ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾರ್ಚ್ 15ರಂದು ಬೆಂಗಳೂರಲ್ಲಿ ಬೃಹತ್ ಉದ್ಯೋಗ ಮೇಳ

|
Google Oneindia Kannada News

ಬೆಂಗಳೂರು, ಮಾರ್ಚ್ 09 : ಬೆಂಗಳೂರು ನಗರದಲ್ಲಿ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವವರು ಆನ್‌ಲೈನ್ ಮೂಲಕ ತಮ್ಮ ಹೆಸರು ನೋಂದಣಿ ಮಾಡಿಸಬಹುದಾಗಿದೆ.

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ. ವಿ. ಸದಾನಂದ ಗೌಡ ಈ ಕುರಿತು ಮಾಹಿತಿ ನೀಡಿದ್ದಾರೆ. "ಮಾರ್ಚ್ 15ರಂದು ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿರುವ ಎಸ್. ಜಿ. ಇಂಟರ್ ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಉದ್ಯೋಗ ಮೇಳ ನಡೆಯಲಿದೆ" ಎಂದು ಹೇಳಿದ್ದಾರೆ.

ಗೆಜೆಟೆಡ್ ಪ್ರೊಬೇಷನರ್ ಹುದ್ದೆ; ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ ಗೆಜೆಟೆಡ್ ಪ್ರೊಬೇಷನರ್ ಹುದ್ದೆ; ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಬಯಸುವವರು ಆನ್‌ಲೈನ್ ಮೂಲಕ ಹೆಸರು ನೋಂದಣಿ ಮಾಡಿಸಿಕೊಳ್ಳಬೇಕು. 0806197858 ನಂಬರ್‌ಗೆ ಮಿಸ್ ಕಾಲ್ ಕೊಡುವ ಮೂಲಕ ಸಹ ನೋಂದಣಿ ಮಾಡಿಕೊಳ್ಳಬಹುದು.

ಹಾಸನ; 34 ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಜಿ ಹಾಕಿ ಹಾಸನ; 34 ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಜಿ ಹಾಕಿ

Job Fair In Bengaluru On March 15

ಐಟಿ, ಡಾಟಾ ಎಂಟ್ರಿ, ಬ್ಯಾಂಕ್/ವಿಮೆ, ಅಕೌಂಟ್ಸ್, ರಿಟೇಲ್, ಟೆಲಿಕಾಂ, ಆಟೋಮೊಬೈಲ್, ಟೆಕ್ಸ್‌ಟೈಲ್, ಮಾರ್ಕೆಟಿಂಗ್ ಸೇರಿದಂತೆ ವಿವಿಧ ಉದ್ಯಮಗಳ ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ. ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಿವೆ.

ಮಾರ್ಚ್ 15ರ ಭಾನುವಾರ ಬೆಳಗ್ಗೆ 9 ರಿಂದ ಮಧ್ಯಾಹ್ನ 3.30ರ ತನಕ ಉದ್ಯೋಗ ಮೇಳ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ನಿರುದ್ಯೋಗಿ ಯುವಕ/ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಅರಣ್ಯ ಇಲಾಖೆ ನೇಮಕಾತಿ; 339 ಹುದ್ದೆಗಳಿಗೆ ಅರ್ಜಿ ಹಾಕಿ ಅರಣ್ಯ ಇಲಾಖೆ ನೇಮಕಾತಿ; 339 ಹುದ್ದೆಗಳಿಗೆ ಅರ್ಜಿ ಹಾಕಿ

ನೋಂದಣಿ ಮಾಡಿಕೊಳ್ಳಲು ವಿಳಾಸ

https://bangaloreudyogamela.in/

English summary
Job fair organized in Bengaluru on March 15, 2020. Fair will be held in SG International public school Nandini layout.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X