ವರ್ಷಾಂತ್ಯಕ್ಕೆ ಮತ್ತಿಕೆರೆಯ ಜೆ.ಪಿ.ಪಾರ್ಕ್ ನವೀಕರಣ ಕಾಮಗಾರಿ ಪೂರ್ಣ
ಬೆಂಗಳೂರು, ಮೇ 16: 37 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿರುವ ನಗರದ ಮತ್ತಿಕೆರೆಯ ಜೆ.ಪಿ.ಪಾರ್ಕ್ ನವೀಕರಣ ಕಾಮಗಾರಿ ಈ ವರ್ಷದ ಡಿಸೆಂಬರ್ ವೇಳೆಗೆ ಪುರ್ಣಗೊಳ್ಳುವ ಸಾಧ್ಯತೆ ಇದೆ.
ಯೋಜನೆಯಡಿಯಲ್ಲಿ ಜೆ.ಪಿ. ಪಾರ್ಕ್ ನಲ್ಲಿ 1500 ಆಸನಗಳ ಬಯಲು ರಂಗಮಂದಿರ, ಆಟಿಕೆ ರೈಲು, ವಸಾಹತುಶಾಹಿ ಶೈಲಿಯ ರೈಲು ನಿಲ್ದಾಣ, ಕನ್ವೆನ್ಷನ್ ಸೆಂಟರ್, ಗಡಿಯಾರ ಗೋಪುರ ಮತ್ತು ಮಕ್ಕಳ ಆಟದ ಪ್ರದೇಶವನ್ನು ನಿರ್ಮಿಸಲಾಗುತ್ತಿದೆ.
ಜೆ.ಪಿ. ಪಾರ್ಕ್‌ಗೆ ಭೇಟಿ ನೀಡಿ, ವಿವಿಧ ಕಾಮಗಾರಿಯನ್ನು ಪರಿಶೀಲಿಸಿದ ರಾಜರಾಜೇಶ್ವರಿ ನಗರ ವಲಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ಮೂರು ತಿಂಗಳಲ್ಲಿ ಬಯಲು ರಂಗಮಂದಿರ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನೊಂದೆಡೆ, 59 ಕೋಟಿ ರೂ. ವೆಚ್ಚದಲ್ಲಿ ಮಲ್ಲತ್ತಹಳ್ಳಿ ಕೆರೆಯಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿದರು. ಇಲ್ಲಿ ಕೆರೆ ಸುತ್ತಲೂ ಕಾಂಪೌಂಡ್ ನಿರ್ಮಾಣ, ಗಾಜಿನ ಮನೆ, ತೂಗು ಸೇತುವೆ ನಿರ್ಮಾಣ, ಆಟಿಕೆ ರೈಲು ಮತ್ತು ಪಾರ್ಕಿಂಗ್ ಸೌಲಭ್ಯವನ್ನು ಕಲ್ಪಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.
ಮಲ್ಲತ್ತಹಳ್ಳಿ ಕೆರೆಯನ್ನು ಪ್ರವಾಸಿ ತಾಣವಾಗಿ ಮಾರ್ಪಡಿಸುವ ಯೋಜನೆಗೆ ತೀವ್ರ ವಿರೋಧದ ನಡೆಯುವೆಯೂ ಕೆರೆ ಪುನಶ್ಚೇತನ ಕಾಮಗಾರಿ ಮುಂದುವರಿದಿದೆ.
ಅಕ್ರಮ ಹೋಟೆಲ್ ಕಟ್ಟಡ ನೆಲಸಮಗೊಳಿಸಲು ಸೂಚನೆ:
ಮಳೆನೀರು ಕಾಲುವೆ ಮೇಲೆ ನಿರ್ಮಿಸಿರುವ ಅಕ್ರಮ ಹೋಟೆಲ್ ಕಟ್ಟಡವನ್ನು ನೆಲಸಮಗೊಳಿಸುವುದು ಸೇರಿದಂತೆ ಎಲ್ಲಾ ರೀತಿಯ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚಿಸಿದರು.
ರಸ್ತೆ ವಿಸ್ತರಣೆ ಪರಿಶೀಲನೆ:
ಕೆಂಗೇರಿ ಮತ್ತು ಕನಕಪುರ ಮುಖ್ಯ ರಸ್ತೆ ನಡುವಿನ 3.5 ಕಿ.ಮೀ ಉದ್ದದ ಉತ್ತರಹಳ್ಳಿ ಮುಖ್ಯ ರಸ್ತೆಯ ವಿಸ್ತರಣೆಗೆ ಬಿಬಿಎಂಪಿ ಯೋಜನೆ ರೂಪಿಸಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯ ಆಯುಕ್ತರು, ಪರಿಶೀಲನೆ ನಡೆಸಿದರು. ಭೂಸ್ವಾಧೀನ ಸಮಸ್ಯೆ ಹಿನ್ನೆಲೆಯಲ್ಲಿ ಯೋಜನೆಗೆ ಇನ್ನೂ ಹಸಿರು ನಿಶಾನೆ ದೊರೆತ್ತಿಲ್ಲ.

ರಸ್ತೆ ವಿಸ್ತರಣೆ ಯೋಜನೆಯಿಂದ ಭೂಮಿ ಕಳೆದುಕೊಳ್ಳುವ ಆಸ್ತಿ ಮಾಲೀಕರಿಗೆ ಟಿಡಿಆರ್ ನೀಡುವಂತೆ ಅಧಿಕಾರಿಗೆ ತುಷಾರ್ ಗಿರಿನಾಥ್ ಸೂಚಿಸಿದರು.
ಇದೇ ವೇಳೆ ಮೈಸೂರು ರಸ್ತೆಯಿಂದ ಬೆಂಗಳೂರು ವಿಶ್ವವಿದ್ಯಾನಿಲಯ ಕಡೆಗೆ ಸಂಪರ್ಕಿಸುವ ರಸ್ತೆಯ ವೈಟ್‌ಟಾಪಿಂಗ್ ಕಾಮಗಾರಿ ನಡೆಯುತ್ತಿದ್ದು, ಇದನ್ನು ಮುಖ್ಯ ಆಯುಕ್ತರು ಪರಿಶೀಲಿಸಿದರು. ಅಲ್ಲದೇ ಉಲ್ಲಾಳ ವಾರ್ಡ್ ನಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ನಿಮಾರ್ಣಗೊಳ್ಳುತ್ತಿರುವ ಒಣ ಕಸ ಸಂಗ್ರಹ ಕೇಂದ್ರದ ಪ್ರಗತಿ ಪರಿಶೀಲಿಸಿದರು. ಈ ವೇಳೆ ಬಿಬಿಎಂಪಿ ಅಧಿಕಾರಿಗಳು ಹಾಜರಿದ್ದರು.
-
ಬೆಂಗಳೂರು ಕರಡು ಮತಪಟ್ಟಿ ಹಾಗೂ ಕಾಂಗ್ರೆಸ್ನ ಮತಚೋರಿಯ ಸುಳ್ಳುಗಳ ಅನಾವರಣ: ಲೇಖಕ ರಾಜೀವ ಹೆಗಡೆ ಬರಹ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ











Click it and Unblock the Notifications