ಲಿಂಫೋಮಾ ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಕಾಶಿನಾಥ್
Recommended Video

ಕಾಶೀನಾಥ್, ಕನ್ನಡದ ಹಿರಿಯ ನಟ ನಿರ್ದೇಶಕ ವಿಧಿವಶ | Oneindia Kannada
ಬೆಂಗಳೂರು, ಜನವರಿ 18: ಕಳೆದ 7 ತಿಂಗಳಿನಿಂದ ಚಾಮರಾಜಪೇಟೆಯ ಶಂಕರ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿದ್ದ ಕಾಶಿನಾಥ್ ಅವರು ಇಂದು(ಜ.18) ಬೆಳಿಗ್ಗೆ 7.45 ಕ್ಕೆ ನಿಧನರಾಗಿದ್ದಾರೆ ಎಂದು ಶಂಕರ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಲಿಂಫೊಮಾ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಚೆನ್ನಾಗಿಯೇ ಸ್ಪಂದಿಸುತ್ತಿದ್ದರಾದರೂ, ಇಂದು ಬೆಳಿಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ನಟರಾದ ಉಪೇಂದ್ರ, ಶಿವರಾಜ್ ಕುಮಾರ್ ಸೇರಿದಂತೆ ಚಿತ್ರರಂಗದ ಗಣ್ಯರು ಮೃತರ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಎನ್ ಆರ್ ಕಾಲೊನಿಯ ಎಪಿಎಸ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿಯ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.












Click it and Unblock the Notifications