ಜಿಂದಾಲ್ ವಿವಾದ : ಬಿಜೆಪಿ ಯುವ ಮೋರ್ಚಾ ಸದಸ್ಯರು ಪೊಲೀಸ್ ವಶಕ್ಕೆ

ಬೆಂಗಳೂರು, ಜೂನ್ 13 : ಜಿಂದಾಲ್‌ಗೆ 3667 ಎರರೆ ಜಮೀನು ನೀಡುವ ಕರ್ನಾಟಕ ಸರ್ಕಾರದ ತೀರ್ಮಾನ ಖಂಡಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ನಡೆಸಿತು. ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

ಕರ್ನಾಟಕ ಬಿಜೆಪಿ ಯುವ ಮೋರ್ಚಾ ಘಟಕದ ಸದಸ್ಯರು ಗುರುವಾರ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದರು. ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ ನೇತೃತ್ವದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದರು.

ಆರ್.ಅಶೋಕ , ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ, ತಮ್ಮೇಶ್ ಗೌಡ, ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಬೆಂಗಳೂರು ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಪ್ತಗಿರಿ ಗೌಡ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಮೌರ್ಯ ಸರ್ಕಲ್ ಬಳಿಯಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ನಗರದ ಯುವ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು, ಆರ್. ಅಶೋಕ,ರವಿಕುಮಾರ್, ವಿಜಯೇಂದ್ರ ಮುಂತಾದವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಏನಿದು ಜಿಂದಾಲ್ ವಿವಾದ?

ಏನಿದು ಜಿಂದಾಲ್ ವಿವಾದ?

ಕರ್ನಾಟಕ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಬಳ್ಳಾರಿಯಲ್ಲಿರುವ ಜಿಂದಾಲ್ ಕಂಪನಿಗೆ ತೋರಣಗಲ್ಲು ಮತ್ತು ಕರೆಕುಪ್ಪ ಗ್ರಾಮಗಳಲ್ಲಿ 2001 ಎಕರೆ, ಸಂಡೂರು ತಾಲೂಕಿನ ಮುಸೇನಾಯಕನಹಳ್ಳಿ, ಯರಬನಹಳ್ಳಿ ಗ್ರಾಮಗಳಲ್ಲಿ 1666 ಎಕರೆ ಸೇರಿ ಒಟ್ಟು 3667 ಎಕರೆ ಭೂಮಿಯನ್ನು ಮಾರುಕಟ್ಟೆ ದರಕ್ಕಿಂತ ಕಡಿಮೆ ದರದಲ್ಲಿ ಕ್ರಯಪತ್ರ ಮಾಡಿಕೊಡಲು ಒಪ್ಪಿಗೆ ನೀಡಿದೆ. ಸರ್ಕಾರ ಈ ತೀರ್ಮಾನ ವಿವಾದಕ್ಕೆ ಕಾರಣವಾಗಿದೆ.

ಬಿಜೆಪಿಯಿಂದ ಬೃಹತ್ ಹೋರಾಟ

ಬಿಜೆಪಿಯಿಂದ ಬೃಹತ್ ಹೋರಾಟ

ಮಾರುಕಟ್ಟೆ ದರಕ್ಕಿಂತ ಕಡಿಮೆ ದರದಲ್ಲಿ ಕ್ರಯಪತ್ರ ಮಾಡಿಕೊಡಲು ಒಪ್ಪಿಗೆ ನೀಡಿರುವ ಸರ್ಕಾರ ತೀರ್ಮಾನವನ್ನು ಪ್ರತಿಪಕ್ಷ ಬಿಜೆಪಿ ಖಂಡಿಸಿದೆ. ಸರ್ಕಾರದ ವಿರುದ್ಧ ಇದೇ ವಿಚಾರ ಮುಂದಿಟ್ಟುಕೊಂಡು ಹೋರಾಟ ಮಾಡುತ್ತಿದೆ. ಗುರುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಜೆಪಿ ಯುವಮೋರ್ಚಾ ಸದಸ್ಯರು ಪ್ರತಿಭಟನೆ ನಡೆಸಿದರು.

ಅಹೋರಾತ್ರಿ ಧರಣಿ

ಅಹೋರಾತ್ರಿ ಧರಣಿ

ಜೂನ್ 14 ರಿಂದ 16ರ ತನಕ ಬೆಂಗಳೂರಿನಲ್ಲಿ ಬಿಜೆಪಿ ಅಹೋರಾತ್ರಿ ಧರಣಿ ಹಮ್ಮಿಕೊಂಡಿದೆ. ಜಿಂದಾಲ್ ವಿಚಾತದಲ್ಲಿ ಸರ್ಕಾರ ತೆಗೆದುಕೊಂಡು ತೀರ್ಮಾನವನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಹೋರಾಟ ನಡೆಯಲಿದೆ.

ಕರ್ನಾಟಕ ಸರ್ಕಾರ ಹೇಳುವುದೇನು?

ಕರ್ನಾಟಕ ಸರ್ಕಾರ ಹೇಳುವುದೇನು?

ಜಿಂದಾಲ್ ಪ್ರಕರಣದಲ್ಲಿ ವಿರೋಧಗಳು ಎದುರಾಗುತ್ತಿದ್ದಂತೆ ಸರ್ಕಾರ ತನ್ನ ತೀರ್ಮಾನವನ್ನು ಪುನರ್ ಪರಿಶೀಲನೆ ಮಾಡಲು ಮುಂದಾಗಿದೆ. 'ಜಿಂದಾಲ್ ಗೆ ಭೂಮಿ ಮಾರಾಟ ಮಾಡುವ ವಿಷಯದ ಕುರಿತು ಇಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹಾಗೂ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್‌ ಅವರ ಜೊತೆ ಚರ್ಚಿಸಿದ್ದೇನೆ. ಈ ವಿಷಯವನ್ನು ಮರುಪರಿಶೀಲನೆ ಮಾಡಿ ಸಂಪುಟ ಸಭೆಯಲ್ಲಿ ಚರ್ಚೆಗಾಗಿ ಪುನಃ ಮಂಡಿಸುವಂತೆ ಸೂಚಿಸಿದ್ದೇನೆ' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+