Jobs Alert: ಕೆಲಸ ಹುಡುಕುತ್ತಿರುವ ಕನ್ನಡಿಗರಿಗೆ ಗುಡ್ ನ್ಯೂಸ್!

ಬೆಂಗಳೂರು: ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉದ್ಯೋಗ ಆಕಾಂಕ್ಷಿಗಳಿಗಾಗಿ ಉತ್ತಮ ಅವಕಾಶ ಒದಗಿ ಬಂದಿದೆ. ಎಸ್‌ಎಸ್‌ಎಸ್‌ಸಿ ಹಾಗೂ ಪಿಯುಸಿ ಓದಿದವರಿಂದ ಹಿಡಿದು, ಪದವಿ ಪಡೆದವರ ತನಕ ಉದ್ಯೋಗ ಪಡೆಯಲು ಅವಕಾಶ ಇಲ್ಲಿದೆ. ಹಾಗಾದರೆ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ.

ಅಂದಹಾಗೆ ಬೆಂಗಳೂರಿನ ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿ ವತಿಯಿಂದ ಸೆಪ್ಟೆಂಬರ್ 14 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 3.00 ರವರೆಗೆ ಸಂಚಾರಿ ಉದ್ಯೋಗ ನೋಂದಣಿ ಶಿಬಿರ ಆಯೋಜಿಸಲಾಗಿದೆ. ದೇವನಹಳ್ಳಿ ತಾಲೂಕಿನ ಜಿಲ್ಲಾಡಳಿತ ಭವನದಲ್ಲಿ ಇರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ, ಕೊಠಡಿ ಸಂಖ್ಯೆ: 132 ಸೆಪ್ಟೆಂಬರ್ 14 ರಂದು ಸಂಚಾರಿ ಉದ್ಯೋಗ ನೋಂದಣಿ ಶಿಬಿರ ನಡೆಯಲಿದೆ. ಹಾಗಾದರೆ ಉದ್ಯೋಗ ಆಕಾಂಕ್ಷಿಗಳು ಏನು ಮಾಡಬೇಕು? ಮುಂದೆ ಓದಿ.

Jobs in Bengaluru for SSLC PUC And Graduates

ಉದ್ಯೋಗ ಪಡೆಯಲು ನೋಂದಣಿ ಹೇಗೆ?

ಅಷ್ಟಕ್ಕೂ ಎಸ್‌ಎಸ್‌ಎಲ್‌ಸಿ & ಪಿಯುಸಿ ಸೇರಿದಂತೆ ಬಿ.ಎ, ಬಿ.ಕಾಂ, ಬಿಎಸ್ಸಿ, ಬಿ.ಎಡ್, ಡಿ.ಎಡ್, ಬಿ.ಬಿ.ಎ, ಬಿ.ಸಿ.ಎ, ಸೀನಿಯರ್ ಟೈಪಿಂಗ್ ಮತ್ತು ಶೀಘ್ರಲಿಪಿಗಾರರ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ದಾಖಲಾತಿಗಳ ಮೂಲಪ್ರತಿ ಹಾಗೂ ನಕಲು ಅಂದರೆ ಜೆರಾಕ್ಸ್ ಕಾಪಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ನ ಪ್ರತಿಗಳು ಹಾಗೂ ಎರಡು ಪಾಸ್ ಪೋರ್ಟ್ ಅಳತೆ ಫೋಟೋ ಜೊತೆಗೆ ಶಿಬಿರ ನಡೆಯುವ ಸ್ಥಳದಲ್ಲಿ ಹಾಜರಾಗಬೇಕಿದೆ. ಈ ಎಲ್ಲಾ ದಾಖಲೆಗಳ ಮೂಲಕ ನೋಂದಣಿ ಮಾಡಿಸಿಕೊಳ್ಳಬಹುದು.

ಯಾರಿಗೆಲ್ಲಾ ಅವಕಾಶ ಇದೆ?

ಬೆಂಗಳೂರಿನ ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿ ವತಿಯಿಂದ ನಡೆಯುತ್ತಿರುವ ಸಂಚಾರಿ ಉದ್ಯೋಗ ನೋಂದಣಿ ಶಿಬಿರದಲ್ಲಿ, ಉದ್ಯೋಗ ನೋಂದಣಿ ಮಾಡಬಯಸುವ ಅಭ್ಯರ್ಥಿಗಳು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿವಾಸಿಗಳೇ ಆಗಿರಬೇಕು. ಇದರ ಜೊತೆಗೆ ಮೇಲೆ ತಿಳಿಸಿದ ಎಲ್ಲಾ ದಾಖಲೆಗಳ ಸಮೇತ ನೋಂದಣಿ ನಡೆಯುವ ಸ್ಥಳಕ್ಕೆ ಹಾಜರಾಗಬೇಕು ಎಂದು ಮಾಹಿತಿ ನೀಡಲಾಗಿದೆ.

ಅಭ್ಯರ್ಥಿಗಳು ನೋಂದಣಿ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿ, ಏಷ್ಯಾಟಿಕ ಕಟ್ಟಡ, 2ನೇ ಮಹಡಿ, ಕೆಂಪೇಗೌಡ ರಸ್ತೆ, ಬೆಂಗಳೂರು-09 ಈ ವಿಳಾಸವನ್ನು ಸಂಪರ್ಕಿಸಬಹುದು. ಅಥವಾ ದೂರವಾಣಿ ಸಂಖ್ಯೆ 080-22374582, 9448220647 ರ ಮೂಲಕ ಕೂಡ ಸಂಪರ್ಕ ಮಾಡಬಹುದು ಎಂದು ಉಪಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+