Lakshman Passed Away : ಕನ್ನಡದ ಹಿರಿಯ ನಟ ಲಕ್ಷ್ಮಣ್ ಇನ್ನಿಲ್ಲ
ಬೆಂಗಳೂರು ಜನವರಿ 23: ಸ್ಯಾಂಡಲ್‌ವುಡ್‌ನ ಹೆಸರಾಂತ ನಟ ಲಕ್ಷ್ಮಣ್ ಹೃದಯಾಘಾತದಿಂದಾಗಿ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಕೆಲ ವರ್ಷಗಳಿಂದ ಬಳಲುತ್ತಿದ್ದ ಲಕ್ಷ್ಮಣ್ ಅವರು ಆಗಾಗ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದರು. ಇಂದು ಬೆಳಿಗ್ಗೆ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲೇ ಲಕ್ಷ್ಮಣ ಕೊನೆಯುಸಿರು ಎಳೆದಿದ್ದಾರೆ. ಮೂಡಲಪಾಳ್ಯದ ಅವರ ನಿವಾಸದಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ಇಂದೇ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸುವ ಮೂಲಕ ಲಕ್ಷ್ಮಣ್ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದಾರೆ. ಯಜಮಾನ, ಮಲ್ಲ, ಸೂರ್ಯವಂಶ ಹೀಗೆ ಹಲವಾರು ಸಿನಿಮಾಗಳಲ್ಲಿ ಖಳನಟನಾಗಿ ಲಕ್ಷ್ಮಣ್ ಪಾತ್ರ ಮಾಡಿದ್ದಾರೆ. ಮುನ್ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸುವ ಮೂಲಕ ಅಸಂಖ್ಯಾತ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಡಾ.ವಿಷ್ಣುವರ್ಧನ್, ರವಿಚಂದ್ರನ್, ಡಾ.ರಾಜ್ ಕುಮಾರ್, ಶಿವರಾಜ್ ಕುಮಾರ್, ಡಾ. ಅಂಬರೀಶ್ ಹೀಗೆ ಹಲವಾರು ದಿಗ್ಗಜ ನಟರೊಂದಿಗೆ ಪರದೆ ಹಂಚಿಕೊಂಡಿದ್ದಾರೆ.

ಲಕ್ಷ್ಮಣ್ ಅವರ ಕುಟುಂಬದಲ್ಲಿ ತಂದೆ ಹಾಗೂ ಸಹೋದರ ಪೊಲೀಸ್ ಆಗಿದ್ದರಿಂದ ಅವರಿಗೂ ಸೈನ್ಯ ಸೇರುವ ಆಸೆ ಇತ್ತು. ಆದರೆ ತಾಯಿ ಒಪ್ಪದ ಕಾರಣ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ರಂಗಭೂಮಿಯಲ್ಲಿ ಕೆಲ ವರ್ಷಗಳ ಕಾಲ ನಟರಾಗಿ ಕೆಲಸ ಮಾಡಿದ ಇವರು ಆರಂಭದಲ್ಲಿ ಫ್ಯಾಕ್ಟರಿಯಲ್ಲೂ ಕೆಲಸ ಮಾಡಿದ್ದಾರೆ. ಬಳಿಕ ಸಿನಿಮಾ ರಂಗದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸುವ ಅವಕಾಶವನ್ನು ಪಡೆದರು.












Click it and Unblock the Notifications