ಬೆಂಗಳೂರಿನಲ್ಲಿಂದು ಕಲಾ ಯಾತ್ರೆ: ಭವ್ಯ ಉತ್ಸವಕ್ಕೆ ಚಾಲನೆ
ಬೆಂಗಳೂರು ಡಿಸೆಂಬರ್ 7: ಬೆಂಗಳೂರಿನಲ್ಲಿಂದು ಮೊದಲ ಬಾರಿಗೆ ಕಲಾ ಯಾತ್ರೆಯನ್ನು ಆಯೋಜಿಸಲಾಗಿದೆ. ಬುಡಕಟ್ಟು ಮತ್ತು ಜಾನಪದ ಕಲೆಗಳನ್ನು ಉಳಿಸುವಲ್ಲಿ ಎದುರಾಗುತ್ತಿರುವ ಸವಾಲುಗಳನ್ನು ಪರಿಹರಿಸಲು ಕಲಾ ಯಾತ್ರೆಯನ್ನು ನಡೆಸಲಾಗುತ್ತಿದೆ. ಇನ್ಫೋಸಿಸ್ ಫೌಂಡೇಶನ್ ಮತ್ತು ಭಾರತೀಯ ವಿದ್ಯಾಭವನ ಒಟ್ಟಾಗಿ ಸೇರಿ ಈ ಯಾತ್ರೆಯನ್ನು ನಡೆಸಲು ನಿರ್ಧರಿಸಿವೆ.
ಸುಮಾರು 25 ವರ್ಷಗಳಿಂದ ಭಾರತೀಯ ವಿದ್ಯಾ ಭವನದಲ್ಲಿ ಸಣ್ಣ ಮಟ್ಟದಲ್ಲಿ ಇದನ್ನು ಆಯೋಜಿಸಲಾಗುತ್ತಿತ್ತು. ಆದರೆ ಈ ವರ್ಷ ನಾವು ಇದನ್ನು ದೊಡ್ಡ ಉತ್ಸವವನ್ನಾಗಿ ಮಾಡಲು ನಿರ್ಧರಿಸಿದ್ದೇವೆ. ಇದೇ ರೀತಿ ಪ್ರತೀ ವರ್ಷ ಕೂಡ ಆಯೋಜನೆ ಮಾಡುತ್ತೇವೆ ಎಂದು ಭಾರತೀಯ ವಿದ್ಯಾಭವನದ ನಿರ್ದೇಶಕ ಎಚ್ ಎನ್ ಸುರೇಶ್ ಹೇಳಿದರು.

ಉತ್ಸವಕ್ಕೂ ಮುನ್ನ ಇತಿಹಾಸಕಾರರು ಮತ್ತು ಕಲಾವಿದರು ಒಂದೆಡೆ ಸೇರಿ ಜಾನಪದ ಮತ್ತು ಬುಡಕಟ್ಟು ಜನಾಂಗದ ಕಲಾ ಪ್ರಕಾರಗಳನ್ನು ಉಳಿಸಿಕೊಂಡು ಹೋಗುವ ಕುರಿತು ಚರ್ಚಿಸಿದರು. ಇದಕ್ಕೆ ಕರ್ನಾಟಕ ಜಾನಪದ ಪರಿಷತ್ತು, ಕರ್ನಾಟಕ ಜಾನಪದ ಅಕಾಡೆಮಿ ಮತ್ತು ಕರ್ನಾಟಕ ಚಿತ್ರಕಲಾ ಪರಿಷತ್ತಿನ ಸಂಶೋಧನಾ ಕೇಂದ್ರ ಸಹಕರಿಸಿದವು.
ಇಂದು ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಹೆಚ್ ಸಿ ಬೋರಲಿಂಗಯ್ಯ ಉತ್ಸವವನ್ನು ಉದ್ಘಾಟಿಸಿದರು. ಇಂದು ಬೆಳಗಿನ ಕಾರ್ಯಕ್ರಮದಲ್ಲಿ ಕಲಾ ಇತಿಹಾಸ ತಜ್ಞ ಚೂಡಾಮಣಿ ನಂದಗೋಪಾಲ್, ಧತ್ತು ಪುಟ್ಟಲಿಕಾ ತಿಯೇಟರ್ ನಿರ್ದೇಶಕಿ ಅನುಪಮಾ ಹೊಸಕೆರೆ, ಕರ್ನಾಟಕ ಚಿತ್ರಕಲಾ ಪರಿಷತ್ ಮ್ಯೂಸಿಯಂನ ಕ್ಯುರೇಟರ್ ವಿಜಯಶ್ರೀ ಸಿ.ಎಸ್., ದ್ರಾವಿಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎಂ.ಎನ್.ವೆಂಕಟೇಶ್, ಲಲಿತಕಲಾ ಮಹಾವಿದ್ಯಾಲಯದ ಪ್ರಾಂಶುಪಾಲ ಗೋಮತಿಗೌಡ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ರವಿಂದ್ರ ಸಿರಿವಾರ ಭಾಗವಹಿಸಿದ್ದರು.
ಬೆಳಗಿನ ಕಲಾಪ್ರಬಂಧದ ನಂತರ ಮಧ್ಯಾಹ್ನ ವಿಶೇಷ ಚರ್ಚೆ ನಡೆಯಲಿದ್ದು, ಕಲೆಗಳ ಭವಿಷ್ಯದ ಬಗ್ಗೆ ಇತಿಹಾಸಕಾರರು, ಕಲಾವಿದರು ಮತ್ತು ಶ್ರೋತರು ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಜಾನಪದ ಮತ್ತು ಬುಡಕಟ್ಟು ಕಲೆ ಹಾಗೂ ಜಾನಪದವು ನಮ್ಮ ನಾಡಿನ ಸಾಂಸ್ಕೃತಿಕ ಗುರುತಿನ ಅವಿಭಾಜ್ಯ ಭಾಗವಾಗಿದೆ. ಅವುಗಳ ಉಳಿವಿಗಾಗಿ ಪರಿಸರ ವ್ಯವಸ್ಥೆಯನ್ನು ರಚಿಸುವುದು ಮುಖ್ಯವಾಗಿದೆ. ಇದು ಉತ್ಸವದ ಹಿಂದಿನ ಮೂಲ ಕಲ್ಪನೆ ಎಂದು ಸುರೇಶ್ ಹೇಳಿದರು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications