ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕ ಬಂದ್; ಕರವೇ ಪ್ರವೀಣ ಶೆಟ್ಟಿಗೆ ಗೃಹ ಬಂಧನ

|
Google Oneindia Kannada News

ಬೆಂಗಳೂರು, ಫೆಬ್ರವರಿ 13; ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕನ್ನಡ ಸಂಘಟನೆಗಳ ಕೆಲ ಮುಖಂಡರನ್ನು ಬೆಂಗಳೂರು ಪೊಲೀಸರು ಗೃಹ ಬಂಧನದಲ್ಲಿರಿಸಿದ್ದಾರೆ.

ಆರ್ ಟಿ ನಗರದಲ್ಲಿರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ ಶೆಟ್ಟಿ ಅವರನ್ನು ಮನೆಯಿಂದ ಹೊರಗೆ ಬಿಡದೇ ಪೊಲೀಸರು ಮನೆ ಮುಂದೆ ಪಹರೆ ಹಾಕಿದ್ದಾರೆ. ಸಂಜೆವರೆಗೂ ಪ್ರವೀಣ್ ಶೆಟ್ಟಿ ಮನೆಗೆ ಪೊಲೀಸರು ಪಹರೆ ಇರಲಿದ್ದಾರೆ ಎಂದು ತಿಳಿದು ಬಂದಿದೆ.

Karnataka Bandh LIVE: ಕನ್ನಡಿಗರಿಗೆ ಉದ್ಯೋಗ ನೀಡಲು ರಾಜ್ಯ ಸರ್ಕಾರ ಬದ್ದKarnataka Bandh LIVE: ಕನ್ನಡಿಗರಿಗೆ ಉದ್ಯೋಗ ನೀಡಲು ರಾಜ್ಯ ಸರ್ಕಾರ ಬದ್ದ

ರಾಜ್ಯಾದ್ಯಂತ ಕರ್ನಾಟಕ ಬಂದ್‌ ಜನಜೀವನದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಎಂದಿನಂತೆ ಶಾಲಾ ಕಾಲೇಜುಗಳು ಪ್ರಾರಂಭವಾಗಿವೆ. ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಕೆಲ ಕನ್ನಡಪರ ಹೋರಾಟಗಾರರು ಬಂದ್ ಆಚರಿಸುವುದು ಬೇಡ ಎಂದು ಬಿಎಂಟಿಸಿ ಸಿಬ್ಬಂದಿಗೆ ಹೂವು ನೀಡಿ ಕೆಲಸಕ್ಕೆ ಬಂದಿರುವುದಕ್ಕೆ ಧನ್ಯವಾದ ಹೇಳುತ್ತಿದ್ದಾರೆ.

Kannada Activists Home Arrest By Bengaluru Police

ಇತ್ತ ಕನ್ನಡಿಗರಿಗೆ ಉದ್ಯೋಗಗಳಲ್ಲಿ ಮೀಸಲು ನೀಡಲು ಬದ್ದವಿದೆ ಎಂದು ಗೃಹ ಸಚಿವ ಬೊಮ್ಮಾಯಿ ಹೇಳಿದ್ದಾರೆ. ಹೋರಾಟಗಾರರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಸಂಘಟನೆಗಳು ಮಹಿಷಿ ವರದಿಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿವೆ.

English summary
Kannada Activists Home Arrest By Bengaluru Police, Karnataka bandh going on bengaluru. but no response from public.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X