ಬೆಂಗಳೂರಲ್ಲಿ ಜಿಹಾದಿ ಗ್ಯಾಂಗ್‌ ಮುಖ್ಯಸ್ಥನ ಬಂಧನ

ಬೆಂಗಳೂರು, ಜನವರಿ 16 : ಬೆಂಗಳೂರಿನಲ್ಲಿ ಜಿಹಾದಿ ಗ್ಯಾಂಗ್‌ನ ಮುಖ್ಯಸ್ಥನನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಬಿ ಮತ್ತು ರಾಜ್ಯ ಗುಪ್ತಚರ ಇಲಾಖೆ ಪೊಲೀಸರು ಬಂಧಿತನ ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರಲ್ಲಿ ಜಿಹಾದಿ ತಂಡವನ್ನು ಕಟ್ಟಿದ್ದ ಮೆಹಬೂಬ್ ಪಾಷನನ್ನು ಬುಧವಾರ ರಾತ್ರಿ ಬಂಧಿಸಲಾಗಿದ್ದು, ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ನೆಲೆಸಿರುವ ಕುರಿತು ಖಚಿತ ಮಾಹಿತಿ ಪಡೆದು ದಾಳಿ ನಡೆಸಲಾಗಿತ್ತು.

ಬೆಂಗಳೂರು ನಗರದಲ್ಲಿ ಜಿಹಾದಿ ತಂಡದ ನೇತೃತ್ವ ವಹಿಸಿದ್ದ ಮೆಹಬೂಬ್ ಪಾಷ ಬನ್ನೇರುಘಟ್ಟ ರಸ್ತೆಯಲ್ಲಿ ಅಲ್ ಹಿಂದ್ ಟ್ರಸ್ಟ್ ಸ್ಥಾಪಿಸಿದ್ದ. ಟ್ರಸ್ಟ್ ಹೆಸರಿನಲ್ಲಿ ಗುಂಡ್ಲುಪೇಟೆ ತಾಲೂಕಿನಲ್ಲಿ ಜಮೀನು ಖರಿದೀಗೆ ಯೋಜನೆ ರೂಪಿಸಿದ್ದ.

Jihadi Gang Leader Mehabooba Pasha Arrested

ಐಎಸ್‌ಐಎಸ್ ಉಗ್ರರ ಜೊತೆ ಮೆಹಬೂಬ್ ಪಾಷ ನಂಟು ಹೊಂದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಪೊಲೀಸರು ಆತನಗಾಗಿ ಹುಡುಕಾಟ ನಡೆಸುತ್ತಿದ್ದರು. ಸದ್ದುಗುಂಟೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದ ಇವರು ತಮಿಳನಾಡು ಅಪರಾಧ ಪತ್ತೆದಳ ನಡೆಸಿದ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದರು.

ಗುಂಡ್ಲುಪೇಟೆಯಲ್ಲಿ ಬಂಧಿತರಾದ ಶಂಕಿತ ಉಗ್ರರಿಗೂ ಮೆಹಬೂಬ್ ಷಾಷಗೂ ನಂಟಿದೆಯೇ? ಎಂದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಮೆಹಬೂಬ್ ಪಾಷಗೆ ಯಾರು ಬೆಂಬಲ ನೀಡುತ್ತಿದ್ದರು ಎಂದು ಪೊಲೀಸರು ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+