ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಇಂದು ರಾಜೀನಾಮೆ?

Recommended Video

      ದೇವೇಗೌಡ, ಕುಮಾರಣ್ಣನ ವಿರುದ್ಧ ತಿರುಗಿ ಬೀಳ್ತಾರಾ ವಿಶ್ವನಾಥ್..? | Oneindia Kannada

      ಬೆಂಗಳೂರು, ಜೂನ್ 4: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಇಂದು ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದು ರಾಜೀನಾಮೆ ಕುರಿತು ಘೋಷಿಸುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ.

      ಲೋಕಸಭೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಘೋಷಣೆ ಬಳಿಕ ಜೆಡಿಎಸ್ ಮುಖಂಡನ ನಡೆಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ ವಿಶ್ವನಾಥ್ ಅವರು ಮಂಗಳವಾರ ರಾಜೀನಾಮೆ ನೀಡುವ ಎಲ್ಲಾ ಸಾಧ್ಯತೆಗಳಿವೆ ಎನ್ನುವ ಮಾತುಗಳು ಕೇಳಿಬಂದಿವೆ.

      ಮಂಗಳವಾರ ಸಂಜೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕರ ಸಭೆ ಕರೆಯಲಾಗಿದೆ.ಅದಕ್ಕೂ ಮುನ್ನವೇ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ.

      JDS state president set to resign Today?

      ಬೆಳಗ್ಗೆ 11 ಗಂಟೆಗೆ ತಮ್ಮ ಪಕ್ಷದ ಕಚೇರಿಯ ಬದಲು ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದು, ತಮ್ಮ ಮುಂದಿನ ನಿಲುವಿನ ಕುರಿತು ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ತಿಳಿದುಬಂದಿದೆ.

      ಪತ್ರಿಕಾಗೋಷ್ಠಿಯಲ್ಲೇ ಎಲ್ಲವನ್ನೂ ಬಹಿರಂಗಪಡಿಸುತ್ತೇನೆ ಎಂದಷ್ಟೇ ತಮ್ಮನ್ನು ಸಂಪರ್ಕಿಸಿದವರಿಗೆ ಹೇಳಿದ್ದಾರೆ, ಆರೋಗ್ಯ ಸಮಸ್ಯೆ ಕಾರಣ ಪಕ್ಷವನ್ನು ಸಂಘಟಿಸಲು ಅಸಾಧ್ಯವೆಂದು ಈ ಹಿಂದೆಯೂ ರಾಜೀನಾಮೆ ನೀಡಲು ಮುಂದಾಗಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+