ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಲಬುರಗಿಯ ದಲಿತ ಯುವಕನ ಹತ್ಯೆ: ಆರೋಪಿಗಳಿಗೆ ಕಠಿಣ ಶಿಕ್ಷೆ: ಸಚಿವ ನಿರಾಣಿ ಭರವಸೆ

|
Google Oneindia Kannada News

ಬೆಂಗಳೂರು, ಮೇ 27: ಕಲಬುರಗಿಯಲ್ಲಿ ಮುಸ್ಲಿಂ ಯುವತಿಯೋರ್ವಳನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುತ್ತೇವೆ ಎಂದು ಕಲಬುರಗಿ ಜಿಲ್ಲಾ ‌ಉಸ್ತುವಾರಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ಧಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆ ನಡೆದ ತಕ್ಷಣವೇ ಪೊಲೀಸರು ಕಾರ್ಯೋನ್ಮುಖರಾಗಿ ತಪ್ಪಿತಸ್ಥರು ಯಾರಿದ್ದಾರೋ ಅವರನ್ನು ಕಾನೂನು ಪ್ರಕಾರವಾಗಿ ಬಂಧಿಸಿದ್ದಾರೆ. ಮುಂದಿನ ಪ್ರಕ್ರಿಯೆಗಳು ಕೂಡ ಕಾನೂನು ಅಡಿಯಲ್ಲೇ ನಡೆಯಬೇಕಾಗಿರುವುದರಿಂದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿಯೇ ತೀರುತ್ತೇವೆ ಎಂದು ಅವರು ಗುಡುಗಿದರು.

ಅನ್ಯಧರ್ಮೀಯ ಯುವತಿಯ ಜೊತೆ ಪ್ರೇಮ, ನಡುರಸ್ತೆಯಲ್ಲಿ ಕೊಲೆಅನ್ಯಧರ್ಮೀಯ ಯುವತಿಯ ಜೊತೆ ಪ್ರೇಮ, ನಡುರಸ್ತೆಯಲ್ಲಿ ಕೊಲೆ

ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರಿಂದಲೇ ಆರೋಪಿಗಳನ್ನು ತಕ್ಷಣವೇ ಬಂಧಿಸಲು ಸಾಧ್ಯವಾಗಿದೆ. ನಮ್ಮ ಪೊಲೀಸರು ಸಮರ್ಥರಾಗಿದ್ದರಿಂದಲೇ ಆರೋಪಿಗಳು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಇದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ನಾನು ಘಟನೆ ಸುದ್ದಿ ತಿಳಿಯುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆ ದೂರವಾಣಿಯಲ್ಲಿ ಮಾತನಾಡಿ, ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸುವಂತೆ ಸೂಚಿನೆ ಕೊಡಲಾಗಿತ್ತು. ಕಾನೂನು ಪ್ರಕಾರ ಪ್ರತಿಯೊಬ್ಬರಿಗೂ ಶಿಕ್ಷೆಯಾಗಲಿದೆ. ಇದರಲ್ಲಿ ಯಾವುದೇ ಕಾರಣಕ್ಕೂ ರಾಜೀಯಾಗುವುದಿಲ್ಲ ಎಂದು ನಿರಾಣಿ ಸ್ಪಷ್ಟಪಡಿಸಿದರು.

Kalaburagi Dalit Murder Case: Culprits Will Not Be Spared, Assures Minister Nirani

ನೊಂದ ಕುಟುಂಬಗಳಿಗೆ ನ್ಯಾಯ: ನಿರಾಣಿ

ಅದರಂತೆ ಪೊಲೀಸರು ಕೂಡಲೇ ವಿಶೇಷ ತಂಡವನ್ನು ರಚಿಸಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರತಿಪಕ್ಷಗಳು ಸಾವಿನ ಪ್ರಕರಣವನ್ನು ಸಹ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವುದು ದುರಾದೃಷ್ಟಕರ. ನಾವು ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸಿ, ಕಾನೂನು ಪ್ರಕಾರವೇ ಆರೋಪಿಗಳಿಗೆ ಶಿಕ್ಷೆಯಾಗಲು ಪ್ರಯತ್ನಿಸುತ್ತಿದ್ದೇವೆ. ಆದರೆ ಕೆಲವರು ಇದರಲ್ಲೂ ಲಾಭ ನಷ್ಟದ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ನಿರಾಣಿ ಅಸಮಾಧಾನ ವ್ಯಕ್ತಪಡಿಸಿದರು.

Kalaburagi Dalit Murder Case: Culprits Will Not Be Spared, Assures Minister Nirani

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು "ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಪೋಲೀಸರು ಕಾನೂನಿನ ರೀತಿಯಲ್ಲಿಯೇ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದು ಕಠಿಣ ಕ್ರಮ ಜರುಗಿಸಲಾಗುತ್ತದೆ" ಎಂದಿದ್ದಾರೆ."ಕಾಂಗ್ರೆಸ್‌ ಮತ್ತು ಜೆಡಿಎಸ್ ಇದನ್ನೇ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿರುವುದು ವಿಷಾದನೀಯ. ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದು ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಲಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ನೋವು ತಿಂದ ಕುಟುಂಬಕ್ಕೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತದೆ" ಎಂದಿದ್ದಾರೆ.

Recommended Video

IPL ಫೈನಲ್ ಮ್ಯಾಚ್ ಗೂ ಮುನ್ನ ಸ್ಟೇಡಿಯಂನಲ್ಲಿ ಮಾರ್ದನಿಸಿತು KGF ನ ವಯಲೆನ್ಸ್ ಡೈಲಾಗ್ | OneIndia Kannada

(ಒನ್ಇಂಡಿಯಾ ಸುದ್ದಿ)

English summary
Minister Murugesh Nirani has assured that police will catch accused in the murder of dalit in Kalaburagi. The murdered youth was loving a muslim girl and due to that reason he was hacked to death by the girl's family.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X