುವುದು ಖಂಡನೀಯ. ಸಮಸ್ಯೆ ಪರಿಹರಿಸಿ, ವಿದ್ಯಾರ್ಥಿಗಳ ಮನಗೆಲ್ಲಬೇಕು. ಅದು ಬಿಟ್ಟು, ಇಂತಹ ಕೆಟ್ಟ ನಿರ್ಧಾರ ಸರಿಯಲ್ಲ. ಅಂಗೈ ಹುಣ್ಣಿಗೆ ಕನ್ನಡಿ ಯಾಕೆ ಎನ್ನುವ ಹಾಗೆ ಆಡಳಿತ ಎಷ್ಟು ಕುಸಿದಿದೆ ಎಂಬುದಕ್ಕೆ ದೊಡ್ಡ ಸಾಕ್ಷಿ ಏನು ಬೇಕು..?" ಎಂದು ಪ್ರಶ್ನಿಸಿದೆ.

ಬಳ್ಳಾರಿ ಜಿಲ್ಲಾಧಿಕಾರಿ ಅಮಾನತಿಗೆ ಸಿದ್ದರಾಮಯ್ಯ ಆಗ್ರಹ

ಬಳ್ಳಾರಿ ಜಿಲ್ಲಾಧಿಕಾರಿ ಅಮಾನತಿಗೆ ಸಿದ್ದರಾಮಯ್ಯ ಆಗ್ರಹ

ಘಟನೆ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಳ್ಳಾರಿ ಜಿಲ್ಲಾಧಿಕಾರಿ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಸಮಸ್ಯೆಯನ್ನು ಗಮನಕ್ಕೆ ತಂದ ವಿದ್ಯಾರ್ಥಿಗಳನ್ನು ಅಭಿನಂದಿಸಬೇಕಿತ್ತು. ಆದರೆ, ಅದರ ಬದಲು ಅವರನ್ನು ಹಾಸ್ಟೆಲ್‍ನಿಂದ ಹೊರಹಾಕಲು ಆದೇಶ ಮಾಡಿದ್ದಾರೆ ಎಂಬುದು ಅತ್ಯಂತ ಅಮಾನವೀಯ ಎಂದು ಖಂಡಿಸಿದ್ದರು.

ಪರಿಶಿಷ್ಟ ಪಂಗಡದ ಹಾಸ್ಟೆಲ್‍ನಲ್ಲಿ ಊಟ ಸರಿಯಿಲ್ಲವೆಂದು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ಪ್ರತಿಭಟನೆ ಮಾಡಿದರೆಂದು ವಿದ್ಯಾರ್ಥಿಗಳನ್ನು ಹಾಸ್ಟೆಲ್‍ನಿಂದ ಹೊರಹಾಕಲಾಗಿದೆ. ಈ ಡಿಸಿಯೇನು ತನ್ನನ್ನು ತಾನು ಮಹಾರಾಜರ ಕಾಲದವರು ಅಂದುಕೊಂಡಿದ್ದಾರಾ..? ಜಿಲ್ಲಾಧಿಕಾರಿಯ ಈ ಅಮಾನವೀಯ ವರ್ತನೆಗೆ ಸರ್ಕಾರ ಇಷ್ಟೊತ್ತಿಗೆ ಅವರನ್ನು ಅವರನ್ನು ಅಮಾನತು ಮಾಡಬೇಕಾಗಿತ್ತು ಎಂದು ಸರ್ಕಾರವನ್ನು ಟೀಕಿಸಿದ್ದರು.

English summary
JDS and former CM HD Kumaraswamy lashed out at the BJP government for expelling Scheduled Caste and Scheduled Tribe students from a Ballari hostel for protesting against poor quality food. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X