ಮಧ್ಯಂತರ ಚುನಾವಣೆ ಸೂಚನೆ ಕೊಟ್ಟ ದೇವೇಗೌಡ: ಮೈತ್ರಿ ಇಲ್ಲವಂತೆ
ಬೆಂಗಳೂರು, ಸೆಪ್ಟೆಂಬರ್ 16: ರಾಜ್ಯದಲ್ಲಿ ಕೆಲವೇ ತಿಂಗಳಲ್ಲಿ ಮಧ್ಯಂತರ ಚುನಾವಣೆ ಬರಬಹುದು ಎಂಬ ಊಹೆಯನ್ನು ಜೆಡಿಎಸ್ ವರಿಷ್ಠ ದೇವೇಗೌಡ ಮಾಡಿದ್ದಾರೆ.
ನಗರದ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಅವರು, 'ಫೆಬ್ರವರಿ ತಿಂಗಳಲ್ಲಿ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯುವ ಸಾಧ್ಯತೆ ಇದೆ' ಎಂದು ಹೇಳಿದ್ದಾರೆ.
ಮಧ್ಯಂತರ ಚುನಾವಣೆ ನಡೆದರೆ ಜೆಡಿಎಸ್ ಪಕ್ಷವು ಏಕಾಂಗಿಯೇ ಸ್ಪರ್ಧಿಸಲಿದಯೇ ವಿನಃ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ದೇವೇಗೌಡ ಅವರು ಸ್ಪಷ್ಟಪಡಿಸಿದರು. ಆ ಮೂಲಕ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲವೆಂದು ಹೇಳಿದರು.

ಮೈತ್ರಿ ಸರ್ಕಾರದ ಅವಧಿಯಲ್ಲಿ ಕುಮಾರಸ್ವಾಮಿ ಒಳ್ಳೆಯ ಕಾರ್ಯಗಳನ್ನು ಮಾಡಿದ್ದಾರೆ. ಅವರ ಕಾರ್ಯಗಳನ್ನು ಮನೆ-ಮನೆಗಳಿಗೆ ತಲುಪಿಸುವ ಕಾರ್ಯ ನಾವು ಮಾಡಬೇಕಿದೆ ಎಂದರು.
ಚುನಾವಣೆ ಸಮಯದಲ್ಲಿ ಕುಮಾರಸ್ವಾಮಿ ಅವರು ರಾಜ್ಯದಾದ್ಯಂತ ಪ್ರವಾಸ ಮಾಡಲಿದ್ದಾರೆ. ನಾನೂ ಸಹ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಭೇಟಿ ಕೊಡಲಿದ್ದೇನೆ ಎಂದು ಹೇಳಿದರು.
'ಪಕ್ಷದ ಸಹಾಯದಿಂದ ಬೆಳೆದವರೇ ಕೆಲವರು ಪಕ್ಷದ ವಿರುದ್ಧ ಮಾತನಾಡುತ್ತಿದ್ದಾರೆ. ಪಕ್ಷ ಬಿಟ್ಟು ಹೋದವರ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ, ನಾಯಕರನ್ನು ನಂಬಿ ಪಕ್ಷ ಕಟ್ಟಿಲ್ಲ, ಕಾರ್ಯಕರ್ತರನ್ನು ಪಕ್ಷ ಕಟ್ಟಿದ್ದೇನೆ' ಎಂದು ದೇವೇಗೌಡ ಹೇಳಿದರು.












Click it and Unblock the Notifications