Get Updates
Get notified of breaking news, exclusive insights, and must-see stories!

ಜ.27ಕ್ಕೆ ಕನ್ನಡಾಂಬೆ ಭುವನೇಶ್ವರಿ ಕಂಚಿನ‌ ಪ್ರತಿಮೆ ಲೋಕಾರ್ಪಣೆ: ಬೆಂಗಳೂರು 4 ದಿಕ್ಕುಗಳಿಂದಲೂ ಮೆರವಣಿಗೆ

ಬೆಂಗಳೂರು, ಜನವರಿ 24: ಕನ್ನಡ ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಬರೋಬ್ಬರಿ 23 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಭುವನೇಶ್ವರಿ ತಾಯಿ ಕಂಚಿನ ಪ್ರತಿಮೆ ಲೋಕಾರ್ಪಣೆಗೆ ದಿನಾಂಕ್ ಫಿಕ್ಸ್ ಆಗಿದೆ. ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಜ.27ರಿಂದ ನಿತ್ಯ ಆರ್ಚನೆ ನೆರವೇರಲಿದೆ. ಶಕ್ತಿಸೌಧ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ ಪ್ರತಿಮೆ ಅಂದು ಅನಾವರಣಗೊಳ್ಳಲಿದೆ. ಅಂದು ವಿವಿಧ ಕಾರ್ಯಕ್ರಮಗಳು, ಬೃಹತ್ ಮೆರವಣಿಗೆಗಳು ಜರುಗಲಿವೆ.

ಶುಕ್ರವಾರ ನಗರದ ಶಕ್ತಿ ಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅಧಿಕೃತ ಮಾಹಿತಿ ನೀಡಿದರು. ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ 'ಹೆಸರಾಯಿತು ಕರ್ನಾಟಕ ಹಾಗೂ ಉಸಿರಾಗಲಿ' ಕನ್ನಡ ಎಂಬ ಶೀರ್ಷಿಕೆಯಡಿ ವರ್ಷವಿಡೀ ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಅದರ ಮುಂದಿನ ಭಾಗವಾಗಿ ಕನ್ನಡಾಂಬೆಯ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿದೆ.

Kannada Bhuvaneshwari 25 Foot Bronze Statue Will Unveil on Jan 27th At Vidhana Soudha

ಸದ್ಯ ಕನ್ನಡಾಂಬೆಯ ಪ್ರತಿಮೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಜ.27ರಂದು ಸಂಜೆ 4.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಈ ಹಬ್ಬದ ವಾತಾವರಣದಲ್ಲಿ ಸಾರ್ವಜನಿಕರು ಹಾಗೂ ಕನ್ನಡಪರ ಸಂಘಟನೆಗಳು ಪಾಲ್ಗೊಳ್ಳಬೇಕು ಎಂದು ಸಚಿವ ಶಿವರಾಜ್ ತಂಗಡಗಿ ಅವರು ಕರೆ ನೀಡಿದ್ದಾರೆ.

ಸಾರಿಗೆ ಬಸ್ ನಲ್ಲಿ ಹಾರಾಡಲಿದೆ ಕನ್ನಡದ ಧ್ವಜ

ಸ್ಥಳೀಯ ಬಿಬಿಎಂಪಿಯನ್ನು ಮೆರವಣಿಗೆಗೆ ಬಳಸಿಕೊಳ್ಳಲಾಗಿದ್ದು, ಅಂದು ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಬಸ್ ಗಳನ್ನು ಕನ್ನಡದ ಧ್ವಜ ಹಾರಾಡಲಿದೆ. ಉಚಿತವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡದ ಧ್ವಜವನ್ನು ವಿತರಿಸಲಾಗುವುದು ಎಂದರು.‌

ಹೊಯ್ಸಳ ಶೈಲೀಯ ಪೀಠ ನಿರ್ಮಾಣ

ನಾಡದೇವಿ ಪ್ರತಿಮೆಯ ಹಿಂದೆ ಕರ್ನಾಟಕ ನಕ್ಷೆ ಹಾಗೂ ಉಬ್ಬು ಶಿಲ್ಪ ಇರಲಿದೆ‌. ಮುಂಭಾಗದಲ್ಲಿ‌ ಭೌಗೋಳಿಕ ನಕ್ಷೆ ಇದ್ದರೆ, ಹಿಂಬದಿಯಲ್ಲಿ ನಾಡಗೀತೆಯನ್ನು ಕೆತ್ತಲಾಗಿದೆ. ಕರ್ನಾಟಕದ ಪ್ರಸಿದ್ಧ ಶಿಲ್ಪಕಲಾ ಶೈಲಿಗಳಾದ ಹೊಯ್ಸಳ, ಚಾಲುಕ್ಯ ಕದಂಬ ಹಾಗೂ ಆಧುನೀಕ ನೈಜ ಶಿಲ್ಪಗಳ ಶೈಲಿಗಳನ್ನು ಅಳವಡಿಸಿ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಇದರಲ್ಲಿ ರಾಜಲಾಂಛನಗಳಾದ ಹೊಯ್ಸಳ ಲಾಂಛನ, ವೈಜಯಜಯಂತಿ ಮಾಲೆ, ಕಂಠಿಹಾರ, ಗಂಡ ಭೇರುಂಡ ಇರಲಿದೆ. ನಾವು ಅದುಕೊಂಡಕ್ಕಿಂತ ಚೆನ್ನಾಗಿ ಪ್ರತಿಮೆ ಮೂಡಿ ಬಂದಿದೆ ಎಂದು ಸಚಿವರು ಹೇಳಿದರು.

ಪ್ರತಿಮೆಯ ಸುತ್ತಲೂ ಉದ್ಯಾನವನ, ಆವರಣದ ಸುತ್ತಲೂ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಪಶ್ಚಿಮದ ದ್ವಾರಕ್ಕೆ ಇರುವ ನಾಡದೇವಿ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ. ಇದಕ್ಕೆಂದೇ ಪಶ್ಚಿಮಕ್ಕೆ ಪ್ರತ್ಯೇಕ ಗೇಟ್ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆಯಿಂದ ಸಂಜೆವರೆಗೆ ಸಾರ್ವಜನಿಕರ ಭೇಟಿಗೆ ಅವಕಾಶ ಇರಲಿದೆ ಎಂದರು.

ವಿಧಾನಸೌಧಕ್ಕೆ 4 ದಿಕ್ಕುಗಳಿಂದ ಮೆರವಣಿಗೆ ಮೂಲಕ ಆಗಮನ

ಪ್ರತಿಮೆ ಅನಾವರಣದ ಕಾರ್ಯಕ್ರಮದ ಅಂಗವಾಗಿ ಬೆಂಗಳೂರಿನ 4 ದಿಕ್ಕುಗಳಿಂದ ಮೆರವಣಿಗೆ ಆಗಮಿಸಲಿದ್ದು, ಜ್ಞಾನಪೀಠ ಪುರಸ್ಕೃತರು ಹಾಗೂ ನಾಡಿನ ಹೆಸರಾಂತ ಮಹನೀಯರ ಫೋಟೋಗಳನ್ನು ಇಡಲಾದ ಪಲ್ಲಕ್ಕಿ ಮೆರವಣಿಗೆಯಲ್ಲಿ ಸಾಗಲಿದೆ. ಪೂರ್ವ ದಿಕ್ಕಿನಿಂದ (ಇಂದಿರಾ ನಗರ ): ಪಂಪ, ರನ್ನ, ಪೊನ್ನ, ಜನ್ನ, ಸರ್‌.ಎಂ. ವಿಶ್ವೇಶ್ವರಯ್ಯ, ಸರ್‌ ಸಿ.ವಿ. ರಾಮನ್, ಸಿ.ಎನ್‌.ಆರ್‌. ರಾವ್, ಭೀಮ್‌ಸೇನ್‌ ಜೋಷಿ, ಡಾ. ರಾಜ್‌ಕುಮಾರ್‌, ಎಸ್.‌ ನಿಜಲಿಂಗಪ್ಪ, ಶ್ರೀ ಶಿವಕುಮಾರ ಸ್ವಾಮೀಜಿ‌, ದೇ. ಜವರೇಗೌಡ, ಡಾ. ವಿರೇಂದ್ರ ಹೆಗಡೆ, ಡಾ. ಪುನೀತ್‌ ರಾಜ್‌ಕುಮಾರ್ ಅವರ ಫೋಟೋವಿರುವ ಪಲ್ಲಕ್ಕಿ ಮೆರವಣಿಗೆಯಲ್ಲಿ ಸಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+