ಜೆಡಿಎಸ್ ಜತೆ ಮೈತ್ರಿಗೆ ಸಿದ್ಧ ಎಂದ ಜೆಡಿಯು ನಾಯಕ ಶರದ್ ಯಾದವ್
ಬೆಂಗಳೂರು, ಮಾರ್ಚ್ 30: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ಜೆಡಿಎಸ್ ಪಕ್ಷದೊಂದಿಗೆ ಜೆಡಿಯು ಮೈತ್ರಿ ಮಾಡಿಕೊಳ್ಳಲಿದೆ ಎಂದು ಜೆಡಿಯು ರಾಷ್ಟ್ರೀಯ ನಾಯಕ ಶರದ್ ಯಾದವ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಅವರು, ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇವೆ ಒಂದು ದಿನದೊಳಗೆ ನಿರ್ಧರಿಸಿ ತೀರ್ಮಾನ ತಿಳಿಸಲಿದ್ದೇವೆ. ಜೆಡಿಯು ಬಾಣದ ಚಿಹ್ನೆ ಕುರಿತಂತೆ ಕೋರ್ಟ್‌ನಲ್ಲಿ ತಕರಾರು ಇದೆ. ಸೋಮವಾರ ಈ ವಿಚಾರ ಇತ್ಯರ್ಥವಾಗಲಿದ್ದು, ಹೊಸ ಚಿಹ್ನೆಯೊಂದಿಗೆ ರಾಜ್ಯದ ವಿಧಾನಸಭೆ ಚುನಾವಣೆಗೆ ಹೊಸ ಜೆಡಿಯು ಬಣಕ್ಕೆ ಇಲ್ಲಿಂದಲೇ ಚಾಲನೆ ನೀಡಲಿದ್ದೇವೆ ಎಂದು ಸ್ಪಷ್ಟಪಡಿಸಿದರು
ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇವೆ ಎಂಬೆಲ್ಲ ವಿಚಾರವನ್ನು 24 ಗಂಟೆಯೊಳಗೆ ನಿರ್ಧರಿಸಿ ತೀರ್ಮಾನ ಕೈಗೊಳ್ಳಲಿದ್ದೇವೆ. ಸೋಮವಾರ ಅಧಿಕೃತವಾಗಿ ಹೊಸ ಬಣದೊಂದಿಗೆ ಸ್ಪರ್ಧೆ ವಿಚಾರವನ್ನು ತಿಳಿಸಲಿದ್ದೇವೆ ಎಂದು ವಿವರಿಸಿದರು.

ಕರ್ನಾಟಕದಲ್ಲಿ ಕೋಮುವಾದಿ ಶಕ್ತಿಯಾದ ಬಿಜೆಪಿಯನ್ನು ಕಿತ್ತೊಗೆಯುವುದು ಬಹಳ ಮುಖ್ಯವಾಗಿದೆ. ಆ ಕಾರಣಕ್ಕಾಗಿ ನಾವು ಜೆಡಿಎಸ್ ಅಥವಾ ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷದೊಂದಿಗೆ ಕೈ ಜೋಡಿಸಲು ಸಿದ್ಧ. ಕಾಂಗ್ರೆಸ್‌ನಲ್ಲಿ ಅವಕಾಶಗಳು ಮುಗಿದುಹೋಗಿವೆ. ಹಾಗಾಗಿ ಜೆಡಿಎಸ್ ನೊಂದಿಗೆ ಮೈತ್ರಿ ಸಾಧಿಸಲು ಇಚ್ಚಿಸಿದ್ದೇವೆ. ಈ ನಿಟ್ಟಿನಲ್ಲಿ ಮಾತುಕತೆ ನಡೆಸಿ 24 ಗಂಟೆಯೊಳಗೆ ನಿರ್ಧಾರಕ್ಕೆ ಬರಲಿದ್ದೇವೆ ಎಂಬ ಮಾಹಿತಿ ನೀಡಿದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕಾರ್ಯಕರ್ತರ ಸಭೆ ನಡೆಸಿ ಎಲ್ಲ ತೀರ್ಮಾನ ಕೈಗೊಳ್ಳಲಿದ್ದೇವೆ. ಬಿಜೆಪಿಯನ್ನು ಕರ್ನಾಟಕದಲ್ಲಿ ಸೋಲಿಸಲೇಬೇಕು. 2019ರ ಫೈನಲ್ ಚುನಾವಣೆಗೆ ರಾಜ್ಯದ ವಿಧಾನಸಭಾ ಚುನಾವಣೆ ಸೆಮಿಫೈನಲ್ ಎನಿಸಿದೆ. ಈ ನಿಟ್ಟಿನಲ್ಲಿ ಬಿಜೆಪಿ ವಿರುದ್ಧ ಜನಾದೇಶ ನೀಡಬೇಕಾಗಿದೆ ಎಂದು ಹೇಳಿದರು.












Click it and Unblock the Notifications