ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೆಡಿಎಸ್‌ ರಾಜ್ಯಾಧ್ಯಕ್ಷರ ಶೀಘ್ರ ಬದಲಾವಣೆ: ಎಚ್‌ಡಿ ದೇವೇಗೌಡ

By Nayana
|
Google Oneindia Kannada News

ಬೆಂಗಳೂರು, ಜು.21: ಎಚ್‌ಡಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿರುವುದರಿಂದ ರಾಜ್ಯಾಧ್ಯಕ್ಷರಾಗಿ ಜೆಡಿಎಸ್‌ ಸಂಘಟನೆ ಮಾಡುವುದು ಕಷ್ಟವಾಗಿದೆ ಹಾಗಾಗು ರಾಜ್ಯಾಧ್ಯಕ್ಷರ ಜತೆಗೆ ಪದಾಧಿಕಾರಿಗಳ ಬದಲಾವಣೆ ಆಗಬೇಕಿದೆ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹೇಳಿದ್ದಾರೆ.

ಜೆಡಿಎಸ್‌ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷರು ಪದಾಧಿಕಾರಿಗಳ ನೇಮಕಕ್ಕೆ ಸಮಿತಿ ರಚನೆಯಾಗಲಿದೆ, ಪಕ್ಷದ ನಿಯಮಾವಳಿಗಳನ್ನು ಗಮನದಲ್ಲಿಟ್ಟುಕೊಂಡು ಸಮಿತಿಯನ್ನು ರಚನೆ ಮಾಡಲಾಗುತ್ತದೆ. ಹೊಸ ಸಮಿತಿಯಲ್ಲಿ ಪದಾಧಿಕಾರಿಗಳ ಆಯ್ಕೆ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಪಕ್ಷದ ಕಾರ್ಯಕರ್ತರಿಗೆ ಧೃತಿಗೆಡಬೇಡಿ ಎಂದ ಸಿದ್ದರಾಮಯ್ಯ ಪಕ್ಷದ ಕಾರ್ಯಕರ್ತರಿಗೆ ಧೃತಿಗೆಡಬೇಡಿ ಎಂದ ಸಿದ್ದರಾಮಯ್ಯ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷ ಸಂಘಟನೆಗೆ ತೊಂದರೆಯಾಗಬಾರದು, ಲೋಕಸಭೆ ಚುನಾವಣೆಗೆ ಮೈತ್ರಿ ಸರ್ಕಾರದಲ್ಲಿ ನಮ್ಮಿಂದ ಯಾವುದೇ ತೊಂದರೆಯಾಗಬಾರದು, ಮುಂದಿನ ಕೋಕಸಭೆ ಚುನಾವಣೆ ಹೊಂದಾಣಿಕೆ ನಮ್ಮಿಂದ ತೊಂದರೆಯಾಗಬಾರದು ಎಂದರು.

JDS supremo says party will get new state prez soon

ಎಲ್ಲಾ 28 ಕ್ಷೇತ್ರಗಳಿಂದ ಲೋಕಸಭಾ ಚುನಾವಣೆಗೆ ನಮ್ಮ ಪಕ್ಷದಿಂದ ಸ್ಪರ್ಧಿಸಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಸೀಟು ಬಿಟ್ಟುಕೊಡುವ ಬಗ್ಗೆ ಯಾವುದೇ ಚಚೆಯಾಗಿಲ್ಲ, ಕಾಂಗ್ರೆಸ್‌ ಆಗಲಿ ಅಥವಾ ಜೆಡಿಎಸ್‌ ಆಗಲಿ ಸೀಟು ಬಿಟ್ಟುಕೊಡುವ ಬಗ್ಗೆ ಚರ್ಚಿಸಿಲ್ಲ ಎಂದು ದೇವೇಗೌಡರು ಸ್ಪಷ್ಟನೆ ನೀಡಿದರು.

English summary
JDS supremo HD Devegiwda has said that the party will prepare to contest for all 28 constituencies in upcoming parliament poll and will decide later on collation with Congress.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X