ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜ್ಞಾನಭಾರತಿ ಸಾಮೂಹಿಕ ಅತ್ಯಾಚಾರ ಪ್ರಕರಣ: 7 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 22: ಜ್ಞಾನಭಾರತಿ ಆವರಣದಲ್ಲಿ 2012ರಲ್ಲಿ ನಡೆದಿದ್ದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳಿಗೆ ಕೋರ್ಟ್ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.

ಜ್ಞಾನಭಾರತಿ ಆವರಣದಲ್ಲಿ 2012ರಲ್ಲಿ ನಡೆದಿದ್ದ ಕಾನೂನು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ 7 ದೋಷಿಗಳಿಗೆ ಅಧೀನ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಕಾಯಂಗೊಳಿಸಿದೆ.

ಜ್ಞಾನಭಾರತಿ ಬಳಿ ಲಾ ವಿದ್ಯಾರ್ಥಿನಿಯ ಸಾಮೂಹಿಕ ರೇಪ್ಜ್ಞಾನಭಾರತಿ ಬಳಿ ಲಾ ವಿದ್ಯಾರ್ಥಿನಿಯ ಸಾಮೂಹಿಕ ರೇಪ್

ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದ ನೇಪಾಳ ಮೂಲದ ಯುವತಿ, 2012ರ ಅ.13ರಂದು ಜ್ಞಾನಭಾರತಿ ಆವರಣದಲ್ಲಿ ತನ್ನ ಪ್ರಿಯಕರನ ಜತೆ ಕಾರಿನಲ್ಲಿ ಕುಳಿತು ಮಾತನಾಡುತ್ತಿದ್ದಳು.

Jnana Bharathi Gangrape Case: Karnataka High Court Upholds Life Term For 7 People

ಜೀವಾವಧಿ ಶಿಕ್ಷೆ ರದ್ದುಪಡಿಸಲು ಕೋರಿ ದೊಡ್ಡ ಈರಯ್ಯ ಸೇರಿ 7 ದೋಷಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ವಿ.ವೀರಪ್ಪ ಮತ್ತು ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ವಿಭಾಗೀಯ ಪೀಠ ಬುಧವಾರ ವಜಾಗೊಳಿಸಿತು.

Recommended Video

ಗಾಂಜಾ ಕೆಟ್ಟದಾ ಈ ಸ್ಟೋರಿ ನೋಡಿ | Unknown facts about Cannabis | Oneindia Kannada

ಜ್ಞಾನಭಾರತಿ ಕ್ಯಾಂಪಸ್‌ನಲ್ಲಿರುವ ಹಳೆ ಪರೀಕ್ಷಾ ಭವನದ ಬಳಿ ರಾತ್ರಿ ಶ್ರೀಗಂಧ ಕಳವಿಗೆ ಬಂದ ಎಂಟು ಆರೋಪಿಗಳು, ಯುವತಿಯ ಗೆಳೆಯ ನಿರ್ಮಲ್ ಮೇಲೆ ಹಲ್ಲೆ ನಡೆಸಿದ್ದರು. ನಂತರ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು. ಈ ಸಂಬಂಧ ಜ್ಞಾನಭಾರತಿ ಠಾಣೆಗೆ ಯುವತಿ ದೂರು ನೀಡಿದ್ದಳು.

English summary
The Karnataka High Court on Wednesday confirmed the life sentence awarded by a trial court to seven people involved in the gangrape of a law student on the Jnana Bharathi campus in the city in October 2012.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X