ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ದಿನೇಶ್ ಮಹೇಶ್ವರಿ ಅಧಿಕಾರ ಸ್ವೀಕಾರ
ಬೆಂಗಳೂರು, ಫೆಬ್ರವರಿ 12: ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾಗಿ ನ್ಯಾ. ದಿನೇಶ್ ಮಹೇಶ್ವರಿ ಸೋಮವಾರ ಅಧಿಕಾರ ಸ್ವೀಕಾರ ಮಾಡಿದರು.
ರಾಜಭವನದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ನ್ಯಾ. ದಿನೇಶ್ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಸ್ಥಾನ ಮೂಲದ ದಿನೇಶ್ ಮಹೇಶ್ವರಿ ಅವರು 2016ರ ಫೆಬ್ರವರಿ 24ರಿಂದ ಮೇಘಾಲಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಜನವರಿ 10ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ 5 ಸದಸ್ಯರ ಕೊಲಿಜಿಯಂ ದಿನೇಶ್ ಮಹೇಶ್ವರಿ ಅವರನ್ನು ನೇಮಕ ಮಾಡಲು ತೀರ್ಮಾನಿಸಿತ್ತು, ಈಗ ಕೇಂದ್ರ ಸರ್ಕಾರಕ್ಕೆ ಹೆಸರನ್ನು ಶಿಫಾರಸು ಮಾಡಲಾಗಿತ್ತು.

2017ರ ಅಕ್ಟೋಬರ್‌ನಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ನಿವೃತ್ತರಾಗಿದ್ದರು. ನಂತರ ಎಚ್.ಜಿ.ರಮೇಶ್ ಅವರನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿತ್ತು.
ದಿನೇಶ್ ಮಹೇಶ್ವರಿ ಅವರು ಮಂಗಳೂರಿನಲ್ಲಿರುವ ಎಸ್ ಡಿಎಂ ಕಾನೂನು ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು.
ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ರಾಮಲಿಂಗಾರೆಡ್ಡಿ, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್, ಲೋಕೋಪಯೋಗಿ ಸಚಿವ ಎಚ್.ಸಿ. ಮಹಾದೇವಪ್ಪ, ರಾಜ್ಯ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ, ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಹಾಜರಿದ್ದರು.












Click it and Unblock the Notifications