ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಆಗಮಿಸಿದ ಕಾಗೋಡು ತಿಮ್ಮಪ್ಪ

|
Google Oneindia Kannada News

ಬೆಂಗಳೂರು, ಜುಲೈ 6: ತೀವ್ರ ಆನಾರೋಗ್ಯದಿಂದ ಬಳಲುತ್ತಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ನಗರದ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗುರುವಾರ ರಾತ್ರಿ ಸಾಗರದ ಮನೆಯಲ್ಲಿ ಕಾಗೋಡು ತಿಮ್ಮಪ್ಪ ತೀವ್ರ ಅಸ್ವಸ್ಥರಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತೀವ್ರ ಅಸ್ವಸ್ಥ, ಆಸ್ಪತ್ರೆಗೆ ದಾಖಲು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ತೀವ್ರ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಚಿಕಿತ್ಸೆಯ ಬಳಿಕ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತ್ತು. ಹೀಗಾಗಿ ಅವರನ್ನು ಐಸಿಯುನಿಂದ ಸ್ಪೆಷಲ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ.

Kagodu Thimmappa came Bengaluru for Further treatment

ಕಾಗೋಡು ತಿಮ್ಮಪ್ಪ ಅವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ತೆರಳಿದ್ದಾರೆ. ಈ ವೇಳೆ ಅವರು ಯಾರ ಸಹಾಯ ಇಲ್ಲದೆ ತಾವೇ ನಡೆದುಕೊಂಡು ಬಂದು ಕಾರಿನಲ್ಲಿ ಕುಳಿತುಕೊಂಡಿದ್ದರು.

ಪೊಲೀಸ್ ಎಸ್ಕಾರ್ಟ್ ಮೂಲಕ ಕಾಗೋಡು ಅವರು ಬೆಂಗಳೂರಿಗೆ ಬಂದಿದ್ದಾರೆ. ಆರೋಗ್ಯದಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಕಾಗೋಡು ತಿಮ್ಮಪ್ಪ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಅವರಿಗೆ ಬಿಪಿ ಸಮಸ್ಯೆ ಇತ್ತು ಹಾಗೂ ಉಸಿರಾಟದ ತೊಂದರೆಯೂ ಇತ್ತು ಎನ್ನಲಾಗಿದೆ.

English summary
Kagodu Thimmappa came Bengaluru for Further treatment, he had breathing difficulties and blood pressure-related issues. However, Thimmappa responded to the treatment well.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X