• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಜೆಪಿ ಅಭ್ಯರ್ಥಿ ಮುನಿರತ್ನ ಕುರಿತು ನಿಖಿಲ್ ಕುಮಾರಸ್ವಾಮಿ ಮಹತ್ವದ ಹೇಳಿಕೆ!

|

ಬೆಂಗಳೂರು, ಅ. 27: ಈ ಹಿಂದೆ ಆರ್ ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರಿಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹುಟ್ಟುಹಬ್ಬದ ಶುಭಾಶಯಗಳನ್ನು ಹೇಳಿದ್ದು ಭಾರಿ ವಿರೋಧಕ್ಕೆ ಕಾರಣವಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿದ್ದರು. ಹೀಗಾಗಿ ನಂತರ ನಿಖಿಲ್ ಕುಮಾರಸ್ವಾಮಿ ಅವರು ಮುನಿರತ್ನ ಅವರಿಗೆ ಶುಭಕೋರಿದ್ದ ಫೇಸ್‌ಬುಕ್ ಪೋಸ್ಟ್ ಅಳಿಸಿಹಾಕಿ, ಸ್ಪಷ್ಟನೆ ಕೊಟ್ಟಿದ್ದರು.

ಇದಕ್ಕೆಲ್ಲ ಕಾರಣವಾಗಿರುವುದು ಮುನಿರತ್ನ ಅವರು ನಿರ್ಮಿಸಿದ್ದ ಕುರುಕ್ಷೇತ್ರ ಸಿನಿಮಾ. ಅದು ದೊಡ್ಡ ಮಟ್ಟದಲ್ಲಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಬ್ರೇಕ್ ಕೊಡದಿದ್ದರೂ, ದೊಡ್ಡ ಬಜೆಟ್ ಸಿನಿಮಾ ಆಗಿತ್ತು. ಜಿದ್ದಾಜಿದ್ದಿನ ರಾಜಕಾರಣದಲ್ಲಿ ನಾಯಕರ ನಿರ್ಲಕ್ಷದ ಸಣ್ಣ ವರ್ತನೆಯೂ ಕಾರ್ಯಕರ್ತರ ಭಾರೀ ಆಕ್ರೋಶಕ್ಕೆ ಕಾರಣವಾಗುತ್ತದೆ. ಇದೀಗ ಆರ್ ಆರ್ ನಗರದ ಉಪ ಚುನಾವಣೆ ಸಂದರ್ಭದಲ್ಲಿ ಅದು ಮತ್ತೆ ಪುನರಾವರ್ತನೆ ಆಗಿದ್ದು, ನಿಖಿಲ್ ಕುಮಾರಸ್ವಾಮಿ ಅವರು ಮಹತ್ವದ ಹೇಳಿಕೆ ಕೊಟ್ಟಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಪ್ರಚಾರ

ನಿಖಿಲ್ ಕುಮಾರಸ್ವಾಮಿ ಪ್ರಚಾರ

ಆರ್ ಆರ್ ನಗರ ಉಪ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರವಾಗಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ಮಾಡಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ವಿ. ಕೃಷ್ಣಮೂರ್ತಿ ಅವರ ಪರವಾಗಿ ರೋಡ್‌ಶೋನಲ್ಲಿ ಭಾಗವಹಿಸಿ ನಿಖಿಲ್ಬ ಕುಮಾರಸ್ವಾಮಿ ಅವರು ಪ್ರಚಾರ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ಮುನಿರತ್ನ ಅವರ ಕುರಿತು ಮಹತ್ವದ ಹೇಳಿಕೆ ಕೊಟ್ಟಿದ್ದಾರೆ.

ಆರ್. ಆರ್. ನಗರ ಚುನಾವಣೆ; ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಎಫ್‌ಐಆರ್

ನಾನೊಬ್ಬ ನಟ ಅಷ್ಟೇ!

ನಾನೊಬ್ಬ ನಟ ಅಷ್ಟೇ!

ಮುನಿರತ್ನ ಅವರು ನನ್ನ ಗಾಡ್‌ಫಾದರ್‌ ಅಲ್ಲ. ನಾನೊಬ್ಬ ನಟ, ಮುನಿರತ್ನ ನಿರ್ಮಾಪಕರು ಅಷ್ಟೇ. ಕುರುಕ್ಷೇತ್ರ ಸಿನಿಮಾ ಮುಗಿಯುತ್ತಿದ್ದಂತೆ ಅವರ ಹಾಗೂ ನನ್ನ ಸಂಬಂಧ ಮುಗಿದಿದೆ ಎಂದು ನಟ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಮುನಿರತ್ನ ಅವರು ನಿರ್ಮಾಪಕರು, ನಾನೊಬ್ಬ ನಟ ಅಷ್ಟೇ, ಕುರುಕ್ಷೇತ್ರ ಸಿನಿಮಾದಲ್ಲಿ ನನಗೊಂದು ಪಾತ್ರ ಕೊಟ್ಟಿದ್ದರು. ಅದನ್ನು ನಾನು ಮಾಡಿದ್ದೇನೆ. ನನ್ನ ಹಾಗೂ ಮುನಿರತ್ನ ನಡುವಿನ ಸಂಬಂಧ ಸಿನಿಮಾಗೆ ಮಾತ್ರ ಸೀಮಿತ ಎಂದು ಸ್ಪಷ್ಟಪಡಿಸಿದ್ದಾರೆ.

ಕಾರ್ಯಕರ್ತರಿಗೆ ವಿಷ ಹಾಕಲಾರೆ

ಕಾರ್ಯಕರ್ತರಿಗೆ ವಿಷ ಹಾಕಲಾರೆ

ನಾನು ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ನನ್ನ ವೈಯಕ್ತಿಕ ಕಾರಣಕ್ಕಾಗಿ ಪಕ್ಷದ ಕಾರ್ಯಕರ್ತರಿಗೆ ವಿಷ ಹಾಕುವ ಕೆಲಸವನ್ನು ಎಂದಿಗೂ ಮಾಡುವುದಿಲ್ಲ.‌ ಈ ಬಗ್ಗೆ ಹಲವು ವದಂತಿಗಳನ್ನು ಕ್ಷೇತ್ರದಲ್ಲಿ ಹಬ್ಬಿಸಿದ್ದಾರೆ. ಅವುಗಳಿಗೆ ಕಿವಿಗೊಡುವ ಕೆಲಸವನ್ನು ಕಾರ್ಯಕರ್ತರು ಮಾಡಬಾರದು. ಕೃಷ್ಣಮೂರ್ತಿ ಅವರ ಗೆಲುವಿಗೆ ಕೆಲಸ ಮಾಡಿ ಎಂದು ಕಾರ್ಯಕರ್ತರಲ್ಲಿ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು.

ಕಾಂಗ್ರೆಸ್ಸಿನ ಸಿಎಂ ಅಭ್ಯರ್ಥಿ ಯಾರು: ಡಿಕೆಶಿ ವಿರುದ್ದ ಮುನಿರತ್ನ ಸಿಡಿಸಿದ ಹೊಸ ಬಾಂಬ್

ಈ ಸಲ ಕಪ್ ನಮ್ದೆ!

ಈ ಸಲ ಕಪ್ ನಮ್ದೆ!

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವಿನ ರೇಸ್‌ನಲ್ಲಿ ಇಲ್ಲ ಎಂದು ಎಲ್ಲರೂ ಅಂದುಕೊಂಡಿದ್ದಾರೆ ಅದು ತಪ್ಪು, ತಳಮಟ್ಟದಲ್ಲಿ ಜೆಡಿಎಸ್ ಗೆಲುವಿನ ತರಂಗ ಕಾಣುತ್ತಿದೆ. ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯ ಹೆಚ್ಚಾಗಿರುವುದು ಗೊತ್ತಾಗುತ್ತಿದೆ. ಕೃಷ್ಣಮೂರ್ತಿ ಅವರ ತಂದೆ ವೆಂಕಟೇಶ್‌ ಜೆಡಿಎಸ್‌ಗಾಗಿ 25 ವರ್ಷ ದುಡಿದಿದ್ದಾರೆ. ಸೋತ ತಕ್ಷಣ ಪಕ್ಷ ಬಿಟ್ಟು ಹೋಗುವ ಅಭ್ಯರ್ಥಿಗಳಿಗಿಂತ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಿದ್ದು ಗೆಲ್ಲುವ ವಿಶ್ವಾಸ ಇದೆ ಎಂದರು.

  ನಾವು ತುಳಸಿ ಬೆಳೆಯೋದು!! ಗಾಂಜಾ ಅಲ್ಲಾ!! | Uddhav Thackeray | Oneindia Kannada
  ಜಾತಿ ತಂದಿದ್ದು ಕಾಂಗ್ರೆಸ್‌

  ಜಾತಿ ತಂದಿದ್ದು ಕಾಂಗ್ರೆಸ್‌

  ಇನ್ನು, ಕಾಂಗ್ರೆಸ್‌ನ ಜಾತಿ ಕಾರ್ಡ್‌ ಬಗ್ಗರ ಮಾತನಾಡಿದ ಅವರು, ಈಗ ಒಕ್ಕಲಿಗ ಜಾತಿಯನ್ನು ಚುನಾವಣೆಯಲ್ಲಿ ತಂದಿರುವ ಕಾಂಗ್ರೆಸ್‌ನವರೇ ಮುನಿರತ್ನಂ ಅವರನ್ನು ಈ ಹಿಂದೆ ಎರಡು ಬಾರಿ ಟಿಕೆಟ್ ನೀಡಿ ಗೆಲ್ಲಿಸಿದ್ದಾರೆ. ಆಗ ಇರದ ಜಾತಿ ಮೇಲಿನ ಪ್ರೀತಿ, ಅವರಿಗೆ ಈಗ ಬಂದಿದೆ. ನಮ್ಮ ಅಭ್ಯರ್ಥಿಯೂ ಒಕ್ಕಲಿಗ ಜಾತಿಗೆ ಸೇರಿದವರು ಎಂದು ಹೇಳಿದರು.

  English summary
  JDS Youth wing President Nikhil Kumaraswamy spoke about BJP candidate Muniratna. Nikhil Kumaraswamy is campaigning on behalf of JDS candidate V Krishnamurthy in RR city. Know more
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X