Breaking news: ಹಾಸ್ಯ ನಟಿ ಸುನೇತ್ರಾಗೆ ಅಪಘಾತ, ಆಸ್ಪತ್ರೆಗೆ ದಾಖಲು
ಬೆಂಗಳೂರು, ಮೇ 8: ಜನಪ್ರಿಯ ನಟಿ, ಡಬ್ಬಿಂಗ್ ಕಲಾವಿದೆ ಸುನೇತ್ರಾ ಪಂಡಿತ್ ಚಲಿಸುತ್ತಿದ್ದ ದ್ವಿಚಕ್ರ ವಾಹನ ಅಪಘಾಕ್ಕೀಡಾಗಿದೆ. ಶೂಟಿಂಗ್ ಮುಗಿಸಿ ಮನೆಗೆ ತೆರಳುತ್ತಿದ್ದ ನಟಿ ಬೈಕ್‌ಗೆ ಅಪಘಾತವಾಗಿದ್ದು, ನಟಿ ತಲೆಗೆ ಪೆಟ್ಟು ಬಿದ್ದಿದೆ. ಆದರೆ, ತಲೆಗೆ ಹೆಲ್ಮೆಟ್ ಹಾಕಿದ್ದರಿಂದ ಆಪಾಯದಿಂದ ಪಾರಾಗಿದ್ದಾರೆ.
ಬಸವನಗುಡಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ 12: 30ರ ಸುಮಾರಿಗೆ ಈ ಘಟನೆ ನಡೆದಿದ್ದು, ರಸ್ತೆ ಹಂಪ್ ದಾಟುವಾಗ ಬೈಕ್‌ನಿಂದ ಆಯತಪ್ಪಿ ಬಿದ್ದು ಸುನೇತ್ರಾ ಗಾಯಗೊಂಡಿದ್ದಾರೆ.
ಎನ್ ಆರ್ ಕಾಲೋನಿಯ 9ನೇ ಮುಖ್ಯ ರಸ್ತೆಯಲ್ಲಿ ಹಾಸ್ಯ ನಟಿ ಸುನೇತ್ರಾ (40) ತಮ್ಮ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದಾಗ ರಸ್ತೆ ಮೂಲೆಯಲ್ಲಿ ಹಂಪ್ ಎದುರಾಗಿದೆ. ಹಂಪ್ ಹಾರಿಸಿದ ಬಳಿಕ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಸುನೇತ್ರಾ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

ಸುನೇತ್ರಾರನ್ನು ತಕ್ಷಣವೇ ರಕ್ಷಿಸಿದ ಸ್ಥಳೀಯರು ಸಮೀಪದ ಬಿಎಂಎಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಅವೈಜ್ಞಾನಿಕ ಹಂಪ್ ಕಾಣದೆ ಬೈಕ್ ಜಂಪ್ ಆಗಿದ್ದರಿಂದ ಈ ದುರ್ಘಟನೆ ನಡೆದಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ಅಪಾಯದಿಂದ ಪಾರು
ನರಸಿಂಹರಾಜ ಕಾಲೋನಿಯ 9ನೇ ಮುಖ್ಯರಸ್ತೆಯಲ್ಲಿರುವ ಹಂಪ್ ಹಾರಿಸಿ, ಆಯತಪ್ಪಿ ಬಿದ್ದ ನಟಿ ಸುನೇತ್ರಾ ತಲೆ ಪೆಟ್ಟಾದರೂ ಬಚಾವಾಗಿದ್ದಾರೆ. ಹೆಲ್ಮೆಟ್ ಹಾಕಿದ್ದ ಪರಿಣಾಮ ತಲೆಗೆ ಸ್ವಲ್ಪ ಪೆಟ್ಟಾಗಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ನಟಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಆಘಾತದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಅವೈಜ್ಞಾನಿಕ ಹಂಪ್, ಮಣ್ಣು ಮುಚ್ಚಿದ ರಸ್ತೆಗುಂಡಿನಿಂದ ವಾಹನ ನಿಯಂತ್ರಣ ತಪ್ಪಿರುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ, ರಸ್ತೆ ದುರಸ್ತಿ ಕಾಮಗಾರಿಯೂ ಕುಂಠಿತವಾಗಿದ್ದು, ರಸ್ತೆ ಗುಂಡಿ ಮುಚ್ಚುವ ಕಾರ್ಯ ನಡೆದಿದ್ದರೂ, ಹಂಪ್ ಬಗ್ಗೆ ಬಿಬಿಎಂಪಿ ಯಾವುದೇ ಕ್ರಮ ಜರುಗಿಸಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
Recommended Video
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications