ಮಾರ್ಚ್ 15ರಂದು ಬೆಂಗಳೂರಲ್ಲಿ ಬೃಹತ್ ಉದ್ಯೋಗ ಮೇಳ

ಬೆಂಗಳೂರು, ಮಾರ್ಚ್ 09 : ಬೆಂಗಳೂರು ನಗರದಲ್ಲಿ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವವರು ಆನ್‌ಲೈನ್ ಮೂಲಕ ತಮ್ಮ ಹೆಸರು ನೋಂದಣಿ ಮಾಡಿಸಬಹುದಾಗಿದೆ.

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ. ವಿ. ಸದಾನಂದ ಗೌಡ ಈ ಕುರಿತು ಮಾಹಿತಿ ನೀಡಿದ್ದಾರೆ. "ಮಾರ್ಚ್ 15ರಂದು ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿರುವ ಎಸ್. ಜಿ. ಇಂಟರ್ ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಉದ್ಯೋಗ ಮೇಳ ನಡೆಯಲಿದೆ" ಎಂದು ಹೇಳಿದ್ದಾರೆ.

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಬಯಸುವವರು ಆನ್‌ಲೈನ್ ಮೂಲಕ ಹೆಸರು ನೋಂದಣಿ ಮಾಡಿಸಿಕೊಳ್ಳಬೇಕು. 0806197858 ನಂಬರ್‌ಗೆ ಮಿಸ್ ಕಾಲ್ ಕೊಡುವ ಮೂಲಕ ಸಹ ನೋಂದಣಿ ಮಾಡಿಕೊಳ್ಳಬಹುದು.

Job Fair In Bengaluru On March 15

ಐಟಿ, ಡಾಟಾ ಎಂಟ್ರಿ, ಬ್ಯಾಂಕ್/ವಿಮೆ, ಅಕೌಂಟ್ಸ್, ರಿಟೇಲ್, ಟೆಲಿಕಾಂ, ಆಟೋಮೊಬೈಲ್, ಟೆಕ್ಸ್‌ಟೈಲ್, ಮಾರ್ಕೆಟಿಂಗ್ ಸೇರಿದಂತೆ ವಿವಿಧ ಉದ್ಯಮಗಳ ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ. ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಿವೆ.

ಮಾರ್ಚ್ 15ರ ಭಾನುವಾರ ಬೆಳಗ್ಗೆ 9 ರಿಂದ ಮಧ್ಯಾಹ್ನ 3.30ರ ತನಕ ಉದ್ಯೋಗ ಮೇಳ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನಿರುದ್ಯೋಗಿ ಯುವಕ/ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ನೋಂದಣಿ ಮಾಡಿಕೊಳ್ಳಲು ವಿಳಾಸ

https://bangaloreudyogamela.in/

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+