ಬೆಂಗಳೂರು ದಕ್ಷಿಣಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮ?

Recommended Video

      Lok Sabha Elections 2019: ಬೆಂಗಳೂರು ದಕ್ಷಿಣಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮ? | Oneindia Kannada

      ಬೆಂಗಳೂರು, ಮಾರ್ಚ್ 19 : ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮವಾಗಿದೆ?. ಬಿಜೆಪಿಯಿಂದ ದಿ.ಅನಂತ ಕುಮಾರ ಪತ್ನಿ ತೇಜಸ್ವಿನಿ ಅನಂತ ಕುಮಾರ್ ಸ್ಪರ್ಧಿಸುತ್ತಿದ್ದಾರೆ. ಏಪ್ರಿಲ್ 18ರಂದು ಮತದಾನ ನಡೆಯಲಿದೆ.

      ಕರ್ನಾಟಕ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದರಾಜು ಅವರ ಹೆಸರನ್ನು ಹೈಕಮಾಂಡ್‌ಗೆ ಶಿಫಾರಸು ಮಾಡಿದೆ ಎಂದು ತಿಳಿದುಬಂದಿದೆ. ಸತತ 6 ಬಾರಿ ಬಿಜೆಪಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಜಯಗಳಿಸಿದೆ.

      ಬೆಂಗಳೂರು ದಕ್ಷಿಣದಿಂದ ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿತ್ತು. ಅಂತಿಮವಾಗಿ ಕಾಂಗ್ರೆಸ್‌ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರಾದ ಕೆ.ಗೋವಿಂದರಾಜು ಅವರನ್ನು ಕಣಕ್ಕಿಳಿಸಲು ಬಯಸಿದೆ.

      ಮಾ.26 ನಾಮಪತ್ರವನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಮಾ.21ರಂದು ಕಾಂಗ್ರೆಸ್ ಪಟ್ಟಿ ಅಧಿಕೃತವಾಗಿ ಬಿಡುಗಡೆಯಾಗುವ ನಿರೀಕ್ಷೆ ಇದೆ. ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಮಾಜಿ ಶಾಸಕ ಪ್ರಿಯಕೃಷ್ಣ, ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಅವರ ಹೆಸರು ಸಹ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ಕೇಳಿಬರುತ್ತಿದೆ.....

      ಹೈಕಮಾಂಡ್‌ಗೆ ಹೆಸರು ಶಿಫಾರಸು

      ಹೈಕಮಾಂಡ್‌ಗೆ ಹೆಸರು ಶಿಫಾರಸು

      ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳ ಮಾಹಿತಿ ಪ್ರಕಾರ ಕೆ.ಗೋವಿಂದರಾಜು ಅವರ ಹೆಸರನ್ನು ಹೈಕಮಾಂಡ್‌ಗೆ ರಾಜ್ಯ ಘಟಕದಿಂದ ಶಿಫಾರಸು ಮಾಡಲಾಗಿದೆ. ಮಾ.21ರಂದು ನಡೆಯುವ ಸಭೆಯಲ್ಲಿ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ.

      ಐಟಿ ದಾಳಿ ಪ್ರಕರಣ

      ಐಟಿ ದಾಳಿ ಪ್ರಕರಣ

      ಮೂರು ವರ್ಷಗಳ ಹಿಂದೆ ನಡೆದ ಐಟಿ ದಾಳಿ ಪ್ರಕರಣದಲ್ಲಿ ಕೆ.ಗೋವಿಂದರಾಜು ಅವರ ಹೆಸರು ರಾಷ್ಟ್ರ ಮಟ್ಟದಲ್ಲಿ ಕೇಳಿಬಂದಿತು. ಅವರ ನಿವಾಸದಲ್ಲಿ ಸಿಕ್ಕ ಡೈರಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಹಣ ನೀಡಲಾಗಿದೆ ಎಂದು ಬರೆದ ವಿವರಗಳಿವೆ ಎಂಬುದು ರಾಷ್ಟ್ರೀಯ ಮಾಧ್ಯಮಗಳಲ್ಲಿ ಚರ್ಚೆ ಆಯಿತು.

      ಹಲವು ಹೆಸರುಗಳು

      ಹಲವು ಹೆಸರುಗಳು

      ಬೆಂಗಳೂರು ದಕ್ಷಿಣ ಬಿಜೆಪಿಯ ಭದ್ರಕೋಟೆ. ಈ ಬಾರಿಯ ಚುನಾವಣೆಯಲ್ಲಿ ಕ್ಷೇತ್ರವನ್ನು ವಶಪಡಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ತಂತ್ರ ರೂಪಿಸುತ್ತಿವೆ. ಆದ್ದರಿಂದ, ಹಲವು ಅಭ್ಯರ್ಥಿಗಳ ಹೆಸರುಗಳು ಹೇಳಿಬರುತ್ತಿವೆ. ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಮಾಜಿ ಶಾಸಕ ಪ್ರಿಯಕೃಷ್ಣ, ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಅವರ ಹೆಸರುಗಳು ಕೇಳಿಬರುತ್ತಿವೆ.

      ಬಿಜೆಪಿ ಹೆಸರು ಫೈನಲ್

      ಬಿಜೆಪಿ ಹೆಸರು ಫೈನಲ್

      ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ವಿಚಾರದಲ್ಲಿ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ. ಕೇಂದ್ರ ಸಚಿವರಾಗಿದ್ದ ದಿ.ಅನಂತ ಕುಮಾರ್ ಪತ್ನಿ ತೇಜಸ್ವಿನಿ ಅನಂತ ಕುಮಾರ್ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+