ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹಾನಾಯಕರಿಗೆ ಅರ್ಥವಾದರೆ ಸಾಕು; ಸಚಿವ ಸುಧಾಕರ್ ಸ್ಪಷ್ಟನೆ

|
Google Oneindia Kannada News

ಬೆಂಗಳೂರು, ಮಾರ್ಚ್ 24: "ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್, ರಮೇಶ್ ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲರೂ ಏಕಪತ್ನಿ ವ್ರತ ಮಾಡುತ್ತಿದ್ದಾರಾ?" ಎಂಬ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿಕೆಗೆ ವಿವಿಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.

"ನಾನೂ ಸೇರಿದಂತೆ 224 ಶಾಸಕರ ಮೇಲೆ ತನಿಖೆಯಾಗಲಿ. ಎಲ್ಲರನ್ನು ತನಿಖೆ ಮಾಡಿದಾಗ ಬಂಡವಾಳ ಗೊತ್ತಾಗುತ್ತೆ. ಎಲ್ಲಾ ಮಂತ್ರಿಗಳದ್ದೂ, ಶಾಸಕರದ್ದೂ, ವಿರೋಧ ಪಕ್ಷದವರದ್ದು ಕೂಡ ತನಿಖೆಯಾಗಲಿ. ಯಾರಿಗೆ ಅನೈತಿಕ ಸಂಬಂಧವಿದೆ ಎಂಬುದು ತಿಳಿಯಲಿ ಬಿಡಿ" ಎಂದು ಸುಧಾಕರ್ ಹೇಳಿದ್ದರು. ವಿಪಕ್ಷಗಳು ಈ ಹೇಳಿಕೆಯನ್ನು ಟೀಕಿಸಿ ಪ್ರತಿಭಟನೆ ನಡೆಸಿವೆ. ಈ ಬೆನ್ನಲ್ಲೇ ತಮ್ಮ ಹೇಳಿಕೆ ಕುರಿತು ಟ್ವೀಟ್ ಮೂಲಕ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಸಚಿವ ಸುಧಾಕರ್ ವಿರುದ್ಧ ಸದನದಲ್ಲಿ ಕಾಂಗ್ರೆಸ್‌ ಪ್ರತಿಭಟನೆ ಸಚಿವ ಸುಧಾಕರ್ ವಿರುದ್ಧ ಸದನದಲ್ಲಿ ಕಾಂಗ್ರೆಸ್‌ ಪ್ರತಿಭಟನೆ

"ನನ್ನ ಹೇಳಿಕೆಯನ್ನು ಅರ್ಥ ಮಾಡಿಕೊಳ್ಳಬೇಕಾದ ಮಹಾನಾಯಕರುಗಳು ಅರ್ಥ ಮಾಡಿಕೊಂಡರೆ ಸಾಕು. ಇಡೀ ರಾಜ್ಯದ ಜನರನ್ನು ತಪ್ಪು ದಾರಿಗೆ ಎಳೆದು ರಾಜಕೀಯ ದ್ವೇಷ ಸಾಧಿಸಲು ಹೊರಟಿರುವ ಮಹಾನಾಯಕರ ಮುಖವಾಡ ಕಳಚುವ ಉದ್ದೇಶ ನನ್ನ ಹೇಳಿಕೆಯ ಹಿಂದೆ ಇತ್ತು ಅಷ್ಟೇ. ನಮ್ಮ ತೇಜೋವಧೆ ಮಾಡಲು ಹೊರಟವರ ಉದ್ದೇಶ ಈಡೇರಲ್ಲ" ಎಂದು ಹೇಳಿದ್ದಾರೆ.

K Sudhakar Clarification On His Statement Against Congress Leaders

Recommended Video

'ಎಲ್ಲಾ ನಾಯಕರ ತನಿಖೆಯಾಗಲಿ ಯಾರು ಏಕಪತ್ನಿವ್ರತಸ್ಥರು? ಯಾರಿಗೆಲ್ಲ ಅನೈತಿಕ ಸಂಬಂಧ ಇದೆ ಗೊತ್ತಾಗುತ್ತೆ' ಸಚಿವ ಸುಧಾಕರ್ ಹೇಳಿಕೆ | Oneindia Kannada

"ಕೆಲ ನಾಯಕರ ಏಕಪಕ್ಷೀಯ, ಪೂರ್ವಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮ ಪಡೆದುಕೊಂಡಿದೆ. ಎಲ್ಲಾ ಮಾನ್ಯ ಶಾಸಕ ಮಿತ್ರರ ಬಗ್ಗೆ ಅಪಾರ ಗೌರವ ಇಟ್ಟುಕೊಂಡಿದ್ದೇನೆ. ನಮ್ಮ ಹದಿನೇಳು ಜನರ ವಿರುದ್ಧ ತೇಜೋವಧೆ ಯತ್ನ ನಡೆಸಿದ್ದ ಕೆಲ ನಾಯಕರ ವಿರುದ್ಧ ಮಾತ್ರವೇ ನಾನು ಹೇಳಿಕೆ ನೀಡುವ ಯತ್ನ ಮಾಡಿದ್ದೇನೆಯೇ ಹೊರತು ಎಲ್ಲಾ ಶಾಸಕರಿಗೆ ನೋವುಂಟು ಮಾಡುವ ಉದ್ದೇಶ ನನಗಿಲ್ಲ" ಎಂದು ಸ್ಪಷ್ಟನೆ ನೀಡಿದ್ದಾರೆ.

English summary
Health minister k sudhakar tweeted and gave clarification on his statement. Probe should do on all 224 MLA's including me health minister Dr. K. Sudhakar statement sparked controversy,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X