Property Notice: ಖಾಸಗಿ ಬಸ್‌ಗಳ ಮೇಲೆ, ಬಿಬಿಎಂಪಿ ತೆರಿಗೆ ನೋಟಿಸ್‌ನಲ್ಲಿ ಕನ್ನಡ ಕಡ್ಡಾಯ, ಇಲ್ಲದಿದ್ದರೆ ಕ್ರಮ

ಬೆಂಗಳೂರು, ಆಗಸ್ಟ್ 18: ಕರ್ನಾಟಕ ರಾಜ್ಯದ ಒಳಗೆ ಸಂಚರಿಸುವ ಸ್ಥಳೀಯರ ಮಾಲೀಕತ್ವದ ಅನೇಕ ಬಸ್ಸುಗಳ ಮೇಲೆ ಇರುವ ಫಲಕಗಳು ಹಾಗೂ ಬಸ್ಸುಗಳ ಹೆಸರುಗಳಲ್ಲಿ ಕನ್ನಡ ಭಾಷೆಯ ಅಳವಡಿಕೆ ಸಂಪೂರ್ಣವಾಗಿ ಕಾಣೆಯಾಗಿದೆ. ಸಾರಿಗೆ ಇಲಾಖೆ ಕೂಡಲೇ ಕ್ರಮಕ್ಕೆ ಮುಂದಾಗಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಸಾರಿಗೆ ಆಯುಕ್ತರಿಗೆ ಸೂಚಿಸಿದ್ದಾರೆ.

ಈ ಕುರಿತಂತೆ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇಲಾಖೆಯ ಆಯುಕ್ತರಿಗೆ ಬಿಳಿಮಲೆ ಅವರು ಪತ್ರ ಬರೆದಿದ್ದಾರೆ. ಖಾಸಗಿ ಸಾರಿಗೆ ಸಂಸ್ಥೆಗಳು ಅನಿಯಂತ್ರಿತವಾಗಿ ಕನ್ನಡವನ್ನು ಕಡೆಗಣಿಸುವುದು ಸಾಮಾಜಿಕವಾಗಿ ತಪ್ಪು ಸಂದೇಶವನ್ನು ರವಾನಿಸುತ್ತದೆಯಷ್ಟೇ ಅಲ್ಲ. ಸಾರಿಗೆ ಇಲಾಖೆ ಇಂತಹ ಕಾನೂನು ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸದೇ ಇರುವ ಅಂಶವು ವೇದ್ಯವಾಗುತ್ತದೆ ಎಂದು ಅವರು ಅಸಮಾಧಾನ ಹೊರ ಹಾಕಿದ್ದಾರೆ.

Kannada Development Authority Demands Mandatory Use of Kannada on Private Buses and BBMP Notices

ಖಾಸಗಿ ವಾಹನಗಳ ಸಂಚಾರಕ್ಕೆ ಪರವಾನಗಿ ನೀಡುವ ಅಥವಾ ನವೀಕರಣ ಮಾಡುವ ಸಂದರ್ಭದಲ್ಲಿ ಇದನ್ನು ಹೆಚ್ಚಿನ ಮುತುವರ್ಜಿಯಿಂದ ಇಲಾಖೆ ಗಮನ ವಹಿಸಬೇಕಾಗುತ್ತದೆ. ಖಾಸಗಿ ಬಸ್‌ಗಳ ಮೇಲೆ ಕನ್ನಡ ಇಲ್ಲದಿರುವುದು ಗಂಭೀರವಾಗಿ ಪರಿಗಣಿಸಿದೆ. ಕೂಡಲೇ ಈ ವಿಷಯವನ್ನು ಸಾರಿಗೆ ಇಲಾಖೆ ಅಭಿಯಾನದ ಮಾದರಿಯಲ್ಲಿ ಕೈಗೆತ್ತಿಕೊಳ್ಳಬೇಕು. ರಾಜ್ಯದಲ್ಲಿ ವ್ಯವಹರಿಸುವ ಖಾಸಗಿ ಸಾರಿಗೆ ಸಂಸ್ಥೆಗಳು ತಮ್ಮ ವಾಹನಗಳ ಮೇಲೆ ಕನ್ನಡ ಭಾಷೆಯಲ್ಲಿ ಫಲಕಗಳು ಮತ್ತು ಹೆಸರುಗಳನ್ನು ಅಳವಡಿಸುವಲ್ಲಿ ಕೂಡಲೇ ಕ್ರಮವಹಿಸಲು ನಿರ್ದೇಶನ ನೀಡಬೇಕೆಂದು ಅವರ ಪತ್ರದಲ್ಲಿ ಸೂಚಿಸಿದ್ದಾರೆ. ನಿಯಮ ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕೆಂದು ಅವರು ನಿರ್ದೇಶಿಸಿದ್ದಾರೆ.

ಆಂಗ್ಲ ಭಾಷೆಯಲ್ಲಿ ಬಿಬಿಎಂಪಿ ಮಾಹಿತಿ ಖಂಡನೀಯ!

ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಪಾವತಿಯ ಕುರಿತಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ಸಾರ್ವಜನಿಕರಿಗೆ ನೀಡುತ್ತಿರುವ ನೋಟಿಸ್ ಗಳಿಗೆ ಮೇಲ್ಮನವಿ ಸಲ್ಲಿಸಲಾಗುತ್ತದೆ. ಈ ವಿಧಾನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚುರಪಡಿಸಿರುವ ವಿಡಿಯೋ ಕೇವಲ ಆಂಗ್ಲ ಭಾಷೆಯಲ್ಲಿದೆ. ಕರ್ನಾಟಕದಲ್ಲಿ ನೋಟಿಸ್, ಮಾಹಿತಿಗಳು ಕನ್ನಡದಲ್ಲಿ ಇಲ್ಲಿರುವುದನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಖಂಡಿಸಿದ್ದಾರೆ.

ಈ ಸಂಬಂದ ಬಿಳಿಮಲೆ ಅವರು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸರ್ಕಾರದ ಸ್ಥಳೀಯ ಸಂಸ್ಥೆಯಾಗಿ ಬಿಬಿಎಂಪಿ ತನ್ನ ಆಡಳಿತದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆಯನ್ನು ಕಲ್ಪಿಸುವುದು ಪ್ರಧಾನ ಜವಾಬ್ದಾರಿ ಆಗಿದೆ. ಹೀಗಿದ್ದರು ಕೇವಲ ಆಂಗ್ಲ ಭಾಷೆಯಲ್ಲಿ ಮಾಹಿತಿ ಒದಗಿಸುವುದು ಸರಿಯಲ್ಲ. ಈ ನಿರ್ಲಕ್ಷ್ಯತೆಗೆ ಕಾರಣರಾದ ಅಧಿಕಾರಿಗಳ ಮೇಲೆ ಕೂಡಲೇ ಶಿಸ್ತಿನ ಕ್ರಮ ಕೈಗೊಳ್ಳಬೇಕು. ಯಾವುದೇ ಮಾಹಿತಿಗಳನ್ನು ಒದಗಿಸುವ ಸಂದರ್ಭದಲ್ಲಿ ಮೊದಲ ಆದ್ಯತೆ ಕನ್ನಡ ಭಾಷೆಗೆ ಇರಬೇಕೆಂದು ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+