Get Updates
Get notified of breaking news, exclusive insights, and must-see stories!

ಬೆಂಗಳೂರು: ರಾತ್ರಿ ಕಳ್ಳರ ಕೈಚಳಕ- 12 ಲಕ್ಷ ಕಳ್ಳತನ

 stolen
ಬೆಂಗಳೂರು, ಜು.6: ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮನೆಯ ಕಿಟಕಿ ಗಾಜು ಒಡೆದು ಒಳನುಗ್ಗಿದ ಕಳ್ಳರು 12 ಲಕ್ಷ ರೂ. ನಗದು ಮತ್ತು 440 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ತಿಲಕ್‌‌ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜಯನಗರ 4ನೇ 'ಟಿ' ಬ್ಲಾಕ್‌ ನಿವಾಸಿ ಕೃಷ್ಣಾ ಅಯ್ಯರ್‌‌‌ ಮನೆಯಲ್ಲಿ ಕಳ್ಳತನವಾಗಿದ್ದು ಪೊಲೀಸರಿಗೆ ದೂರು ನೀಡಿದ್ದಾರೆ.

ಕೃಷ್ಣಾ ಅಯ್ಯರ್‌ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಶುಕ್ರವಾರ ಸಂಜೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ಜೆ.ಪಿ.ನಗರದ ಪುಟ್ಟೇನಹಳ್ಳಿಯ ಕಲ್ಯಾಣ ಮಂಟಪಕ್ಕೆ ಹೋಗಿದ್ದರು. ಈ ಸಂದರ್ಭದಲ್ಲಿ ಕಿಟಕಿ ಗಾಜು ಒಡೆದ ಕಳ್ಳರು ಬೀರುವಿನಲ್ಲಿಟ್ಟಿದ್ದ 12 ಲಕ್ಷ ರೂ. ಮತ್ತು 440 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.[ಮೇಲ್ಮನೆ ಚುನಾವಣೆ: ಜೆಡಿಎಸ್‌ನಿಂದ ಕೋಟಿ ಕೋಟಿ ಡೀಲ್‌?]

ಕೃಷ್ಣಾ ಅಯ್ಯರ್‌ ಕಾರ್ಯಕ್ರಮ ಮುಗಿಸಿ ರಾತ್ರಿ ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಗೊತ್ತಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+