• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪತ್ರಕರ್ತನ ಹತ್ಯೆ ಖಂಡಿಸಿದ ಬೆಂಗಳೂರು ಕಮಿಷನರ್ ಭಾಸ್ಕರ್ ರಾವ್

|

ಬೆಂಗಳೂರು, ಜುಲೈ 22: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದ ಪತ್ರಕರ್ತನ ಹತ್ಯೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ನಡು ಬೀದಿಯಲ್ಲಿ ಪತ್ರಕರ್ತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಈ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ.

ಪತ್ರಕರ್ತನ ಹತ್ಯೆ ಕುರಿತು ಟ್ವಿಟ್ಟರ್‌ನಲ್ಲಿ ಸಂತಾಪ ವ್ಯಕ್ತಪಡಿಸಿರುವ ಭಾಸ್ಕರ್ ರಾವ್ 'ಇದು ಬಹಳ ದುಃಖಕರ ಸಂಗತಿ. ಇನ್ನೊಬ್ಬರನ್ನು ರಕ್ಷಿಸುವ ಸಲುವಾಗಿ ತನ್ನ ಜೀವ ಕಳೆದುಕೊಳ್ಳಬೇಕಾಯಿತು. ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಲಿ' ಎಂದು ಆಗ್ರಹಿಸಿದ್ದಾರೆ.

'ರಾಮರಾಜ್ಯ ಭರವಸೆ ನೀಡಿದ್ರು, ಆದರೆ ಗೂಂಡಾ ರಾಜ್ಯ ಕೊಟ್ಟರು'

ಮೃತ ಪತ್ರಕರ್ತನ ಕುಟುಂಬಕ್ಕೆ ಉತ್ತರ ಪ್ರದೇಶ ಸರ್ಕಾರ ಹತ್ತು ಲಕ್ಷ ಪರಿಹಾರ ಘೋಷಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪತ್ರಕರ್ತನ ಪತ್ನಿಗೆ ಸರ್ಕಾರಿ ಕೆಲಸ ನೀಡಲಾಗುತ್ತದೆ ಮತ್ತು ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ ಎಂದು ಹೇಳಲಾಗಿದೆ.

ತನ್ನ ಸೊಸೆಗೆ ಕೆಲವು ಮಂದಿ ಕಿರುಕುಳ ನೀಡುತ್ತಿದ್ದಾರೆ ಎಂದು ವಿಜಯ ನಗರ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ದೂರು ನೀಡಿದ್ದರು. ಈ ದೂರಿನ ಹಿನ್ನೆಲೆ ಈ ಘಟನೆ ನಡೆದಿದೆ ಎಂದು ಪೊಲೀಸರ ಶಂಕಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳ ಆಧರಿಸಿದ ಈಗಾಗಲೇ 9 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನು ಈ ಘಟನೆ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು ''ತನ್ನ ಸೊಸೆಗೆ ಕಿರುಕುಳ ನೀಡಿದ್ದನ್ನ ವಿರೋಧಿಸಿದ್ದಕ್ಕೆ ಕೊಲ್ಲಲ್ಪಟ್ಟರು. ಪತ್ರಕರ್ತನನ್ನು ಕಳೆದುಕೊಂಡ ದುಃಖಿತ ಕುಟುಂಬಕ್ಕೆ ನನ್ನ ಸಂತಾಪ. ರಾಮರಾಜ್ಯ ಭರವಸೆ ನೀಡಿದ್ರು, ಆದರೆ ಗೂಂಡಾ ರಾಜ್ಯವನ್ನು ಕೊಟ್ಟರು' ಎಂದು ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

English summary
Ghaziabad journalist's murder: Bengaluru city police commissioner Bhaskar rao urged to 'Strictest punishment should be meted against the accused'.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X