• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹಿರಿಯ ಸಾಹಿತಿ ಪ್ರೊ. ಎಲ್ ಎಸ್ ಶೇಷಗಿರಿರಾವ್ ಇನ್ನಿಲ್ಲ

|

ಬೆಂಗಳೂರು, ಡಿಸೆಂಬರ್ 20; ಕನ್ನಡದ ಹಿರಿಯ ಸಾಹಿತಿ ಪ್ರೊ.ಎಲ್ ಎಸ್ ಶೇಷಗಿರಿರಾವ್ ಅವರು ಶುಕ್ರವಾರ ಬೆಂಗಳೂರಿನಲ್ಲಿ ನಿಧನರಾದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 94 ವರ್ಷ ವಯಸ್ಸಾಗಿತ್ತು.

1925 ಫೆಬ್ರವರಿ 16 ರಂದು ಧಾರವಾಡ ಜಿಲ್ಲೆಯಲ್ಲಿ ಜನಿಸಿದ್ದ ಅವರು, ಸೆಂಟ್ರಲ್ ಕಾಲೇಜಿನಲ್ಲಿ ಪದವಿ ಪಡೆದು, ಬೆಂಗಳೂರಿನ ಇಮಟರಮೀಡಿಯಟ್ ಕಾಲೇಜಿನಲ್ಲಿ ಇಂಗ್ಲೀಷ್ ಪ್ರಾಧ್ಯಾಪಕರಾಗಿದ್ದರು. ಕಾದಂಬರಿ ವಿಮರ್ಶೆ ಮೂಲಕ ಕನ್ನಡ ಸಾರಸ್ವತ ಲೋಕದಲ್ಲಿ ಗುರುತಿಸಿಕೊಂಡಿದ್ದ ಅವರು, ಅನೇಕ ಬಗೆಯ ಸಾಹಿತ್ಯ ಕೃಷಿ ಮಾಡಿ ಸೈ ಎನಿಸಿಕೊಂಡಿದ್ದರು.

Kannada Author L S Sheshagirirao Is No More

ಉಡುಪಿಯಲ್ಲಿ ನಡೆದಿದ್ದ 74 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದ ಎಲ್ ಎಸ್ ಶೇಷಗಿರರಾವ್ ಅವರಿಗೆ, ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ವರ್ಧಮಾನ ಪ್ರಶಸ್ತಿ, ಬಿ ಎಂ ಶ್ರೀ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಸಂದಿವೆ. ಮೃತರ ನಿಧನಕ್ಕೆ ಸಾಹಿತ್ಯಲೋಕ ಕಂಬನಿ ಮಿಡಿದಿದೆ.

English summary
Kannada Author L S Sheshagirirao Is No More In Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X