ನಿರುದ್ಯೋಗಿಗಳಿಗೆ ಅವಕಾಶ: ಮಾರ್ಚ್ 8 ರಂದು ಉದ್ಯೋಗ ಮೇಳ

ಬೆಂಗಳೂರು, ಮಾರ್ಚ್ 6: ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ (NCSP) ಅಡಿಯಲ್ಲಿ ನಿರುದ್ಯೋಗಿ ಯುವಕ/ಯುವತಿಯರಿಗೆ ಮಾರ್ಚ್‌ 8ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗಳು, ಏಪ್ಯಾಟಿಕ್ ಕಟ್ಟಡ, ಎರಡನೇ ಮಹಡಿ, ಕೆಂಪೇಗೌಡ ರಸ್ತೆ, ಬೆಂಗಳೂರು - 560 009 ಹಾಗೂ ಖಾಸಗಿ ನಿಯೋಜಕರುಗಳ ಸಂಯುಕ್ತ ಆಶ್ರಯದಲ್ಲಿ ಈ ಉದ್ಯೋಗ ಮೇಳವು ನಡೆಯಲಿದೆ.

ಮಾರ್ಚ್ 8 ರ ಶುಕ್ರವಾರ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಬಿ.ಟಿ.ಎಲ್. ಇನ್ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್‌ # 259/3, ಬೊಮ್ಮಸಂದ್ರ ಕೈಗಾರಿಕಾ ಪ್ರದೇಶ, ಹೊಸೂರು ರಸ್ತೆ, ಬೆಂಗಳೂರು - 560 099 ಇಲ್ಲಿ ನೇರ ಸಂದರ್ಶನ ನಡೆಯಲಿದೆ.

Job fare in Bengaluru on March 08

ಈ ಉದ್ಯೋಗ ಮೇಳದಲ್ಲಿ ಖಾಸಗಿ ವಲಯದ 50 ಕ್ಕೂ ಹೆಚ್ಚು ಹೆಸರಾಂತ ಸಂಸ್ಥೆಗಳು ಭಾಗವಹಿಸುತ್ತಿದ್ದು, ವಿವಿಧ ತಾಂತ್ರಿಕ ಹಾಗೂ ತಾಂತ್ರಿಕೇತರ ಹುದ್ದೆಗಳಿಗೆ ಸ್ಥಳದಲ್ಲೇ ನೇರವಾಗಿ ಆಯ್ಕೆ ಮಾಡಲಿದ್ದಾರೆ.

ಅಕ್ಷರಸ್ಥರು, ಅರ್ಧದಲ್ಲಿಯೇ ಶಾಲೆ ಬಿಟ್ಟವರು ಹಾಗೂ ಎಸ್.ಎಸ್.ಎಲ್.ಸಿ. ಫೇಲ್/ ಪಾಸ್, ಪಿ.ಯು.ಸಿ, ಐ.ಟಿ.ಐ. ಡಿಪ್ಲೋಮ (ಎಲ್ಲಾ ಟ್ರೇಡ್‌ಗಳು), ಪದವೀಧರರು ಹಾಗೂ ಸ್ನಾತಕೋತ್ತರ ಪದವಿ ಹೊಂದಿದವರಿಗೆ ಉದ್ಯೋಗ ಅವಕಾಶಗಳು ಲಭ್ಯವಿದೆ. ಉದ್ಯೋಗಕಾಂಕ್ಷಿಗಳು ತಮ್ಮ ವೈಯಕ್ತಿಕ (ಬಯೋಡಾಟಾ) ವಿವರಗಳೊಂದಿಗೆ "ಉದ್ಯೋಗ ಮೇಳ' ದಲ್ಲಿ ಭಾಗವಹಿಸಿ ಉದ್ಯೋಗ ದೊರೆಯುವ ಸದಾವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+