ಶೂಟೌಟ್ ಪ್ರಕರಣ: ಅಗ್ನಿ ಶ್ರೀಧರ್ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು
ಕಡಬಗೆರೆ ಶ್ರೀನಿವಾಸ್ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ 8ನೇ ಆರೋಪಿಯಾಗಿರುವ ಪತ್ರಕರ್ತ ಅಗ್ನಿ ಶ್ರೀಧರ್ ಅವರಿಗೆ ಸೆಷನ್ಸ್ ನ್ಯಾಯಾಲಯದಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ಸಿಕ್ಕಿದೆ.
ಬೆಂಗಳೂರು, ಫೆಬ್ರವರಿ 10: ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ 8ನೇ ಆರೋಪಿಯಾಗಿರುವ ಪತ್ರಕರ್ತ ಅಗ್ನಿ ಶ್ರೀಧರ್ ಅವರಿಗೆ ಶುಕ್ರವಾರ(ಫೆಬ್ರವರಿ 10) ಸೆಷನ್ಸ್ ನ್ಯಾಯಾಲಯದಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ಸಿಕ್ಕಿದೆ.
ಅಗ್ನಿ ಶ್ರೀಧರ್ ಅವರು ಸದ್ಯ ಅಪೋಲೋ ಆಸ್ಪತ್ರೆಯಲ್ಲಿ ಎದೆನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗ್ನಿ ಶ್ರೀಧರ್ ಗೆ 15 ದಿನಗಳ ಕಾಲ ಮಾತ್ರ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. [ಶೂಟೌಟ್ ಕೇಸ್ : ಇನ್ನಿಬ್ಬರು ರೌಡಿ ಶೀಟರ್ ಗಳ ಬಂಧನ]
53ನೇ ಸೆಷನ್ಸ್ ನ್ಯಾಯಾಲಯದಿಂದ ತನ್ನ ಕಕ್ಷಿದಾರನಿಗೆ ಜಾಮೀನು ಕೊಡಿಸುವಲ್ಲಿ ಹಿರಿಯ ವಕೀಲ ಸಿ ಹೆಚ್ ಹನುಮಂತರಾಯ ಅವರು ಯಶಸ್ವಿಯಾದರು.

ಫೆಬ್ರವರಿ 7ರಂದು ಕುಮಾರಸ್ವಾಮಿ ಲೇ ಔಟ್ ನಲ್ಲಿರುವ ಅಗ್ನಿ ಶ್ರೀಧರ್ ಅವರ ಮನೆ ಮೇಲೆ ಬೆಂಗಳೂರಿನ ಪೊಲೀಸರು ದಾಳಿ ನಡೆಸಿ, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದರು. ಅಗ್ನಿ ಶ್ರೀಧರ್ ಸೇರಿದಂತೆ 11 ಜನರ ಮೇಲೆ ವಿವಿಧ ಸೆಕ್ಷನ್ ಗಳಡಿಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಆರೋಪದಡಿ ಕೆ.ಎಸ್. ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದ ಸೈಯದ್ ಅಲಿಯಾಸ್ ಬಚ್ಚನ್ ಹಾಗೂ ಆತನ ಸಹಚರರಾದ ಬ್ರಿಜ್ಭೂಷಣ್ ಹುಸೇನ್ ಪಾಂಡೆ, ರಾಮ್ ಕುಮಾರ್ ರಾಯ್, ಸಾಬೀರ್ ಅಲಿ, ತನ್ವೀರ್, ಅರುಣ್ಕುಮಾರ್, ವರುಣ್ಕುಮಾರ್ನನ್ನು 14 ದಿನಗಳ ಕಾಲ ಯಲಹಂಕ ಪೊಲೀಸರ ಕಸ್ಟಡಿಗೆ ನೀಡಲಾಗಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications