• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನಿರ್ಮಾಪಕ ರಾಕ್‌ ಲೈನ್ ವೆಂಕಟೇಶ್ ಮನೆಗೆ ಜೆಡಿಎಸ್ ಕಾರ್ಯಕರ್ತರ ಮುತ್ತಿಗೆ

|
Google Oneindia Kannada News

ಬೆಂಗಳೂರು, ಜು. 10: ಮಾಜಿ ಮುಖ್ಯ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಮನೆಗೆ ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕುಮಾರಸ್ವಾಮಿಯವರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಆಗ್ರಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕಾಗಮಿಸಿದ ಪೊಲೀಸರು ಜೆಡಿಎಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಮಂಡ್ಯದ ಕೆಆರ್ಎಸ್ ಅಣೆಕಟ್ಟು ಬಿರುಕು ಬಿಟ್ಟಿರುವ ವಿಚಾರವಾಗಿ ಸಂಸದೆ ಸುಮಲತಾ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನಡುವಿನ ಶೀತಲ ಸಮರ ಮುಂದುವರೆದಿದೆ. ಇದರ ನಡುವೆ ಮಧ್ಯ ಪ್ರವೇಶಿಸಿದ್ದ ನಿರ್ಮಾಪಕ ರಾಕ್‌ ಲೈನ್ ವೆಂಕಟೇಶ್ ದಿವಂಗತ ನಟ ಅಂಬರೀಶ್ ಅವರ ಸಾವಿನ ವಿಚಾರವಾಗಿ ಹೇಳಿಕೆ ನೀಡಿದ್ದರು. ಅಂಬರೀಶ್ ಅವರ ಸ್ಮಾರಕ ನಿರ್ಮಾಣ ವಿಚಾರದಲ್ಲಿ ಕುಮಾರಸ್ವಾಮಿ ನಡೆದುಕೊಂಡು ರೀತಿ ಬಗ್ಗೆ ರಾಕ್ ಲೈನ್ ವೆಂಕಟೇಶ್ ನೀಡಿರುವ ಹೇಳಿಕೆ ವಿವಾದಕ್ಕೆ ನಾಂದಿ ಹಾಡಿದೆ.

ಮಂಡ್ಯ ಸಂಸದೆ ಸುಮಲತಾ ಬೆಂಗಳೂರು ನಿವಾಸಕ್ಕೆ ಪೊಲೀಸರ ಬಿಗಿ ಭದ್ರತೆ ಮಂಡ್ಯ ಸಂಸದೆ ಸುಮಲತಾ ಬೆಂಗಳೂರು ನಿವಾಸಕ್ಕೆ ಪೊಲೀಸರ ಬಿಗಿ ಭದ್ರತೆ

   Rockline Venkatesh : ಅಂಬರೀಶ್ ಬಗ್ಗೆ ಮಾತನಾಡೋದಕ್ಕೆ ಅವರು ಯಾರು? | Oneindia Kannada

   ಕ್ಷಮೆಗೆ ಆಗ್ರಹ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಮಾತನಾಡುವ ನೈತಿಕತೆ ಇಲ್ಲ. ರಾಕ್ ಲೈನ್ ವೆಂಕಟೇಶ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ನೂರಾರು ಕಾರ್ಯಕರ್ತರು ರಾಕ್ ಲೈನ್ ವೆಂಕಟೇಶ್ ಅವರ ಮನೆ ಮುಂದೆ ಜಮಾಯಿಸಿದ್ದರು. ಕ್ಷಮೆಗೆ ಆಗ್ರಹಿಸಿ ಮುತ್ತಿಗೆ ಹಾಕಿದ್ದ ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ರಾಕ್‌ ಲೈನ್ ವೆಂಕಟೇಶ್ ಕ್ಷಮೆ ಕೇಳುವ ವರೆಗೂ ಬಿಡಲ್ಲ ಎಂದು ಒತ್ತಾಯಿಸಿದರು.

   ನಾನು ಕ್ಷಮೆ ಕೇಳಲ್ಲ ಎಂದ ರಾಕ್‌ಲೈನ್ : ನಾನು ಮಂಡ್ಯದ ರಾಜಕಾರಣ ಬಗ್ಗೆ ಮಾತನಾಡಿಲ್ಲ. ನಾನು ಅಂಬರೀಶ್ ಸ್ಮಾರಕ ವಿಚಾರವಾಗಿ ಮಾತನಾಡಿದ್ದೇನೆ. ನಾನು ರಾಜಕಾರಣ ಮಾಡಿಲ್ಲ. ಕುಮಾರಸ್ವಾಮಿ ಹೆಣದ ರಾಜಕಾರಣ ಮಾಡುತ್ತಿದ್ದಾರೆ. ಡಾ. ರಾಜ್ ಕುಮಾರ್ ಮತ್ತು ಅಂಬರೀಶ್ ಮೃತಪಟ್ಟಾಗ ಸಿಎಂ ಅಗಿದ್ದವರು ಕುಮಾರಸ್ವಾಮಿ. ಅವರ ಯಾವ ರೀತಿ ನಡೆದುಕೊಂಡಿದ್ದಾರೆ ಎಂಬುದನ್ನು ನಾನು ಸಾಬೀತು ಮಾಡಿದ್ದೀನಿ. ನಾನು ರಾಜಕಾರಣದ ಬಗ್ಗೆ ಮಾತನಾಡಿಲ್ಲ. ಚಿತ್ರರಂಗದ ವಿಚಾರ ಬಂದಾಗ ನಾನು ಕಲಾವಿದರ ಸಂಘದ ಕಾರ್ಯದರ್ಶಿಯಾಗಿ ಮಾತನಾಡಿದ್ದೇನೆ. ನಾನು ಸುಮ್ಮನಿರಲ್ಲ. ನನಗೂ ಪ್ರತಿಭಟನೆ ಮಾಡಿಸುವುದ ಗೊತ್ತು ಎಂದು ರಾಕ್ ಲೈನ್ ವೆಂಕಟೇಶ್ ಸುದ್ದಿಗಾರರಿಗೆ ತಿಳಿಸಿದರು.

    JDS Workers Protest infront of Producer Rockline Venkatesh Residence in Bengaluru

   ಇನ್ನು ಯಾವ ವಿಚಾರವಾಗಿ ನಾನು ಕ್ಷಮೆ ಕೇಳಬೇಕು. ತಪ್ಪಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ಅವೇಶದಲ್ಲಿ ನಾನು ಮಾತನಾಡಿರಬಹುದು, ನಾನು ಕೆಟ್ಟದಾಗಿ ಮಾತನಾಡಿದ್ದೀನಿ ಎಂದು ನಿಮ್ಮನ್ನು ಕಳಿಸಿರಬಹುದು. ನನಗೂ ಪ್ರತಿಭಟನೆ ಮಾಡಿಸುವುದು ಗೊತ್ತು ಎಂದು ಟಾಂಗ್ ನೀಡಿದ್ದಾರೆ.

   English summary
   JDS workers protested demanding an apology from producer Rockline Venkatesh know more
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X