ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕ

|
Google Oneindia Kannada News

ಬೆಂಗಳೂರು, ಜುಲೈ 31: ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕವಾಗಿದ್ದಾರೆ.

ಆಗಸ್ಟ್ 2 ಕ್ಕೆ ಭಾಸ್ಕರ್ ರಾವ್ ಅವರ ಒಂದು ವರ್ಷ ಅವಧಿ ಮುಗಿಯುವುದರಿಂದ ಕಮಲ್ ಪಂತ್ಅವರನ್ನು ನೂತನ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಕೆಲವೇ ದಿನಗಳಲ್ಲಿ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಎತ್ತಂಗಡಿ?ಕೆಲವೇ ದಿನಗಳಲ್ಲಿ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಎತ್ತಂಗಡಿ?

ಭಾಸ್ಕರ್ ರಾವ್ ಅವರ ಬ್ಯಾಚ್ ಮೇಟ್ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ರಾಜ್ಯ ಗುಪ್ತಚರ ಇಲಾಖೆ ಹೆಚ್ಚುವರಿ ಎಡಿಜಿಪಿ ಕಮಲ್ ಪಂತ್ ನೇಮಕ ಮಾಡಿದ್ದಾರೆ ಭಾಸ್ಕರ್ ರಾವ್ ಮತ್ತು ಪಂಥ್ 1990 ರ ಐಪಿಎಸ್ ಬ್ಯಾಚ್ ನವರು.

Kamal Pant Replaced Bhaskar Rao As Bengaluru New Police Commissioner

ನಗರ ಪೊಲೀಸ್ ಆಯುಕ್ತ ಹುದ್ದೆಗೆ ಮೂವರು ಅಧಿಕಾರಿಗಳು ಮುಂಚೂಣಿಯಲ್ಲಿದ್ದರು, ಪಂತ್ ಅವರ ಜೊತೆಗೆ ಸುನೀಲ್ ಅಗರ್ ವಾಲ್ ಮತ್ತು ಅಮೃತ್ ಪೌಲ್ ಕೂಡ ಆಕಾಂಕ್ಷಿಗಳಾಗಿದ್ದರು.

ಎಡಿಜಿಪಿ ಬಿ. ದಯಾನಂದ ಅವರನ್ನು ಗುಪ್ತದಳಕ್ಕೆ ವರ್ಗಾಯಿಸಲಾಗಿದೆ. ರಾಜ್ಯ ಗುಪ್ತಚರ ಇಲಾಖೆ ಎಡಿಜಿಪಿ ಆಗಿದ್ದ ಕಮಲ್ ಪಂತ್ ಹೆಸರು ಕಳೆದ ಬಾರಿಯೇ ಕಮಿಷನರ್ ಹುದ್ದೆ ರೇಸ್‌ನಲ್ಲಿ ಚಾಲ್ತಿಯಲ್ಲಿತ್ತು.

ಆದರೆ ಒಂದು ವರ್ಷದ ಅವಧಿಗಾಗಿ ಭಾಸ್ಕರ್ ರಾವ್ ಅವರನ್ನು ನೇಮಲಕ ಮಾಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಯಸಿದ್ದರು. ಮತ್ತು ಒಂದು ವರ್ಷದ ಬಳಿಕ ಕಮಲ್ ಪಂತ್ ಅವರಿಗೆ ಅವಕಾಶ ನೀಡುವ ಬಗ್ಗೆಯೂ ಭರವಸೆ ನೀಡಿದ್ದರು.

ಅಮೃತ್ ಪೌಲ್ ಅವರನ್ನು ಇದೇ ವರ್ಷದ ಜನವರಿ ಅಂತ್ಯದಲ್ಲಿ ಎಡಿಜಿಪಿಯಾಗಿ ಬಡ್ತಿ ನೀಡಲಾಗಿತ್ತು.

English summary
The Bengaluru Ciry has a new Police Commissioner Kamal Pant Replacing Bhaskar Rao.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X