ನಿವೃತ್ತ ಐಎಎಸ್ ಅಧಿಕಾರಿ ಮಗನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು, ನವೆಂಬರ್ 11: ನಿವೃತ್ತ ಐಎಎಸ್ ಅಧಿಕಾರಿ ಪುತ್ರ ದೊಮ್ಮಲೂರಿನ ಅಪಾರ್ಟ್‌ಮೆಂಟ್‌ ಒಂದರಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಜಾರ್ಖಂಡ್ ಮೂಲದ ನಿವೃತ್ತ ಐಎಎಸ್ ಅಧಿಕಾರಿ ಹರೇಂದ್ರ ಸಿಂಗ್ ಅವರ ಪುತ್ರ ರೋಹಿತ್ ಸಿಂಗ್(27) ಆತ್ಮಹತ್ಯೆ ಮಾಡಿಕೊಂಡವರು.

ಘಟನೆಗೆ ನಿಖರ ಕಾರಣ ಇನ್ನೂ ಕೂಡ ತಿಳಿದುಬಂದಿಲ್ಲ. ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಇಂದಿರಾನಗರ ಪೊಲೀಸರು ಹೇಳಿದ್ದಾರೆ. ಹರೇಂದ್ರ ಸಿಂಗ್ ಅವರು ಜಾರ್ಖಂಡ್ ಮುಖ್ಯಮಂತ್ರಿ ಸಲಹೆಗಾರರಾಗಿದ್ದರು.

Jharkhand Retired IAS Officer son Found Dead

ಅವಿವಾಹಿತರಾಗಿರುವ ಪುತ್ರ ರೋಹಿತ್ ಸಿಂಗ್ ಕೆಲ ವರ್ಷಗಳಿಂದ ದೊಮ್ಮಲೂರಿನಲ್ಲಿರುವ ಸಾಯಿಕೃಷ್ಣ ಅಪಾರ್ಟ್‌ಮೆಂಟ್‌ನಲ್ಲಿ ಒಬ್ಬರೇ ನೆಲೆಸಿದ್ದರು.

ಎಂಜಿ ರಸ್ತೆಯಲ್ಲಿರುವ ಕೊಟೆಕ್ ಮಹೇಂದ್ರ ಬ್ಯಾಂಕ್‌ನಲ್ಲಿ ರೋಹಿತ್ ಡೆಪ್ಯೂಟಿ ಮ್ಯಾನೇಜರ್ ಆಗಿದ್ದರು. ಶನಿವಾರ ಬೆಳಗ್ಗೆ ರೋಹಿತ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದ್ದು ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+