ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಾ.ಕೆ.ರಾಧಾಕೃಷ್ಣನ್ ಬೆಂಗಳೂರು ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ

|
Google Oneindia Kannada News

ಬೆಂಗಳೂರು, ಜ. 1 : ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ 'ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ' ಪ್ರಶಸ್ತಿಯನ್ನು ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ರಾಧಾಕೃಷ್ಣನ್ ಅವರಿಗೆ ನೀಡಿ ಗೌರವಿಸಲಾಯಿತು. ರಾಧಾಕೃಷ್ಣನ್ ಅವರು ಇಸ್ರೋದಿಂದ ನಿವೃತ್ತರಾದ ಬುಧವಾರವೇ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಬುಧವಾರ ಸಂಜೆ ಬೆಂಗಳೂರು ಪ್ರೆಸ್ ಕ್ಲಬ್ ಆವರಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ಕೆ.ರಾಧಾಕೃಷ್ಣನ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ, ಶಶಿ ಪ್ರಭಾ ಹಿರೇಮಠ್ ಹಾಗೂ ಹಿರಿಯ ಪತ್ರಿಕಾ ಛಾಯಾಗ್ರಾಹಕ ಪಿ.ಸಾರಂಗ ಪಾಣಿ ಅವರಿಗೂ ಸಹ 'ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ' ನೀಡಲಾಯಿತು.

ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ಅವರು ಬೆಂಗಳೂರು ಪ್ರೆಸ್ ಕ್ಲಬ್ ಹೊರ ತಂದ 2015ನೇ ಸಾಲಿನ ಡೈರಿ ಬಿಡುಗಡೆ ಮಾಡಿದರು. ಗೃಹ ಸಚಿವ ಕೆ.ಜೆ.ಜಾರ್ಜ್ ಪ್ರೆಸ್ ಕ್ಲಬ್ ಆವರಣದಲ್ಲಿನ ವೈಫೈ ಸೇವೆಗೆ ಚಾಲನೆ ನೀಡಿದರು.[ಇಸ್ರೋ ಅಧ್ಯಕ್ಷ ಸ್ಥಾನದಿಂದ ರಾಧಾಕೃಷ್ಣನ್ ನಿವೃತ್ತಿ]

ಡಾ.ಕೆ.ರಾಧಾಕೃಷ್ಣನ್ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ

ಡಾ.ಕೆ.ರಾಧಾಕೃಷ್ಣನ್ ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ

ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ 'ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ' ಪ್ರಶಸ್ತಿಯನ್ನು ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ರಾಧಾಕೃಷ್ಣನ್ ಅವರಿಗೆ ನೀಡಿ ಗೌರವಿಸಲಾಯಿತು

2015ನೇ ಸಾಲಿನ ಡೈರಿ ಬಿಡುಗಡೆ

2015ನೇ ಸಾಲಿನ ಡೈರಿ ಬಿಡುಗಡೆ

ಬುಧವಾರ ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ಅವರು ಬೆಂಗಳೂರು ಪ್ರೆಸ್ ಕ್ಲಬ್ ಹೊರ ತಂದ 2015ನೇ ಸಾಲಿನ ಡೈರಿ ಬಿಡುಗಡೆ ಮಾಡಿದರು.

ವೈಫೈ ಸೇವೆ ಉದ್ಘಾಟನೆ

ವೈಫೈ ಸೇವೆ ಉದ್ಘಾಟನೆ

ಗೃಹ ಸಚಿವ ಕೆ.ಜೆ.ಜಾರ್ಜ್ ಪ್ರೆಸ್ ಕ್ಲಬ್ ಆವರಣದಲ್ಲಿನ ವೈಫೈ ಸೇವೆಗೆ ಬುಧವಾರ ಚಾಲನೆ ನೀಡಿದರು.

ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗಳು

ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗಳು

ಹಿರಿಯ ಪತ್ರಕರ್ತರಾದ ಪಿ.ರಾಮಯ್ಯ, ಶಶಿ ಪ್ರಭಾ ಹಿರೇಮಠ್ ಹಾಗೂ ಹಿರಿಯ ಪತ್ರಿಕಾ ಛಾಯಾಗ್ರಾಹಕ ಪಿ.ಸಾರಂಗ ಪಾಣಿ ಅವರಿಗೂ ಸಹ 'ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ' ನೀಡಲಾಯಿತು.

English summary
Chairman of the Indian Space Research Organization (Isro) K Radhakrishnan, was conferred the Bengaluru Press Club Man of the Year 2014 Award. Chief Minister Siddaramaiah honored K Radhakrishnan at a function held at Press Club of Bengaluru on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X