ಬೆಂಗಳೂರು: ಮತದಾನ, ಮತಎಣಿಕೆ ದಿನ ಮದ್ಯ ಮಾರಾಟ ಇಲ್ಲ
ಬೆಂಗಳೂರು, ಮೇ.2: ಮದ್ಯ ಪ್ರಿಯರಿಗಿದು ಕಹಿ ಸುದ್ದಿ. ಯಾಕೆಂದರೆ, ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಬೆಂಗಳೂರು ನಗರದಲ್ಲಿ ಕೆಲವು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಮೇ.12ರಂದು ಮತದಾನ ನಡೆಯುವ ಹಿನ್ನೆಲೆಯಲ್ಲಿ ಮತದಾನಕ್ಕಿಂತ ಎರಡು ದಿನ ಹಿಂದೆ ಹಾಗೂ ಮತೆಣಿಕೆಯ ದಿನ ಸೇರಿದಂತೆ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಮತದಾನ ವೇಳೆ ಮದ್ಯ ಸೇವನೆ ಮಾಡಿಕೊಂಡು ಬಂದು, ದೊಂಬಿ, ಗಲಾಟೆ ಎಬ್ಬಿಸುವವರ ಸಂಖ್ಯೆಗೇನು ಕಡಿಮೆ ಇಲ್ಲ ಹಾಗಾಗಿ ಚುನಾವಣೆ ಹಾಗೂ ಮತ ಎಣಿಕೆ ದಿನ ಮದ್ಯ ಮಾರಾಟ ನಿಷೇಧಿಸಲು ಆಲೋಚಿಸಲಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ.10ರ ಸಂಜೆ 5ರಿಂದ ಮಧ್ಯರಾತ್ರಿ 12 ರವರೆಗೆ ಹಾಗೂ ಮೇ 15ರ ಬೆಳಗ್ಗೆ 6ರಿಂದ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.
ಕಿಡಿಗೇಡಿಗಳು, ಆಗಂತುಕರು ಚುನಾವಣೆ ಮೇಲೆ ಪ್ರಭಾವ ಬೀರುವ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.












Click it and Unblock the Notifications