Journalist: ಪತ್ರಿಕೋದ್ಯಮ ಕೇವಲ ಕಾವಲು ನಾಯಿ ಅಷ್ಟೇ ಅಲ್ಲ ರಾತ್ರಿ ಕಾವಲುಗಾರನೂ ಹೌದು: ಸಿಎಂ ಬೊಮ್ಮಾಯಿ
ಪತ್ರಿಕೋದ್ಯಮ ವಾಚ್ ಡಾಗ್ ಅಷ್ಟೇ ಅಲ್ಲ. ನೈಟ್ ವಾಚಮನ್ ಕೂಡ. ಆ ರೀತಿಯ ಕೆಲಸವನ್ನು ನೀವು ಮಾಡಿದ್ದಿರಿ. ನಿಮ್ಮ ವೃತ್ತಿಧರ್ಮವನ್ನು ಇನ್ನಷ್ಟು ಗಟ್ಟಿಯಾಗಿ ಪ್ರದಿಪಾದಿಸಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರು, ಮಾರ್ಚ್ 13: ಪತ್ರಿಕೋದ್ಯಮ ವಾಚ್ ಡಾಗ್ ಅಷ್ಟೇ ಅಲ್ಲ. ನೈಟ್ ವಾಚಮನ್ ಕೂಡ. ಆ ರೀತಿಯ ಕೆಲಸವನ್ನು ನೀವು ಮಾಡಿದ್ದಿರಿ. ನಿಮ್ಮ ವೃತ್ತಿಧರ್ಮವನ್ನು ಇನ್ನಷ್ಟು ಗಟ್ಟಿಯಾಗಿ ಪ್ರದಿಪಾದಿಸಲಿ ಎಂದು ನಿಮಗೆ ಪ್ರಶಸ್ತಿ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುರಸ್ಕೃತರಿಗೆ ಅಭಿನಂದನೆ ತಿಳಿಸಿದರು.

ಬೆಂಗಳೂರಿನಲ್ಲಿ ಸೋಮವಾರ ಕರ್ನಾಟಕ ಮಾಧ್ಯಮ ಅಕಾಡೆಮಿಯ ಮತ್ತು ವಾರ್ತಾ ಇಲಾಖೆಯ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಶಸ್ತಿ ಸಿಗುವಂತಹದ್ದು ಇನ್ನಷ್ಟು ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಲಿ ಅಂತ ಎನ್ನುವುದು ನನ್ನ ಭಾವನೆ. ನೀವು ಒಳ್ಳೆಯ ಕೆಲಸ ಮಾಡಿದ್ದಕ್ಕೆ ಗುರುತಿಸಿರುತ್ತಾರೆ. ಪ್ರಶಸ್ತಿಯ ಪಾವಿತ್ರ್ಯತೆಯು ನಿಮ್ಮ ವೃತ್ತಿಧರ್ಮ ಇನ್ನಷ್ಟು ಗಟ್ಟಿಯಾಗಿ ಪ್ರದಿಪಾದಿಸುವಂತೆ ಸೂಚಿಸುತ್ತದೆ ಎಂದರು.
ಪತ್ರಿಕೋದ್ಯಮ ತುಂಬಾ ಹೆಳೇ ವೃತ್ತಿ. ವಿಶ್ವದ ನಾಗರಿಕತೆಯ ಬೆಳವಣಿಗೆಯಲ್ಲಿ ಬಹಳ ದೊಡ್ಡ ಪಾತ್ರ ಅದರದ್ದು. ತಂತ್ರಜ್ಞಾನ ಹೆಚ್ಚಾದಂತೆ ಪತ್ರಿಕೋದ್ಯಮದಲ್ಲಿ ದೊಡ್ಡ ಬದಲಾವಣೆ ಆಗಿದೆ. ವಿಶ್ವ ಮಹಾಯುದ್ಧ 1 ಹಾಗೂ 2 ರ ಬಳಿಕ ಮಷೀನ್ ಮ್ಯಾನುಫ್ಯಾಕ್ಚುರಿಂಗ್ ಮತ್ತು ಪತ್ರಿಕೋದ್ಯಮದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ವರ್ಡ್ ಆರ್ಡರ್ ಕೂಡ ಬದಲಾವಣೆ ಆಗಿದೆ. ಭಾರತದಲ್ಲಿ ಸ್ವಾತಂತ್ರ್ಯ ಪೂರ್ವದ ಪತ್ರಿಕೋದ್ಯಮ ಹಾಗೂ ಸ್ವಾತಂತ್ರ್ಯ ನಂತರದ ಪತ್ರಿಕೋದ್ಯಮದಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಪತ್ರಿಕೋದ್ಯಮದ ಪಾತ್ರ ಮಹತ್ವದ್ದಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಮಟ್ಟದ ಪತ್ರಕರ್ತರಿಗೂ ಪ್ರೋತ್ಸಾಹ ನೀಡಿ
ನ್ಯಾಯಾಂಗ, ಶಾಸಕಾಂಗ ಮತ್ತು ಪತ್ರಿಕೋದ್ಯಮದಲ್ಲಿ ಪ್ರಜಾಪ್ರಭುತ್ವ ಇರಬೇಕು. ಕಾನೂನಿನ ಹೊರತಾಗಿ ಸ್ವತಂತ್ರವಾಗಿ ಕೆಲಸ ಮಾಡಿಡುವುದು ಪತ್ರಿಕೋದ್ಯಮ. ಇಲ್ಲಿ ಪ್ರಶಸ್ತಿ ಪಡೆದ ಬಹುತೇಕರು ಮೂವತ್ತು ವರ್ಷದಿಂದ ಪರಿಚಯ. ಅವರು ಎಷ್ಟೊಂದು ಕಷ್ಟ ಪಟ್ಟು ಸುದ್ದಿ ಸಂಗ್ರಹಿಸುತ್ತಿದ್ದರು ಎನ್ನುವುದು ನನಗೆ ಅರಿವಿದೆ ಎಂದು ಪುರಸ್ಕೃತರನ್ನು ಉದ್ದೇಶಿಸಿ ಅವರು ಹೇಳಿದರು.

ಧಾರವಾಡ, ರಾಯಚೂರು, ಮೈಸೂರಿನಲ್ಲಿ ಕೆಲಸ ಮಾಡುವ ಪತ್ರಕರ್ತರು ಎಷ್ಟು ಕೆಲಸ ಮಾಡುತ್ತಾರೆ ಎನ್ನುವುದು ನನಗೆ ಗೊತ್ತು. ವಿಜಯ ಸಂಕೇಶ್ವರ ಅವರ ಹೊಸ ಪ್ರಯತ್ನ, ಜನರ ಧ್ವನಿಯಾಗಿ ಕೆಲಸ ಮಾಡುವ ರಂಗಣ್ಣ. ಮಾಧ್ಯಮ ಅಕಾಡೆಮಿ ಕೇವಲ ಪ್ರಶಸ್ತಿ ಕೊಡುವ ಕೆಲಸ ಮಾಡದೇ, ಸಂಶೋಧನೆ, ಹೊಸ ಪತ್ರಕರ್ತರಿಗೆ ಪ್ರೋತ್ಸಾಹ, ತಾಲ್ಲೂಕು, ಜಿಲ್ಲಾ ಮಟ್ಟದ ಪತ್ರಕರ್ತರಿಗೆ ಹೆಚ್ಚಿನ ಪ್ರೊತ್ಸಾಹ ನೀಡಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಚಿವ ಆರ್. ಅಶೋಕ್ ಹಾಗೂ ಉದ್ಯಮಿ ವಿಜಯ ಸಂಕೇಶ್ವರ್, ಡಾ. ಸುಧಾಮೂರ್ತಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಮತ್ತಿತರರು ಪಾಲ್ಗೊಂಡಿದ್ದರು.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications