Gauri Lankesh: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಜಾಮೀನು
ಬೆಂಗಳೂರು ಜುಲೈ 16: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.
ನ್ಯಾ. ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆರು ವರ್ಷದ ಬಳಿಕ ನವೀನ್ ಕುಮಾರ್, ಅಮಿತ್, ಎಲ್‌ಎಲ್ ಸುರೇಶ್ ಅವರಿಗೆ ಜಾಮೀನು ಮಂಜೂರು ಮಾಡಿದೆ.

ಹೈಕೋರ್ಟ್ ಹಲವು ಷರತ್ತುಗಳೊಂದಿಗೆ ಆರೋಪಿಗಳಿಗೆ ಜಾಮೀನು ನೀಡಿದೆ. ಆರೋಪಿಗಳ ಪರ ಹಿರಿಯ ವಕೀಲ ಅರುಣ್ ಶ್ಯಾಂ ವಾದ ಮಂಡಿಸಿದ್ದಾರೆ.
ಪತ್ರಕರ್ತೆ ಹಾಗೂ ಸಾಮಾಜಿಕ ಕಾರ್ಯಕರ್ತೆಯಾಗಿದ್ದ ಗೌರಿ ಲಂಕೇಶ್ ಅವರನ್ನು 2017, ಸೆಪ್ಟೆಂಬರ್ 5ರಂದು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಸಂಬಂಧ ವಿಶೇಷ ತನಿಖಾ ದಳ ರಚಿಸಿ 18 ಆರೋಪಿಗಳನ್ನು ಬಂಧಿಸಲಾಗಿತ್ತು.
2 ವರ್ಷಗಳ ಹಿಂದೆ ಖ್ಯಾತ ಸಾಹಿತಿ ಕಲಬುರ್ಗಿ ಅವರನ್ನು ಧಾರವಾಡದ ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು. ನಂತರ 2017ರ ಸೆಪ್ಟೆಂಬರ್‌ನಲ್ಲಿ ಪತ್ರಕರ್ತರಾಗಿದ್ದ ಗೌರಿ ಲಂಕೇಶ್ ಅವರನ್ನು ಬೆಂಗಳೂರಿನ ರಾಜ ರಾಜೇಶ್ವರಿ ನಗರದ ನಿವಾಸದ ಬಳಿ ಹತ್ಯೆ ಮಾಡಿತ್ತು.
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಬಗ್ಗೆ ಈ ಹಿಂದೆ ಸಿಎಂ ಸಿದ್ದರಾಮಯ್ಯ, ಇದುವರೆಗೆ 18 ಜನರನ್ನು ಬಂಧಿಸಲಾಗಿದೆ ಮತ್ತು 1,200 ಸಾಕ್ಷ್ಯಗಳು ಮತ್ತು 500 ಸಾಕ್ಷಿಗಳೊಂದಿಗೆ ಆರೋಪಪಟ್ಟಿ ಸಲ್ಲಿಸಲಾಗಿದೆ.ಪ್ರಕರಣದ ವಿಚಾರಣೆಗೆ ಪೂರ್ಣಾವಧಿ ನ್ಯಾಯಾಧೀಶರನ್ನು ಹೊಂದಿರುವ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಬೇಕು ಎಂದು ಗೌರಿ ಲಂಕೇಶ್, ಕಲಬುರಗಿ ಕುಟುಂಬಸ್ಥರು ಒತ್ತಾಯಿಸಿದ್ದರಿಂದ, ಅಗತ್ಯ ಕ್ರಮಕ್ಕಾಗಿ ಪರಿಶೀಲಿಸುವಂತೆ ಮುಖ್ಯಮಂತ್ರಿಗಳು ಈ ಹಿಂದೆ ಆಂತರಿಕ ಆಡಳಿತದೊಂದಿಗೆ ವ್ಯವಹರಿಸುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ್ದಾರೆ.
2 ವರ್ಷಗಳ ಹಿಂದೆ ಖ್ಯಾತ ಸಾಹಿತಿ ಕಲಬುರ್ಗಿ ಅವರನ್ನು ಧಾರವಾಡದ ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು. ನಂತರ 2017ರ ಸೆಪ್ಟೆಂಬರ್‌ನಲ್ಲಿ ಪತ್ರಕರ್ತರಾಗಿದ್ದ ಗೌರಿ ಲಂಕೇಶ್ ಅವರನ್ನು ಬೆಂಗಳೂರಿನ ರಾಜ ರಾಜೇಶ್ವರಿ ನಗರದ ನಿವಾಸದ ಬಳಿ ಹತ್ಯೆ ಮಾಡಿತ್ತು.
2023ರಲ್ಲಿ ದಿ. ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 11ನೇ ಆರೋಪಿಯಾಗಿರುವ ಎನ್. ಮೋಹನ್ ನಾಯಕ್‌ಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ಪ್ರಕರಣದ ಹಿನ್ನೆಲೆ:
2017ರ ಸೆಪ್ಟೆಂಬರ್ 5ರಂದು ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಪತ್ರಕರ್ತೆ ಗೌರಿ ಲಂಕೇಶ್ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಹತ್ಯೆಯ ಪ್ರಮುಖ ರೂವಾರಿ ಅಮೋಲ್ ಕಾಳೆ. ಪರಶುರಾಮ್ ವಾಗ್ಮೋರೆ ಗುಂಡು ಹಾರಿಸಿದ್ದರೆ, ಬೈಕ್ ಚಲಾಯಿಸಿದ ಆರೋಪ ಗಣೇಶ್ ಮಿಸ್ಕಿನ್ ಮೇಲಿದೆ. ಇದುವರೆಗೆ 18 ಜನರನ್ನು ಬಂಧಿಸಲಾಗಿದೆ.
ಈ ಆರೋಪಿಗಳಲ್ಲಿ ನವೀನ್ ಕುಮಾರ್, ಅಮಿತ್, ಎಲ್‌ಎಲ್ ಸುರೇಶ್ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ ಷರತ್ತುಬದ್ಧ ಜಾಮೀನನ್ನು ಹೈಕೋರ್ಟ್ ಮಂಜೂರು ಮಾಡಿದೆ.











Click it and Unblock the Notifications